AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2026: ದುಬೈ ತಲುಪಿದ ಟೀಂ ಇಂಡಿಯಾ; ಈ ದಿನದಂದು ಮೊದಲ ಪಂದ್ಯ

Women's T20 Asia Cup 2026: 2026 ರ ಮಹಿಳಾ ಟಿ20 ಏಷ್ಯಾಕಪ್ ಆಗಸ್ಟ್ 28 ರಿಂದ ದುಬೈನಲ್ಲಿ ಆರಂಭವಾಗಲಿದೆ. ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಪ್ರಶಸ್ತಿ ಗೆಲ್ಲುವ ಗುರಿ ಹೊಂದಿದೆ. 15 ಸದಸ್ಯರ ತಂಡದಲ್ಲಿ ಸ್ಮೃತಿ ಮಂಧಾನ ಉಪನಾಯಕಿ. ಭಾರತವು ಪಾಕಿಸ್ತಾನ, ಥೈಲ್ಯಾಂಡ್, ಹಾಂಗ್ ಕಾಂಗ್ ಜೊತೆ 'ಎ' ಗುಂಪಿನಲ್ಲಿದ್ದು, ಸೆಪ್ಟೆಂಬರ್ 13 ರಂದು ಫೈನಲ್ ನಡೆಯಲಿದೆ.

Asia Cup 2026: ದುಬೈ ತಲುಪಿದ ಟೀಂ ಇಂಡಿಯಾ; ಈ ದಿನದಂದು ಮೊದಲ ಪಂದ್ಯ
India Women Squad
ಪೃಥ್ವಿಶಂಕರ
|

Updated on:Aug 27, 2026 | 3:44 PM

Share

2026 ರ ಮಹಿಳಾ ಟಿ20 ಏಷ್ಯಾಕಪ್ (Women’s T20 Asia Cup 2026) ಆಗಸ್ಟ್ 28 ರಿಂದ ಅಂದರೆ ನಾಳೆಯಿಂದ ಆರಂಭವಾಗುತ್ತಿದೆ. ಎಂಟು ತಂಡಗಳ ನಡುವೆ ನಡೆಯುತ್ತಿರುವ ಈ ಪಂದ್ಯಾವಳಿಗೆ ದುಬೈ ಆತಿಥ್ಯವಹಿಸುತ್ತಿದೆ. ಹೀಗಾಗಿ ಪಂದ್ಯಾವಳಿ ಆರಂಭಕ್ಕೂ ಮೊದಲು ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ (India Women’s Cricket Team) ದುಬೈ ತಲುಪಿದೆ. ತಂಡದ ಆಟಗಾರ್ತಿಯರು ದುಬೈ ತಲುಪಿರುವ ವಿಡಿಯೋವನ್ನು ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ. ಕಳೆದ ಆವೃತ್ತಿಯಲ್ಲಿ ಫೈನಲ್​ನಲ್ಲಿ ಎಡವಿದ್ದ ಟೀಂ ಇಂಡಿಯಾ, ಈ ಬಾರಿ ಪ್ರಶಸ್ತಿ ಎತ್ತಿ ಹಿಡಿಯುವ ಇರಾದೆಯಲ್ಲಿದೆ.

15 ಸದಸ್ಯರ ಭಾರತ ಮಹಿಳಾ ತಂಡ

ಈ ಪಂದ್ಯಾವಳಿಗೆ ಬಿಸಿಸಿಐ ಇದೇ ತಿಂಗಳ 14 ರಂದು 15 ಸದಸ್ಯರ ಭಾರತ ಮಹಿಳಾ ತಂಡವನ್ನು ಪ್ರಕಟಿಸಿತ್ತು. ಎಂದಿನಂತೆ ಈ ತಂಡವನ್ನು ಹರ್ಮನ್​ಪ್ರೀತ್ ಕೌರ್ ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿ ಪಾತ್ರವನ್ನು ನಿರ್ವಹಿಸಲಿದ್ದಾರೆ. ಆದರೆ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಜೆಮಿಮಾ ರೊಡ್ರಿಗಸ್ ಗಾಯದಿಂದಾಗಿ ಈ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಹಾಗೆಯೇ ಕನ್ನಡತಿ ಶ್ರೇಯಾಂಕ ಪಾಟೀಲ್ ಕೂಡ ಗಾಯದಿಂದ ಇನ್ನು ಚೇತರಿಸಿಕೊಳ್ಳದ ಕಾರಣ ತಂಡದಲ್ಲಿ ಆಯ್ಕೆಯಾಗಿಲ್ಲ.

