World Cup 2025: ಇಂಗ್ಲೆಂಡ್ ವಿರುದ್ಧ ಟಾಸ್ ಸೋತ ಭಾರತ; ತಂಡದಿಂದ ಜೆಮಿಮಾ ಔಟ್

Women's ODI World Cup 2025 India vs England : 2025 ರ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಭಾರತ ಇಂದು ಇಂಗ್ಲೆಂಡ್ ವಿರುದ್ಧ ಮಹತ್ವದ ಪಂದ್ಯ ಆಡಲಿದೆ. ಸೆಮಿಫೈನಲ್ ಪ್ರವೇಶಕ್ಕೆ ಈ ಗೆಲುವು ಭಾರತಕ್ಕೆ ಅತಿ ಮುಖ್ಯ. ಈಗಾಗಲೇ ಎರಡು ಪಂದ್ಯ ಗೆದ್ದು, ಎರಡರಲ್ಲಿ ಸೋತಿರುವ ಹರ್ಮನ್‌ಪ್ರೀತ್ ಕೌರ್ ಪಡೆ ಈ ಪಂದ್ಯವನ್ನು ಗೆದ್ದು ಸೆಮಿಫೈನಲ್ ಹಾದಿ ಸುಗಮಗೊಳಿಸಲು ಸಜ್ಜಾಗಿದೆ. ಇಂದೋರ್‌ನಲ್ಲಿ ನಡೆಯುವ ಈ ಪಂದ್ಯದಲ್ಲಿ ಇಂಗ್ಲೆಂಡ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದು, ಭಾರತ ಬೌಲಿಂಗ್ ಮಾಡಲಿದೆ.

World Cup 2025: ಇಂಗ್ಲೆಂಡ್ ವಿರುದ್ಧ ಟಾಸ್ ಸೋತ ಭಾರತ; ತಂಡದಿಂದ ಜೆಮಿಮಾ ಔಟ್
Ind W Vs Eng W

Updated on: Oct 19, 2025 | 3:07 PM

2025 ರ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ (Women’s ODI World Cup 2025) ಆತಿಥೇಯ ಭಾರತ ಇಂದು ಇಂಗ್ಲೆಂಡ್ (India vs England) ವಿರುದ್ಧ ಕಣಕ್ಕಿಳಿಯುತ್ತಿದೆ. ಉಭಯ ತಂಡಗಳ ನಡುವಿನ ಈ ಪಂದ್ಯಕ್ಕೆ ಇಂದೋರ್‌ ಆತಿಥ್ಯವಹಿಸುತ್ತಿದೆ. ಭಾರತೀಯ ಮಹಿಳಾ ಕ್ರಿಕೆಟ್ ತಂಡದ ದೃಷ್ಟಿಕೋನದಿಂದ ಈ ಪಂದ್ಯ ಅತ್ಯಂತ ಮುಖ್ಯವಾಗಿದೆ. ಏಕೆಂದರೆ ಟೀಂ ಇಂಡಿಯಾ ಈ ಪಂದ್ಯವನ್ನು ಗೆದ್ದರೆ ಸೆಮಿಫೈನಲ್​ಗೆ ಮತ್ತಷ್ಟು ಸನಿಹವಾಗಲಿದೆ, ಸೋತರೆ ಸೆಮಿಫೈನಲ್‌ ಹಾದಿ ಮತ್ತಷ್ಟು ಕಠಿಣವಾಗಲಿದೆ. ಹೀಗಾಗಿ ಈ ಪಂದ್ಯವನ್ನು ಗೆಲ್ಲುವ ಇರಾದೆಯೊಂದಿಗೆ ಹರ್ಮನ್​ಪ್ರೀತ್ ಕೌರ್ ಪಡೆ ಕಣಕ್ಕಿಳಿಯಬೇಕಾಗಿದೆ.

