WPL 2024: ಬೆಂಗಳೂರಿನಲ್ಲಿ ಆರ್​ಸಿಬಿ- ಯುಪಿ ವಾರಿಯರ್ಸ್​ ಫೈಟ್; ಪಂದ್ಯ ಎಷ್ಟು ಗಂಟೆಗೆ ಆರಂಭ?

WPL 2024: ಉಭಯ ತಂಡಗಳು ಕಳೆದ ಆವೃತ್ತಿಯಲ್ಲಿ ಎರಡು ಬಾರಿ ಮುಖಾಮುಖಿಯಾಗಿದ್ದವು. ಆಡಿದ ಎರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದವು. ಹೀಗಾಗಿ ನಾಳಿನ ಪಂದ್ಯದಲ್ಲಿ ಎರಡೂ ತಂಡಗಳಿಂದ ಸಮಬಲದ ಹೋರಾಟವನ್ನು ಕಾಣಬಹುದಾಗಿದೆ.

WPL 2024: ಬೆಂಗಳೂರಿನಲ್ಲಿ ಆರ್​ಸಿಬಿ- ಯುಪಿ ವಾರಿಯರ್ಸ್​ ಫೈಟ್; ಪಂದ್ಯ ಎಷ್ಟು ಗಂಟೆಗೆ ಆರಂಭ?
ಆರ್​ಸಿಬಿ- ಯುಪಿ ವಾರಿಯರ್ಸ್​
Follow us
ಪೃಥ್ವಿಶಂಕರ
|

Updated on: Feb 23, 2024 | 10:39 PM

ಮಹಿಳೆಯರ ಪ್ರೀಮಿಯರ್ ಲೀಗ್ (Women’s Premier League) ಎರಡನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ (RCB Women vs UP Warriorz) ತಂಡಗಳು ಮುಖಾಮುಖಿಯಾಗುತ್ತಿವೆ. ಮೊದಲ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನ ತೀರ ಕಳಪೆಯಾಗಿತ್ತು. ಆರ್‌ಸಿಬಿ ಆಡಿದ 8 ಪಂದ್ಯಗಳ ಪೈಕಿ ಕೇವಲ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ತಂಡ ನಾಲ್ಕನೇ ಸ್ಥಾನ ಪಡೆದುಕೊಂಡಿತ್ತು. ಇತ್ತ ಯುಪಿ ವಾರಿಯರ್ಸ್ ಕೂಡ ಕಳೆದ ಆವೃತ್ತಿಯಲ್ಲಿ ಆಡಿದ್ದ 8 ಪಂದ್ಯಗಳಲ್ಲಿ 4 ರಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನ ಗಳಿಸಿತ್ತು. ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಯುಪಿ ವಾರಿಯರ್ಸ್ ಸೋಲನುಭವಿಸಬೇಕಾಗಿ ಬಂದಿದ್ದು, ಫೈನಲ್ ತಲುಪುವ ತಂಡದ ಕನಸು ಭಗ್ನಗೊಂಡಿತ್ತು. ಹೀಗಾಗಿ ಉಭಯ ತಂಡಗಳು ಸಹ ಎರಡನೇ ಸೀಸನ್​ನಲ್ಲಿ ಗೆಲುವಿನ ಆರಂಭ ಪಡೆಯಲು ಎದುರು ನೋಡುತ್ತಿವೆ.

ಇನ್ನು ಉಭಯ ತಂಡಗಳು ಕಳೆದ ಆವೃತ್ತಿಯಲ್ಲಿ ಎರಡು ಬಾರಿ ಮುಖಾಮುಖಿಯಾಗಿದ್ದವು. ಆಡಿದ ಎರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದವು. ಹೀಗಾಗಿ ನಾಳಿನ ಪಂದ್ಯದಲ್ಲಿ ಎರಡೂ ತಂಡಗಳಿಂದ ಸಮಬಲದ ಹೋರಾಟವನ್ನು ಕಾಣಬಹುದಾಗಿದೆ.

