WPL 2024: ನಾಳೆಯಿಂದ ಡಬ್ಲ್ಯುಪಿಎಲ್ ಆರಂಭ; ಬೆಂಗಳೂರಿನಲ್ಲಿ ಮೊದಲ ಪಂದ್ಯ, ಉಚಿತವಾಗಿ ವೀಕ್ಷಿಸುವುದು ಹೇಗೆ?

|

Updated on: Feb 22, 2024 | 10:41 PM

WPL 2024: ಮಹಿಳೆಯರ ಪ್ರೀಮಿಯರ್ ಲೀಗ್‌ನ ಎರಡನೇ ಸೀಸನ್ ಫೆಬ್ರವರಿ 23 ರಿಂದ ಅಂದರೆ ನಾಳೆಯಿಂದ ಆರಂಭವಾಗಲಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಕಳೆದ ಸೀಸನ್​ನ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿವೆ.

WPL 2024: ನಾಳೆಯಿಂದ ಡಬ್ಲ್ಯುಪಿಎಲ್ ಆರಂಭ; ಬೆಂಗಳೂರಿನಲ್ಲಿ ಮೊದಲ ಪಂದ್ಯ, ಉಚಿತವಾಗಿ ವೀಕ್ಷಿಸುವುದು ಹೇಗೆ?
ಮಹಿಳಾ ಪ್ರೀಮಿಯರ್ ಲೀಗ್
Follow us on

ಮಹಿಳೆಯರ ಪ್ರೀಮಿಯರ್ ಲೀಗ್‌ನ (Women’s Premier League 2024) ಎರಡನೇ ಸೀಸನ್ ಫೆಬ್ರವರಿ 23 ರಿಂದ ಅಂದರೆ ನಾಳೆಯಿಂದ ಆರಂಭವಾಗಲಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಕಳೆದ ಸೀಸನ್​ನ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ( Mumbai Indians and Delhi Capitals) ಮುಖಾಮುಖಿಯಾಗುತ್ತಿವೆ. ಲೀಗ್‌ನ ಮೊದಲ ಸೀಸನ್‌ನ ಫೈನಲ್ ಪಂದ್ಯವು ಈ ಎರಡು ತಂಡಗಳ ನಡುವೆ ನಡೆದಿತ್ತು. ಇದೀಗ ಮತ್ತೊಮ್ಮೆ ಈ ಎರಡು ಬಲಿಷ್ಠ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Bengaluru’s M Chinnaswamy Stadium) ನಡೆಯಲಿದ್ದು, ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಇದಕ್ಕೂ ಮುನ್ನ ಬಿಸಿಸಿಐ ವತಿಯಿಂದ ಸಂಜೆ 6.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಇದರಲ್ಲಿ ಅನೇಕ ಬಾಲಿವುಡ್ ತಾರೆಯರು ಪ್ರದರ್ಶನ ನೀಡಲಿದ್ದಾರೆ.

20 ಪಂದ್ಯಗಳನ್ನು ಆಡಲಿವೆ

ಒಟ್ಟು 24 ದಿನಗಳು ಈ ಎರಡನೇ ಸೀಸನ್‌ ನಡೆಯಲ್ಲಿದ್ದು, ಒಂದು ಟ್ರೋಫಿಗಾಗಿ 5 ತಂಡಗಳು 2 ಸ್ಟೇಡಿಯಂಗಳಲ್ಲಿ 20 ಪಂದ್ಯಗಳನ್ನು ಆಡಲಿವೆ. ನಂತರ ಎಲಿಮಿನೇಟರ್ ಮತ್ತು ಫೈನಲ್ ಪಂದ್ಯಗಳು ನಡೆಯಲಿವೆ. ಒಟ್ಟು 5 ತಂಡಗಳು ಪರಸ್ಪರ 8 ಪಂದ್ಯಗಳನ್ನು ಆಡಲಿವೆ. ಈ ಎಲ್ಲಾ ಪಂದ್ಯಗಳು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣ ಮತ್ತು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಯುಪಿ ವಾರಿಯರ್ಸ್ ಮತ್ತು ಗುಜರಾತ್ ಜೈಂಟ್ಸ್ ಮುಖಾಮುಖಿಯಾಗಲಿವೆ.

ಲೀಗ್ ಪಂದ್ಯಗಳು ಫೆಬ್ರವರಿ 23 ರಿಂದ ಮಾರ್ಚ್ 20 ರವರೆಗೆ ನಡೆಯಲಿವೆ. ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸೆಣಸಲಿದೆ. ಮಾರ್ಚ್ 20 ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಜೈಂಟ್ಸ್ ನಡುವಿನ ಪಂದ್ಯದೊಂದಿಗೆ ಲೀಗ್ ಸುತ್ತು ಮುಕ್ತಾಯಗೊಳ್ಳಲಿದೆ.

ಪಂದ್ಯದ ಬಗ್ಗೆ ಪೂರ್ಣ ವಿವರ ಇಲ್ಲಿದೆ

ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯ ಯಾವಾಗ ನಡೆಯಲ್ಲಿದೆ?

ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯ ಫೆಬ್ರವರಿ 23 ರಂದು ನಡೆಯಲ್ಲಿದೆ.

ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯ ಎಲ್ಲಿ ನಡೆಯಲ್ಲಿದೆ?

ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲ್ಲಿದೆ.

ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯ ಯಾವ ತಂಡಗಳ ನಡುವೆ ನಡೆಯಲ್ಲಿದೆ?

ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಕಳೆದ ಸೀಸನ್​ನ ರನ್ನರ್ ಅಪ್ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯಲ್ಲಿದೆ

ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಮಹಿಳಾ ಪ್ರೀಮಿಯರ್ ಲೀಗ್​ನ ಮೊದಲ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ.

ಮಹಿಳಾ ಪ್ರೀಮಿಯರ್ ಲೀಗ್​ನ ನೇರ ಪ್ರಸಾರ ಯಾವ ಚಾನೆಲ್​ನಲ್ಲಿ?

ಮಹಿಳಾ ಪ್ರೀಮಿಯರ್ ಲೀಗ್​ ಅನ್ನು ಟಿವಿಯಲ್ಲಿ ಸ್ಪೋರ್ಟ್ಸ್ 18 ನೆಟ್‌ವರ್ಕ್ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಅಲ್ಲದೆ ಮೊಬೈಲ್‌ನಲ್ಲಿ ಪಂದ್ಯಗಳನ್ನು ಜಿಯೋ ಸಿನಿಮಾ ಆ್ಯಪ್‌ನಲ್ಲಿ ವೀಕ್ಷಿಸಬಹುದಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