ಮಹಿಳಾ ಏಷ್ಯಾಕಪ್​ನಲ್ಲಿ ಭಾರತದ ಎರಡನೇ ಪಂದ್ಯ; ಎದುರಾಳಿ ಯಾರು? ಪಂದ್ಯ ಎಷ್ಟು ಗಂಟೆಗೆ ಆರಂಭ?

2026ರ ಮಹಿಳಾ ಟಿ20 ಏಷ್ಯಾಕಪ್‌ನಲ್ಲಿ ಥೈಲ್ಯಾಂಡ್ ವಿರುದ್ಧ ಶುಭಾರಂಭ ಮಾಡಿರುವ ಭಾರತ ಮಹಿಳಾ ತಂಡ, ಇದೀಗ ಹಾಂಗ್ ಕಾಂಗ್ ವಿರುದ್ಧ ತನ್ನ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಈ ಪಂದ್ಯವನ್ನು ಗೆದ್ದರೆ, ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ವನಿತಾ ತಂಡಕ್ಕೆ ಸೆಮಿಫೈನಲ್ ಸ್ಥಾನ ಖಚಿತವಾಗಲಿದೆ. ದುಬೈನಲ್ಲಿ ಸೆಪ್ಟೆಂಬರ್ 3 ರಂದು ರಾತ್ರಿ 8 ಗಂಟೆಗೆ ಈ ಮಹತ್ವದ ಪಂದ್ಯ ನಡೆಯಲಿದೆ.

ಮಹಿಳಾ ಏಷ್ಯಾಕಪ್​ನಲ್ಲಿ ಭಾರತದ ಎರಡನೇ ಪಂದ್ಯ; ಎದುರಾಳಿ ಯಾರು? ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ ಮಹಿಳಾ ತಂಡ
Image Credit source: BCCI X

Updated on: Sep 02, 2026 | 10:53 PM

ದುಬೈನಲ್ಲಿ ನಡೆಯುತ್ತಿರುವ 2026 ರ ಮಹಿಳಾ ಟಿ20 ಏಷ್ಯಾಕಪ್​ನಲ್ಲಿ ಶುಭಾರಂಭ ಮಾಡಿರುವ ಭಾರತ ಮಹಿಳಾ ತಂಡ ತನ್ನ ಮೊದಲ ಪಂದ್ಯದಲ್ಲಿ ಥೈಲ್ಯಾಂಡ್ ತಂಡವನ್ನು 94 ರನ್​​ಗಳಿಂದ ಮಣಿಸಿತ್ತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಎ ಗುಂಪಿನಲ್ಲಿ +4.700 ರ ರನ್​ರೇಟ್​ ಹಾಗೂ 2 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಇದೀಗ ಹರ್ಮನ್‌ಪ್ರೀತ್ ಕೌರ್ ಪಡೆ ತನ್ನ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಈ ಪಂದ್ಯವನ್ನು ಗೆದ್ದರೆ, ಭಾರತ ವನಿತಾ ಪಡೆಗೆ ಸೆಮಿಫೈನಲ್ ಟಿಕೆಟ್ ಖಚಿತವಾಗಲಿದೆ. ಹೀಗಾಗಿ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಹರ್ಮನ್​ ಪಡೆ ಸೆಮಿಫೈನಲ್​ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ನೋಡುತ್ತಿದೆ. ಹಾಗಿದ್ದರೆ ಟೀಂ ಇಂಡಿಯಾದ ಮುಂದಿನ ಎದುರಾಳಿ ಯಾರು? ಪಂದ್ಯ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭವಾಗುತ್ತದೆ ಎಂಬುದನ್ನು ನೋಡೋಣ.

ಭಾರತ ಮತ್ತು ಹಾಂಗ್ ಕಾಂಗ್-ಚೀನಾ ಮಹಿಳಾ ತಂಡಗಳ ನಡುವಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ಹಾಂಗ್ ಕಾಂಗ್-ಚೀನಾ ಮಹಿಳಾ ತಂಡಗಳ ನಡುವಿನ ಪಂದ್ಯ ಸೆಪ್ಟೆಂಬರ್ 3 ರ ಗುರುವಾರ ನಡೆಯಲಿದೆ.

