Women’s ODI World Cup 2025: ಏಕದಿನ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಶುಭಾರಂಭ
Women's ODI World Cup 2025; 270 ರನ್ ಗಳ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡವು 45.4 ಓವರ್‌ಗಳಲ್ಲಿ 211 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 59 ರನ್ ಗಳ ಜಯ ಸಾಧಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಶುಭಾರಂಭ ಮಾಡಿದೆ. ಇನ್ನು ಭಾರತ ತಂಡವು ತನ್ನ ದ್ವಿತೀಯ ಪಂದ್ಯದಲ್ಲಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ.
ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ಗುವಾಹಟಿಯ ಬರ್ಸಾಪಾರ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಭಾರತ 59 ರನ್ ಗಳ ಜಯ ಸಾಧಿಸಿದೆ. ಮಳೆಯಿಂದಾಗಿ 47 ಓವರ್‌ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಅಮನ್ಜೋತ್ ಕೌರ್ (54) ಹಾಗೂ ದೀಪ್ತಿ ಶರ್ಮಾ ಅರ್ಧಶತಕ ಬಾರಿಸಿದ್ದರು. ಈ ಅರ್ಧಶತಕಗಳ ನೆರವಿನೊಂದಿಗೆ ಟೀಮ್ ಇಂಡಿಯಾ 47 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 269 ರನ್ ಕಲೆಹಾಕಿತು.
270 ರನ್ ಗಳ ಗುರಿ ಬೆನ್ನತ್ತಿದ ಶ್ರೀಲಂಕಾ ತಂಡವು 45.4 ಓವರ್‌ಗಳಲ್ಲಿ 211 ರನ್ ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಟೀಮ್ ಇಂಡಿಯಾ 59 ರನ್ ಗಳ ಜಯ ಸಾಧಿಸಿ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಶುಭಾರಂಭ ಮಾಡಿದೆ.
ಶ್ರೀಲಂಕಾ ಪ್ಲೇಯಿಂಗ್ 11: ಚಾಮರಿ ಅಥಾಪತ್ತು (ನಾಯಕಿ), ಹಾಸಿನಿ ಪೆರೇರಾ, ಹರ್ಷಿತಾ ಸಮರವಿಕ್ರಮ, ವಿಶ್ಮಿ ಗುಣರತ್ನೆ, ಕವಿಶಾ ದಿಲ್ಹಾರಿ, ನೀಲಾಕ್ಷಿ ಡಿ ಸಿಲ್ವಾ, ಅನುಷ್ಕಾ ಸಂಜೀವನಿ (ವಿಕೆಟ್ ಕೀಪರ್), ಅಚಿನಿ ಕುಲಸೂರಿಯಾ, ಸುಗಂದಿಕಾ ಕುಮಾರಿ, ಉದೇಶಿಕಾ ಪ್ರಬೋಧನಿ, ಇನೋಕಾ ರಣವೀರ.
ಭಾರತ ಪ್ಲೇಯಿಂಗ್ 11: ಪ್ರತೀಕಾ ರಾವಲ್, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರೊಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಅಮಂಜೋತ್ ಕೌರ್, ಸ್ನೇಹ್ ರಾಣಾ, ಕ್ರಾಂತಿ ಗೌಡ್, ಶ್ರೀ ಚರಣಿ.

