ಮಹಿಳಾ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ: ಪಂದ್ಯ ಎಷ್ಟು ಗಂಟೆಗೆ?, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

Women’s Premier League 2024: ಡಬ್ಲ್ಯುಪಿಎಲ್ ಎರಡನೇ ಆವೃತ್ತಿಯ ಉದ್ಘಾಟನಾ ಪಂದ್ಯ ಫೆಬ್ರವರಿ 23 ರಂದು ರಾತ್ರಿ 7.30ಕ್ಕೆ ಆರಂಭವಾಗಲಿದೆ. ಅದಕ್ಕೂ ಒಂದು ಗಂಟೆ ಮೊದಲು ಉದ್ಘಾಟನಾ ಸಮಾರಂಭ ನಡೆಯಲಿದೆ. ಕಾರ್ತಿಕ್ ಹೊರತುಪಡಿಸಿ ಇತರೆ ಯಾವ ಸ್ಟಾರ್ಸ್ WPL ಉದ್ಘಾಟನಾ ಸಮಾರಂಭದ ವೇದಿಕೆಯನ್ನು ಅಲಂಕರಿಸುತ್ತಾರೆಯೇ ಎಂಬುದು ಇನ್ನೂ ತಿಳಿದಿಲ್ಲ.

ಮಹಿಳಾ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ: ಪಂದ್ಯ ಎಷ್ಟು ಗಂಟೆಗೆ?, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ
WPL 2024
Follow us
Vinay Bhat
|

Updated on: Feb 20, 2024 | 7:40 AM

ಎರಡನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್ (WPL 2024) ಟೂರ್ನಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಇದೇ ಫೆಬ್ರವರಿ 23 ರಂದು ಈ ಬಹುನಿರೀಕ್ಷಿತ ಟೂರ್ನಿಗೆ ಚಾಲನೆ ಸಿಗಲಿದೆ. ಈ ಬಾರಿ ಕ್ರಿಕೆಟ್ ಪ್ರೇಮಿಗಳಿಗೆ ಡಬ್ಲ್ಯುಪಿಎಲ್ ನಿಂದ ಡಬಲ್ ಮಜಾ ಸಿಗಲಿದೆ. ಫೆಬ್ರವರಿ 23 ರಂದು ಸಂಜೆ ಅದ್ಧೂರಿ ಉದ್ಘಾಟನಾ ಸಮಾರಂಭ ಕೂಡ ನಡೆಯಲಿದೆ. ವಿಶೇಷ ಎಂದರೆ, ಇದು ನಡೆಯಲಿರುವ ಬೆಂಗಳೂರಿನಲ್ಲಿ. ಮಹಿಳಾ ಪ್ರೀಮಿಯರ್ ಲೀಗ್‌ನ ಮೊದಲ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಫೆಬ್ರವರಿ 23 ರಂದು ನಡೆಯಲಿರುವ ಮೊದಲ ಪಂದ್ಯಕ್ಕೂ ಮೊದಲು, ಅದ್ಧೂರಿ ಉದ್ಘಾಟನಾ ಸಮಾರಂಭವಿದೆ. ಬಾಲಿವುಡ್ ಸ್ಟಾರ್ ಕಾರ್ತಿಕ್ ಆರ್ಯನ್ ಈ ಬಾರಿ ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮನೋರಂಜನೆ ನೀಡಲಿದ್ದಾರೆ. ಈ ಬಗ್ಗೆ ಮಂಡಳಿಯು ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದೆ.

ಕೆಲವೇ ದಿನಗಳ ಅಂತರದಲ್ಲಿ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ಭಾರತದ ಐವರು ಕ್ರಿಕೆಟಿಗರು..!

ಡಬ್ಲ್ಯುಪಿಎಲ್ ಎರಡನೇ ಆವೃತ್ತಿಯ ಉದ್ಘಾಟನಾ ಪಂದ್ಯ ರಾತ್ರಿ 7.30ಕ್ಕೆ ಆರಂಭವಾಗಲಿದೆ. ಅದಕ್ಕೂ ಒಂದು ಗಂಟೆ ಮೊದಲು ಉದ್ಘಾಟನಾ ಸಮಾರಂಭ ನಡೆಯಲಿದೆ. ಕಾರ್ತಿಕ್ ಹೊರತುಪಡಿಸಿ ಇತರೆ ಯಾವ ಸ್ಟಾರ್ಸ್ WPL ಉದ್ಘಾಟನಾ ಸಮಾರಂಭದ ವೇದಿಕೆಯನ್ನು ಅಲಂಕರಿಸುತ್ತಾರೆಯೇ ಎಂಬುದು ಇನ್ನೂ ತಿಳಿದಿಲ್ಲ.

