AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2025: ಏಕದಿನ ವಿಶ್ವಕಪ್ ಉದ್ಘಾಟನಾ ಸಮಾರಂಭಕ್ಕೆ ಪಾಕಿಸ್ತಾನ ತಂಡ ಗೈರು

Women's Cricket World Cup 2025: ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್ ಸೆಪ್ಟೆಂಬರ್ 30 ರಿಂದ ಆರಂಭವಾಗುತ್ತಿದೆ. ಪಾಕಿಸ್ತಾನ ಮಹಿಳಾ ತಂಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸದಿರುವುದು ವರದಿಯಾಗಿದೆ. ಭಾರತ-ಪಾಕಿಸ್ತಾನದ ರಾಜಕೀಯ ಉದ್ವಿಗ್ನತೆ ಇದಕ್ಕೆ ಕಾರಣ ಎನ್ನಲಾಗಿದೆ. ಪಾಕಿಸ್ತಾನ ತಂಡದ ಎಲ್ಲಾ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಭಾರತ ಮತ್ತು ಪಾಕಿಸ್ತಾನದ ಪಂದ್ಯ ಅಕ್ಟೋಬರ್ 5 ರಂದು ಕೊಲಂಬೊದಲ್ಲಿ ನಡೆಯಲಿದೆ.

World Cup 2025: ಏಕದಿನ ವಿಶ್ವಕಪ್ ಉದ್ಘಾಟನಾ ಸಮಾರಂಭಕ್ಕೆ ಪಾಕಿಸ್ತಾನ ತಂಡ ಗೈರು
Pak Team
ಪೃಥ್ವಿಶಂಕರ
|

Updated on: Sep 06, 2025 | 4:50 PM

Share

ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳಾ ಏಕದಿನ ವಿಶ್ವಕಪ್ (Women’s World Cup 2025) ಸೆಪ್ಟೆಂಬರ್ 30 ರಿಂದ ಆರಂಭವಾಗಲಿದೆ. ಈ ಪಂದ್ಯಾವಳಿಗೆ ಭಾರತ ಕೂಡ ತಯಾರಿ ನಡೆಸುತ್ತಿದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸುತ್ತಿದ್ದು, ಇದರಲ್ಲಿ ಪಾಕಿಸ್ತಾನ ತಂಡವೂ ಒಂದಾಗಿದೆ. ಈ ಬಾರಿಯ ವಿಶ್ವಕಪ್ ಭಾರತದಲ್ಲಿ ನಡೆಯುತ್ತಿದೆಯಾದರೂ ಪಾಕಿಸ್ತಾನದ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ. ಅದರಂತೆ ವೇಳಾಪಟ್ಟಿಯನ್ನು ಸಹ ಪ್ರಕಟಿಸಲಾಗಿದೆ. ಆದರೆ ಪಂದ್ಯಾವಳಿ ಆರಂಭಕ್ಕೂ ಮುನ್ನ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಪಾಕಿಸ್ತಾನ ಮಹಿಳಾ ತಂಡ ಪಾಲ್ಗೊಳ್ಳುವುದಿಲ್ಲ ಎಂದು ವರದಿಯಾಗಿದೆ.

ಪಾಕ್ ತಂಡ ಭಾಗವಹಿಸದಿರಲು ಕಾರಣವೇನು?

ಮೇಲೆ ಹೇಳಿದಂತೆ ಮಹಿಳಾ ಏಕದಿನ ವಿಶ್ವಕಪ್ ಸೆಪ್ಟೆಂಬರ್ 30 ರಂದು ಆರಂಭವಾಗಲಿದೆ. ಅದೇ ದಿನ ಗುವಾಹಟಿಯ ಡಾ. ಭೂಪೇನ್ ಹಜಾರಿಕಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ಇದರ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಎಲ್ಲಾ ತಂಡಗಳು ಈ ಸಮಾರಂಭದಲ್ಲಿ ಭಾಗವಹಿಸಲಿವೆ, ಆದರೆ ಪಾಕಿಸ್ತಾನ ತಂಡ ಇದಕ್ಕಾಗಿ ಭಾರತಕ್ಕೆ ಬರುವುದಿಲ್ಲ.

ಎಎನ್‌ಐ ವರದಿಗಳ ಪ್ರಕಾರ, ನಾಯಕಿ ಫಾತಿಮಾ ಸನಾ ನೇತೃತ್ವದ ಪಾಕಿಸ್ತಾನ ತಂಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಜಿಯೋ ಸೂಪರ್ ಉಲ್ಲೇಖಿಸಿದೆ. ವರದಿಗಳ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಯೇ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಈ ಬಗ್ಗೆ ಇನ್ನೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಶ್ರೀಲಂಕಾದಲ್ಲಿ ಪಾಕ್ ಪಂದ್ಯಗಳು

ಈ ಬಾರಿಯ ಮಹಿಳಾ ಏಕದಿನ ವಿಶ್ವಕಪ್ ಅನ್ನು ಭಾರತ ಆಯೋಜಿಸುತ್ತಿದೆ. ಇದರ ಹೊರತಾಗಿಯೂ, ಪಾಕಿಸ್ತಾನ ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಬಿಸಿಸಿಐ ಮತ್ತು ಪಿಸಿಬಿ ನಡುವೆ ಈ ಬಗ್ಗೆ ಒಪ್ಪಂದವಾಗಿದ್ದು ಇದರ ಪ್ರಕಾರ, ಮುಂದಿನ ಮೂರು ವರ್ಷಗಳ ಕಾಲ ಎರಡೂ ತಂಡಗಳು ಪರಸ್ಪರರ ದೇಶದಲ್ಲಿ ಯಾವುದೇ ಪಂದ್ಯಗಳನ್ನು ಆಡುವುದಿಲ್ಲ.

ಅದರಂತೆ ಪಾಕಿಸ್ತಾನ ಆಯೋಜಿಸಿದ್ದ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಿತ್ತು. ಅದೇ ರೀತಿ, ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ, ಪಾಕಿಸ್ತಾನ ಮಹಿಳಾ ತಂಡವು ತನ್ನ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದ ಕೊಲಂಬೊದಲ್ಲಿ ಆಡಲಿದೆ. ಈ ಪಂದ್ಯಾವಳಿಯಲ್ಲಿ ಪಾಕಿಸ್ತಾನ ಅಕ್ಟೋಬರ್ 2 ರಂದು ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಅಕ್ಟೋಬರ್ 5 ರಂದು ಕೊಲಂಬೊದಲ್ಲಿ ನಡೆಯಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