
2025 ರ ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ (Women’s ODI World Cup 2025) ಆತಿಥೇಯ ಭಾರತ ತಂಡ ತನ್ನ ನಾಲ್ಕನೇ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು (India vs Australia Women) ಎದುರಿಸುತ್ತಿದೆ. ಈ ಪಂದ್ಯವು ವಿಶಾಖಪಟ್ಟಣಂನ ಡಾ. ವೈ.ಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಟೀಂ ಇಂಡಿಯಾ, ಶ್ರೀಲಂಕಾ ಮತ್ತು ಪಾಕಿಸ್ತಾನವನ್ನು ಸೋಲಿಸುವ ಮೂಲಕ ಟೂರ್ನಿಯಲ್ಲಿ ಉತ್ತಮ ಆರಂಭ ಪಡೆದುಕೊಂಡಿತು. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯವನ್ನು ಸೋಲುವ ಮೂಲಕ ಭಾರತದ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿತು. ಆದ್ದರಿಂದ, ಭಾರತ ತಂಡವು ಗೆಲುವಿನ ಹಾದಿಗೆ ಮರಳಬೇಕೆಂದರೆ ಆಸ್ಟ್ರೇಲಿಯಾ ತಂಡವನ್ನು ಮಣಿಸಲೇಬೇಕಿದೆ.
ಮಹಿಳಾ ಏಕದಿನ ವಿಶ್ವಕಪ್‌ನ 13ನೇ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಬೇಕಾಗಿದೆ. ಟೀಂ ಇಂಡಿಯಾದ ಆಡುವ ಹನ್ನೊಂದರ ಬಳಗದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಅಂದರೆ ದಕ್ಷಿಣ ಆಫ್ರಿಕಾ ವಿರುದ್ಧ ಕಣಕ್ಕಿಳಿದಿದ್ದ ತಂಡವೇ ಆಸ್ಟ್ರೇಲಿಯಾ ವಿರುದ್ಧ ಆಡುತ್ತಿದೆ.
ಮಹಿಳಾ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ, ಭಾರತ ಮತ್ತು ಆಸ್ಟ್ರೇಲಿಯಾ ಇಲ್ಲಿಯವರೆಗೆ 59 ಪಂದ್ಯಗಳನ್ನು ಆಡಿವೆ. ಈ ಪೈಕಿ ಆಸ್ಟ್ರೇಲಿಯಾ 48 ಪಂದ್ಯಗಳಲ್ಲಿ ಗೆದ್ದಿದ್ದರೆ, ಭಾರತೀಯ ಮಹಿಳಾ ತಂಡ ಕೇವಲ 11 ಬಾರಿ ಮಾತ್ರ ಗೆದ್ದಿದೆ. ಏತನ್ಮಧ್ಯೆ, ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ 13 ಬಾರಿ ಮುಖಾಮುಖಿಯಾಗಿದ್ದು, ಅವುಗಳಲ್ಲಿ ಆಸ್ಟ್ರೇಲಿಯಾ ತಂಡ 10 ಪಂದ್ಯಗಳಲ್ಲಿ ಗೆದ್ದಿದ್ದರೆ, ಭಾರತೀಯ ಮಹಿಳಾ ತಂಡ ಕೇವಲ 3 ಪಂದ್ಯಗಳನ್ನು ಗೆದ್ದಿದೆ.
Alyssa Healy has won the toss & Australia will bowl first 🏏
Australia – Sophie Molineux comes in for Georgia Wareham.
India – Unchanged playing XICatch the LIVE action ➡️https://t.co/qAoZd44TEs#CWC25 👉 #INDvAUS | LIVE NOW on Star Sports & JioHotstar pic.twitter.com/1EJLpAIEOP
— Star Sports (@StarSportsIndia) October 12, 2025
ಭಾರತ ತಂಡ: ಪ್ರತೀಕಾ ರಾವಲ್, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ, ಅಮನ್ಜೋತ್ ಕೌರ್, ರಿಚಾ ಘೋಷ್, ಸ್ನೇಹ ರಾಣಾ, ಕ್ರಾಂತಿ ಗೌಡ್, ಶ್ರೀ ಚರಣಿ.
ಆಸ್ಟ್ರೇಲಿಯಾ ತಂಡ: ಅಲಿಸಾ ಹೀಲಿ (ನಾಯಕಿ), ಫೋಬೆ ಲಿಚ್‌ಫೀಲ್ಡ್, ಎಲ್ಲಿಸ್ ಪೆರ್ರಿ, ಬೆತ್ ಮೂನಿ, ಅನ್ನಾಬೆಲ್ ಸದರ್ಲ್ಯಾಂಡ್, ಆಶ್ಲೀ ಗಾರ್ಡ್ನರ್, ತಹ್ಲಿಯಾ ಮೆಕ್‌ಗ್ರಾತ್, ಕಿಮ್ ಗಾರ್ತ್, ಅಲಾನಾ ಕಿಂಗ್, ಮೇಗನ್ ಶುಟ್, ಸೋಫಿ ಮೊಲಿನಿಯಕ್ಸ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:56 pm, Sun, 12 October 25