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಆರ್​ಸಿಬಿ ಮತ್ತು ಯುಪಿ ವಾರಿಯರ್ಸ್ ನಡುವಿನ ಪಂದ್ಯ ಯಾವಾಗ ನಡೆಯಲ್ಲಿದೆ?

ಆರ್​ಸಿಬಿ ಮತ್ತು ಯುಪಿ ವಾರಿಯರ್ಸ್ ನಡುವಿನ ಪಂದ್ಯ ಫೆಬ್ರವರಿ 24 ರಂದು ನಡೆಯಲ್ಲಿದೆ.

ಆರ್​ಸಿಬಿ ಮತ್ತು ಯುಪಿ ವಾರಿಯರ್ಸ್ ನಡುವಿನ ಪಂದ್ಯ ಎಲ್ಲಿ ನಡೆಯಲ್ಲಿದೆ?

ಆರ್​ಸಿಬಿ ಮತ್ತು ಯುಪಿ ವಾರಿಯರ್ಸ್ ನಡುವಿನ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲ್ಲಿದೆ.

ಆರ್​ಸಿಬಿ ಮತ್ತು ಯುಪಿ ವಾರಿಯರ್ಸ್ ನಡುವಿನ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಆರ್​ಸಿಬಿ ಮತ್ತು ಯುಪಿ ವಾರಿಯರ್ಸ್ ನಡುವಿನ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ.

ಆರ್​ಸಿಬಿ ಮತ್ತು ಯುಪಿ ವಾರಿಯರ್ಸ್ ನಡುವಿನ ಪಂದ್ಯದ ನೇರ ಪ್ರಸಾರ ಯಾವ ಚಾನೆಲ್​ನಲ್ಲಿ?

ಆರ್​ಸಿಬಿ ಮತ್ತು ಯುಪಿ ವಾರಿಯರ್ಸ್ ನಡುವಿನ ಪಂದ್ಯವನ್ನು ಟಿವಿಯಲ್ಲಿ ಸ್ಪೋರ್ಟ್ಸ್ 18 ನೆಟ್‌ವರ್ಕ್ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಅಲ್ಲದೆ ಮೊಬೈಲ್‌ನಲ್ಲಿ ಪಂದ್ಯಗಳನ್ನು ಜಿಯೋ ಸಿನಿಮಾ ಆ್ಯಪ್‌ನಲ್ಲಿ ವೀಕ್ಷಿಸಬಹುದಾಗಿದೆ.

ಉಭಯ ಸಂಭಾವ್ಯ ತಂಡಗಳು

ಆರ್​ಸಿಬಿ: ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಎಲ್ಲಿಸ್ ಪೆರ್ರಿ, ಕನಿಕಾ ಅಹುಜಾ, ರಿಚಾ ಘೋಷ್ (ವಿಕೆಟ್ ಕೀಪರ್), ನಡಿನ್ ಡಿ ಕ್ಲರ್ಕ್, ಶ್ರೇಯಾಂಕ ಪಾಟೀಲ್, ಮೇಗನ್ ಶುಟ್, ರೇಣುಕಾ ಸಿಂಗ್ ಠಾಕೂರ್, ಪ್ರೀತಿ ಬೋಸ್, ಆಶಾ ಸೋಭಾನಾ.

UP ವಾರಿಯರ್ಸ್: ಅಲಿಸ್ಸಾ ಹೀಲಿ (ನಾಯಕಿ ಮತ್ತು ವಿಕೆಟ್‌ಕೀಪರ್), ವೃಂದಾ ದಿನೇಶ್, ಶ್ವೇತಾ ಶೆರಾವತ್, ಕಿರಣ್ ನವಗಿರೆ, ಚಾಮರಿ ಅಟಪಟ್ಟು, ತಹ್ಲಿಯಾ ಮೆಗ್ರಾತ್, ದೀಪ್ತಿ ಶರ್ಮಾ, ಸೋಫಿ ಎಕ್ಲೆಸ್ಟೋನ್, ಅಂಜಲಿ ಸರ್ವಾಣಿ, ಸೈಮಾ ಠಾಕೋರ್, ಪಾರ್ಶ್ವಿ ಚೋಪ್ರಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್