MI vs DC- WPL 2024: ಮಹಿಳಾ ಪ್ರೀಮಿಯರ್ ಲೀಗ್​ಗೆ ಇಂದು ಚಾಲನೆ: ಮೊದಲ ಪಂದ್ಯದಲ್ಲಿ ಮುಂಬೈ-ಡೆಲ್ಲಿ ಸೆಣೆಸಾಟ

|

Updated on: Feb 23, 2024 | 7:35 AM

Mumbai Indians Women vs Delhi Capitals Women: ಮಹಿಳೆಯರ ಪ್ರೀಮಿಯರ್ ಲೀಗ್ T20 ಯ ಎರಡನೇ ಆವೃತ್ತಿಯು ಶುಕ್ರವಾರ (ಫೆ 23) ಪ್ರಾರಂಭವಾಗಲಿದೆ. ಟೂರ್ನಿಯ ಆರಂಭಿಕ ಪಂದ್ಯ ಕಳೆದ ಆವೃತ್ತಿಯ ಫೈನಲಿಸ್ಟ್‌ಗಳಾದ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.

MI vs DC- WPL 2024: ಮಹಿಳಾ ಪ್ರೀಮಿಯರ್ ಲೀಗ್​ಗೆ ಇಂದು ಚಾಲನೆ: ಮೊದಲ ಪಂದ್ಯದಲ್ಲಿ ಮುಂಬೈ-ಡೆಲ್ಲಿ ಸೆಣೆಸಾಟ
WPL 2024
Follow us on

ಎರಡನೇ ಆವೃತ್ತಿಯ ಬಹುನಿರೀಕ್ಷಿತ ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಗೆ ಇಂದು ಚಾಲನೆ ಸಿಗಲಿದೆ. ಒಟ್ಟು 24 ದಿನಗಳ ಕಾಲ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಇಂದು ಹರ್ಮನ್​ಪ್ರಿತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಮತ್ತು ಮೆಗ್ ಲ್ಯಾನಿಂಗ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ (Mumbai Indians Women vs Delhi Capitals Women) ಮುಖಾಮುಖಿ ಆಗಲಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಈ ಪಂದ್ಯ ಆರಂಭಕ್ಕೂ ಮುನ್ನ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಇದರಲ್ಲಿ ಶಾಹಿದ್ ಕಪೂರ್, ಶಾರುಖ್ ಖಾನ್ ಸೇರಿದಂತೆ ಅನೇಕ ಬಾಲಿವುಡ್ ತಾರೆಯರು ಅಭಿಮಾನಿಗಳನ್ನು ರಂಚಿಸಲಿದ್ದಾರೆ.

ಮುಂಬೈ-ಡೆಲ್ಲಿ

ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರ್ತಿಯರ ದಂಡೇ ಇದೆ. ಹೀಗಾಗಿ ಸಿಲಿಕಾನ್ ಸಿಟಿಯಲ್ಲಿ ಹೈವೋಲ್ಟೇಜ್ ಪಂದ್ಯ ಆಗುವುದು ಖಚಿತ. ಮುಂಬೈ ಇಂಡಿಯನ್ಸ್ ಮಹಿಳಾ ತಂಡದಲ್ಲಿ ಹೇಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ, ನಟಾಲಿ ಸ್ಕಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್, ಅಮೆಲಿಯಾ ಕೆರ್, ಅಮನ್‌ಜೋತ್ ಕೌರ್, ಪೂಜಾ ವಸ್ತ್ರಾಕರ್ ಮಿಂಚಲು ತಯಾರಾಗಿದ್ದಾರೆ. ಅಂತೆಯೆ ಅತ್ತ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡದಲ್ಲಿ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ, ಮೆಗ್ ಲ್ಯಾನಿಂಗ್, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಆಲಿಸ್ ಕ್ಯಾಪ್ಸಿ, ಅನ್ನಾಬೆಲ್ ಸದರ್ಲ್ಯಾಂಡ್, ಶಿಖಾ ಪಾಂಡೆ, ತಾನಿಯಾ ಭಾಟಿಯಾ, ರಾಧಾ ಯಾದವ್, ಪೂನಮ್ ಯಾದವ್ ಹೀಗೆ ಅನುಭವಿಗಳಿಂದ ಕೂಡಿದೆ.

ಇಂದಿನಿಂದ ಭಾರತ-ಇಂಗ್ಲೆಂಡ್ ನಾಲ್ಕನೇ ಟೆಸ್ಟ್: ಬುಮ್ರಾ ಜಾಗಕ್ಕೆ ಯಾರಿರಬಹುದು?