ಭಾರತ ಮತ್ತು ಹಾಂಗ್ ಕಾಂಗ್-ಚೀನಾ ಮಹಿಳಾ ತಂಡಗಳ ನಡುವಿನ ಪಂದ್ಯ ಎಲ್ಲಿ ನಡೆಯಲಿದೆ?

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಹಾಂಗ್ ಕಾಂಗ್-ಚೀನಾ ಮಹಿಳಾ ತಂಡಗಳ ನಡುವಿನ ಪಂದ್ಯ ನಡೆಯಲಿದೆ.

ಭಾರತ ಮತ್ತು ಹಾಂಗ್ ಕಾಂಗ್-ಚೀನಾ ಮಹಿಳಾ ತಂಡಗಳ ನಡುವಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?

ಭಾರತ ಮತ್ತು ಹಾಂಗ್ ಕಾಂಗ್-ಚೀನಾ ಮಹಿಳಾ ತಂಡಗಳ ನಡುವಿನ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8:00 ಗಂಟೆಗೆ ಆರಂಭವಾಗಲಿದೆ. ಪಂದ್ಯಕ್ಕೆ ಅರ್ಧ ಗಂಟೆ ಮೊದಲು ಸಂಜೆ 7:30 ಕ್ಕೆ ಟಾಸ್ ನಡೆಯಲಿದೆ.

ಭಾರತ ಮತ್ತು ಹಾಂಗ್ ಕಾಂಗ್-ಚೀನಾ ಮಹಿಳಾ ತಂಡಗಳ ನಡುವಿನ ಪಂದ್ಯವನ್ನು ಎಲ್ಲಿ ನೋಡಬಹುದು?

ಭಾರತ ಮತ್ತು ಹಾಂಗ್ ಕಾಂಗ್-ಚೀನಾ ಮಹಿಳಾ ತಂಡಗಳ ನಡುವಿನ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ಟೆನ್ 1, ಸೋನಿ ಸ್ಪೋರ್ಟ್ಸ್ ಟೆನ್ 3 ಮತ್ತು ಸೋನಿ ಸ್ಪೋರ್ಟ್ಸ್ ಟೆನ್ 4 ಚಾನೆಲ್‌ಗಳಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು

ಭಾರತ ಮಹಿಳಾ ಕ್ರಿಕೆಟ್ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶೆಫಾಲಿ ವರ್ಮಾ, ಭಾರತಿ ಫುಲ್ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್, ಜಿ ಕಮಲಿನಿ, ಅರುಂಧತಿ ರೆಡ್ಡಿ, ಪ್ರೇಮಾ ರಾವತ್, ರಾಧಾ ಯಾದವ್, ಶ್ರೀ ಚರಣಿ, ರೇಣುಕಾ ಠಾಕೂರ್, ನಂದನಿ ಶರ್ಮಾ, ಕ್ರಾಂತಿ ಗೌಡ್, ಪ್ರತೀಕಾ ರಾವಲ್.

ಹಾಂಗ್ ಕಾಂಗ್-ಚೀನಾ ಮಹಿಳಾ ತಂಡ: ನತಾಶಾ ಮೈಲ್ಸ್ (ನಾಯಕಿ), ಮಾರಿಕೊ ಹಿಲ್, ಯಾಸ್ಮಿನ್ ದಸ್ವನಿ (ವಿಕೆಟ್ ಕೀಪರ್), ಮರಿಯಮ್ ಬೀಬಿ, ಕ್ಯಾರಿ ಚಾನ್, ಮರೀನಾ ಲ್ಯಾಂಪ್ಲೋ, ಅಲಿಸನ್ ಸಿಯು, ಇಕ್ರಾ ಸಹರ್, ಜಾಯ್ಲೀನ್ ಕೌರ್, ಶಾಂಝೀನ್ ಶಹಜಾದ್, ರುಚಿತಾ ವೆಂಕಟೇಶ್, ಷಾರ್ಲೆಟ್ ಚಾನ್, ಶಿಂಗ್ ಚಾನ್ ಡೊರೊಥಿಯಾ, ಕೌರ್ ಮಹೇಕ್ದೀಪ್, ಹೈಲಿ ವಾಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:51 pm, Wed, 2 September 26

Loading...
Unable to load recommendations.
Follow Us