ಕಳೆದ ವರ್ಷವೂ ಟೂರ್ನಿಯ ಅದ್ಧೂರಿ ಉದ್ಘಾಟನಾ ಸಮಾರಂಭ ನಡೆದಿತ್ತು. ಬಾಲಿವುಡ್ ತಾರೆಯರಾದ ಕಿಯಾರಾ ಅಡ್ವಾಣಿ ಮತ್ತು ಕೃತಿ ಶಾನನ್ ಅವರ ಡ್ಯಾನ್ಸ್ ಬೀಟ್‌ಗೆ ಡಿವೈ ಪಾಟೀಲ್ ಸ್ಟೇಡಿಯಂ ತಲ್ಲಣಗೊಂಡಿತ್ತು. ಇವರಲ್ಲದೆ ಜನಪ್ರಿಯ ಗಾಯಕ ಎ.ಪಿ.ಧಿಲ್ಲೋನ್ ಗ್ಯಾಲರಿಯಲ್ಲಿದ್ದ ಪ್ರೇಕ್ಷಕರನ್ನು ರಂಜಿಸಿದ್ದರು.

ಡಬ್ಲ್ಯುಪಿಎಲ್ ಉದ್ಘಾಟನಾ ಸಮಾರಂಭದ ವಿವರಗಳು

ದಿನಾಂಕ: ಫೆಬ್ರವರಿ 23, (ಶುಕ್ರವಾರ)

ಸಮಯ : 06:30 PM IST ರಿಂದ

ಸ್ಥಳ: ಎಂ.ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು

ಡಬ್ಲ್ಯುಪಿಎಲ್ ಲೈವ್ ಸ್ಟ್ರೀಮಿಂಗ್ ವಿವರಗಳು

ಡಬ್ಲ್ಯುಪಿಎಲ್​ನ ಉದ್ಘಾಟನಾ ಸಮಾರಂಭ ಸೇರಿದಂತೆ ಪೂರ್ಣ ಪಂದ್ಯಾವಳಿಯು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಮತ್ತೊಂದೆಡೆ, ಸ್ಪೋರ್ಟ್ಸ್ 18 ಚಾನೆಲ್ ಪಂದ್ಯಾವಳಿಯ ಪ್ರಸಾರ ಹಕ್ಕುಗಳನ್ನು ಹೊಂದಿರುತ್ತದೆ.

‘ಭಾರತವನ್ನು ನೋಡಿ ಕಲಿಯಿರಿ’; ಇಂಗ್ಲೆಂಡ್​ನ ಭಾಝ್ ಬಾಲ್ ಕ್ರಿಕೆಟ್​ಗೆ ಮಾಜಿ ನಾಯಕರಿಂದಲೇ ಅಪಸ್ವರ..!

ಡಬ್ಲ್ಯುಪಿಎಲ್ 2024 ಪೂರ್ಣ ವೇಳಾಪಟ್ಟಿ

ಫೆಬ್ರವರಿ 23: ಮುಂಬೈ ಇಂಡಿಯನ್ಸ್ vs ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು

ಫೆಬ್ರವರಿ 24: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್, ಬೆಂಗಳೂರು

ಫೆಬ್ರವರಿ 25: ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್, ಬೆಂಗಳೂರು

ಫೆಬ್ರವರಿ 26: ಯುಪಿ ವಾರಿಯರ್ಸ್ vs ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು

ಫೆಬ್ರವರಿ 27: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್, ಬೆಂಗಳೂರು

ಫೆಬ್ರವರಿ 28: ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್, ಬೆಂಗಳೂರು

ಫೆಬ್ರವರಿ 29: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು

ಮಾರ್ಚ್ 1: ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್, ಬೆಂಗಳೂರು

ಮಾರ್ಚ್ 2: ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್, ಬೆಂಗಳೂರು

ಮಾರ್ಚ್ 3: ಗುಜರಾತ್ ಜೈಂಟ್ಸ್ vs ದೆಹಲಿ ಕ್ಯಾಪಿಟಲ್ಸ್, ಬೆಂಗಳೂರು

ಮಾರ್ಚ್ 4: ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ಬೆಂಗಳೂರು

ಮಾರ್ಚ್ 5: ದೆಹಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್, ದೆಹಲಿ

ಮಾರ್ಚ್ 6: ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ದೆಹಲಿ

ಮಾರ್ಚ್ 7: ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್, ದೆಹಲಿ

ಮಾರ್ಚ್ 8: ದೆಹಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್, ದೆಹಲಿ

ಮಾರ್ಚ್ 9: ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್, ದೆಹಲಿ

ಮಾರ್ಚ್ 10: ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ದೆಹಲಿ

ಮಾರ್ಚ್ 11: ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್, ದೆಹಲಿ

ಮಾರ್ಚ್ 12: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು, ದೆಹಲಿ

ಮಾರ್ಚ್ 13: ದೆಹಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್, ದೆಹಲಿ

ಮಾರ್ಚ್ 15: ಎಲಿಮಿನೇಟರ್, ದೆಹಲಿ

ಮಾರ್ಚ್ 17: ಫೈನಲ್, ದೆಹಲಿ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