ಟಾಸ್ ಗೆದ್ದ ಇಂಗ್ಲೆಂಡ್

ಇದು ವಿಶ್ವಕಪ್‌ನಲ್ಲಿ ಭಾರತೀಯ ಮಹಿಳಾ ತಂಡದ ಐದನೇ ಪಂದ್ಯವಾಗಿದ್ದು, ಈ ಹಿಂದಿನ ನಾಲ್ಕು ಪಂದ್ಯಗಳಲ್ಲಿ ಭಾರತ ತಂಡ ಎರಡರಲ್ಲಿ ಗೆದ್ದಿದ್ದರೆ, ಎರಡರಲ್ಲಿ ಸೋತಿದೆ. ಭಾರತ ತಂಡ, ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸುವಲ್ಲಿ ಯಶಸ್ವಿಯಾದರೆ ಸೆಮಿಫೈನಲ್ ತಲುಪುವ ಸಾಧ್ಯತೆ ಹೆಚ್ಚಾಗುತ್ತದೆ. ಇನ್ನು ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ. ಹೀಗಾಗಿ ಭಾರತ ತಂಡ ಮೊದಲು ಬೌಲಿಂಗ್ ಮಾಡಲಿದೆ. ಈ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಜೆಮಿಮಾ ರೋಡ್ರಿಗಸ್‌ ಬದಲಿಗೆ ರೇಣುಕಾ ಸಿಂಗ್ ಠಾಕೂರ್​ಗೆ ಅವಕಾಶ ನೀಡಲಾಗಿದೆ.

ಭಾರತ-ಇಂಗ್ಲೆಂಡ್ ಒಟ್ಟಾರೆ ದಾಖಲೆ

ಭಾರತ ಮತ್ತು ಇಂಗ್ಲೆಂಡ್ ತಂಡಗಳು ಇದುವರೆಗೆ 79 ಏಕದಿನ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಭಾರತ 36 ಮತ್ತು ಇಂಗ್ಲೆಂಡ್ 41 ಪಂದ್ಯಗಳನ್ನು ಗೆದ್ದಿದೆ. ಭಾರತೀಯ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ಏನೆಂದರೆ, 2020 ರಿಂದ ಇಂಗ್ಲೆಂಡ್ ವಿರುದ್ಧ ಆಡಿರುವ ಹತ್ತು ಪಂದ್ಯಗಳಲ್ಲಿ ಟೀಂ ಇಂಡಿಯಾ ಆರರಲ್ಲಿ ಗೆದ್ದಿದೆ.

ವಿಶ್ವಕಪ್‌ನಲ್ಲಿ 13ನೇ ಮುಖಾಮುಖಿ

ಮಹಿಳಾ ವಿಶ್ವಕಪ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು 13ನೇ ಬಾರಿಗೆ ಮುಖಾಮುಖಿಯಾಗಿವೆ. ಈ ಹಿಂದೆ ನಡೆದ 12 ಮುಖಾಮುಖಿಗಳಲ್ಲಿ ಭಾರತ ನಾಲ್ಕರಲ್ಲಿ ಗೆದ್ದಿದ್ದರೆ, ಇಂಗ್ಲೆಂಡ್ ಎಂಟು ಪಂದ್ಯಗಳಲ್ಲಿ ಜಯಗಳಿಸಿದೆ.

ಉಭಯ ತಂಡಗಳು

ಭಾರತ ತಂಡ: ಪ್ರತಿಕಾ ರಾವಲ್, ಸ್ಮೃತಿ ಮಂಧಾನ, ಹರ್ಲೀನ್ ಡಿಯೋಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್ ಕೀಪರ್), ಅಮನ್‌ಜೋತ್ ಕೌರ್, ಸ್ನೇಹ್ ರಾಣಾ, ಕ್ರಾಂತಿ ಗೌಡ್, ಶ್ರೀ ಚರಣಿ, ರೇಣುಕಾ ಸಿಂಗ್ ಠಾಕೂರ್.

ಇಂಗ್ಲೆಂಡ್ ತಂಡ: ಟ್ಯಾಮಿ ಬ್ಯೂಮಾಂಟ್, ಆಮಿ ಜೋನ್ಸ್ (ವಿಕೆಟ್ ಕೀಪರ್), ಹೀದರ್ ನೈಟ್, ನ್ಯಾಟ್ ಸಿವರ್-ಬ್ರಂಟ್ (ನಾಯಕಿ), ಸೋಫಿಯಾ ಡಂಕ್ಲಿ, ಎಮ್ಮಾ ಲ್ಯಾಂಬ್, ಆಲಿಸ್ ಕ್ಯಾಪ್ಸಿ, ಚಾರ್ಲಿ ಡೀನ್, ಸೋಫಿ ಎಕ್ಲೆಸ್ಟೋನ್, ಲಿನ್ಸೆ ಸ್ಮಿತ್, ಲಾರೆನ್ ಬೆಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Sun, 19 October 25

Follow Us