ಚಿನ್ನಸ್ವಾಮಿ ಪಿಚ್-ಹವಾಮಾನ ವರದಿ

ಚಿಕ್ಕ ಬೌಂಡರಿಗಳು ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಎತ್ತರವು ಸೀಮಿತ-ಓವರ್‌ಗಳ ಸ್ವರೂಪಗಳಲ್ಲಿ ಬ್ಯಾಟರ್‌ಗಳಿಗೆ ಸ್ವರ್ಗವಾಗಿದೆ. ಈ ಮೈದಾನದಲ್ಲಿ ಸುಲಭವಾಗಿ ದೊಡ್ಡ ಸ್ಕೋರ್‌ಗಳನ್ನು ಕಲೆಹಾಕಬಹುದು. ಚೇಸಿಂಗ್ ಕೂಡ ದೊಡ್ಡ ಕಷ್ಟವೇನಲ್ಲ. ಇಲ್ಲಿ ಈ ಹಿಂದೆ ನಡೆದ ಐಪಿಎಲ್ ಪಂದ್ಯಗಳಲ್ಲಿ ಕೂಡ ರನ್ ಮಳೆ ಸುರಿದಿತ್ತು. ಇನ್ನು ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಳೆಯಾಗುವ ಸಾಧ್ಯತೆಯಿಲ್ಲ. ಅಕ್ಯುವೆದರ್ ಪ್ರಕಾರ, ಕನಿಷ್ಠ ತಾಪಮಾನವು 22 ಡಿಗ್ರಿ ಸೆಲ್ಸಿಯಸ್‌ ಇರುತ್ತದೆ. ಗರಿಷ್ಠ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ಇರುತ್ತದೆ.

ಮಹಿಳಾ ಪ್ರೀಮಿಯರ್ ಲೀಗ್​ನ ಮುಂಬೈ-ಡೆಲ್ಲಿ ನಡುವಣ ಮೊದಲ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ. ಈ ಪಂದ್ಯವನ್ನು ಟಿವಿಯಲ್ಲಿ ಸ್ಪೋರ್ಟ್ಸ್ 18 ನೆಟ್‌ವರ್ಕ್ ಚಾನೆಲ್‌ಗಳಲ್ಲಿ ವೀಕ್ಷಿಸಬಹುದು. ಅಲ್ಲದೆ ಮೊಬೈಲ್‌ನಲ್ಲಿ ಪಂದ್ಯಗಳನ್ನು ಜಿಯೋ ಸಿನಿಮಾ ಆ್ಯಪ್‌ನಲ್ಲಿ ವೀಕ್ಷಿಸಬಹುದಾಗಿದೆ. ಸಂಜೆ ಸುಮಾರು 6.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದೆ.

ರಾಂಚಿ ಮೈದಾನವೆಂದರೆ ಹಿಟ್​ಮ್ಯಾನ್ ರೋಹಿತ್​ಗೆ ಬಲು ಅಚ್ಚುಮೆಚ್ಚು

ಮುಂಬೈ ಇಂಡಿಯನ್ಸ್: ಅಮನ್‌ಜೋತ್ ಕೌರ್, ಅಮೆಲಿಯಾ ಕೆರ್, ಕ್ಲೋಯ್ ಟ್ರಯಾನ್, ಹರ್ಮನ್‌ಪ್ರೀತ್ ಕೌರ್, ಹೇಲಿ ಮ್ಯಾಥ್ಯೂಸ್, ಹುಮೈರಾ ಕಾಜಿ, ಇಸ್ಸಿ ವಾಂಗ್, ಜಿಂತಿಮಣಿ ಕಲಿತಾ, ನ್ಯಾಟ್ ಸ್ಕಿವರ್-ಬ್ರಂಟ್, ಪೂಜಾ ವಸ್ತ್ರಾಕರ್, ಪ್ರಿಯಾಂಕಾ ಬಾಲಾ, ಸೈಕಾ ಇಶಾಕ್, ಯಾಸ್ತಿಕಾ ಭಾಟಿಯಾ, ಶಬ್ನಿಮ್ ಇಸ್ಮಾಯಿಲ್, ಅಮನದೀಪ್ ಕೌರ್, ಫಾತಿಮಾ ಜಾಫರ್, ಕೀರ್ತನಾ ಬಾಲಕೃಷ್ಣನ್.

ಡೆಲ್ಲಿ ಕ್ಯಾಪಿಟಲ್ಸ್: ಆಲಿಸ್ ಕ್ಯಾಪ್ಸೆ, ಅರುಂಧತಿ ರೆಡ್ಡಿ, ಜೆಮಿಮಾ ರಾಡ್ರಿಗಸ್, ಜೆಸ್ ಜೊನಾಸೆನ್, ಲಾರಾ ಹ್ಯಾರಿಸ್, ಮರಿಜಾನ್ನೆ ಕಪ್, ಮೆಗ್ ಲ್ಯಾನಿಂಗ್, ಮಿನ್ನು ಮಣಿ, ಪೂನಮ್ ಯಾದವ್, ರಾಧಾ ಯಾದವ್, ಶೆಫಾಲಿ ವರ್ಮಾ, ಶಿಖಾ ಪಾಂಡೆ, ಸ್ನೇಹಾ ದೀಪ್ತಿ, ತನಿಯಾಸ್ ಭಾಟಿಯಾ, ಅನ್ನಾಸ್ ಭಾಟಿಯಾ, ಅನ್ನಾಸ್ ಭಾಟಿಯಾ, ಅಪರ್ಣಾ ಮೊಂಡಲ್, ಅಶ್ವನಿ ಕುಮಾರಿ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 am, Fri, 23 February 24