ಸೆ. 5 ರಂದು ಭಾರತ- ಪಾಕ್ ಪಂದ್ಯ

ಈ ಪಂದ್ಯಾವಳಿಯಲ್ಲಿ ಎಂಟು ತಂಡಗಳನ್ನು ತಲಾ 4 ತಂಡಗಳ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತವು ಪಾಕಿಸ್ತಾನ, ಥೈಲ್ಯಾಂಡ್ ಮತ್ತು ಹಾಂಗ್ ಕಾಂಗ್ ಜೊತೆಗೆ ಗ್ರೂಪ್ ಎ ನಲ್ಲಿ ಸ್ಥಾನ ಪಡೆದಿದೆ. ಹಾಲಿ ಚಾಂಪಿಯನ್ ಶ್ರೀಲಂಕಾ ತಂಡವು ಬಾಂಗ್ಲಾದೇಶ, ಇಂಡೋನೇಷ್ಯಾ ಮತ್ತು ಆತಿಥೇಯ ಯುಎಇ ಜೊತೆಗೆ ಗ್ರೂಪ್ ಬಿ ನಲ್ಲಿ ಸ್ಥಾನ ಪಡೆದಿದೆ. ಟೀಂ ಇಂಡಿಯಾ ಆಗಸ್ಟ್ 30 ರಂದು ಥೈಲ್ಯಾಂಡ್ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಲಿದ್ದು, ಸೆಪ್ಟೆಂಬರ್ 3 ರಂದು ಹಾಂಗ್ ಕಾಂಗ್ ವಿರುದ್ಧ ತನ್ನ ಎರಡನೇ ಪಂದ್ಯವನ್ನು ಆಡಲಿದೆ. ಸೆಪ್ಟೆಂಬರ್ 5 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಬಹುನಿರೀಕ್ಷಿತ ಪಂದ್ಯ ನಡೆಯಲಿದೆ.

ಸೆಪ್ಟೆಂಬರ್ 13 ರಂದು ಫೈನಲ್

ಪ್ರತಿ ಗುಂಪಿನಿಂದ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯುತ್ತವೆ. ಸೆಮಿಫೈನಲ್‌ ಪಂದ್ಯಗಳು ಸೆಪ್ಟೆಂಬರ್ 10 ಮತ್ತು 11 ರಂದು ನಡೆಯಲಿದ್ದು, ಫೈನಲ್ ಸೆಪ್ಟೆಂಬರ್ 13 ರಂದು ನಡೆಯಲಿದೆ. ಮಹಿಳಾ ಟಿ20 ಏಷ್ಯಾಕಪ್ ಮೊದಲ ಬಾರಿಗೆ ದುಬೈನಲ್ಲಿ ನಡೆಯುತ್ತಿದ್ದು, ಇಲ್ಲಿಯವರೆಗೆ ನಡೆದಿರುವ ಐದು ಆವೃತ್ತಿಗಳಲ್ಲಿ ಭಾರತ ಮೂರು ಬಾರಿ ಟಿ20 ಏಷ್ಯಾಕಪ್ ಪ್ರಶಸ್ತಿಗಳನ್ನು ಗೆದ್ದಿದೆ.

ಏಷ್ಯಾಕಪ್ ಜೊತೆಗೆ ಏಷ್ಯನ್ ಗೇಮ್ಸ್​ನಿಂದಲೂ ಹೊರಬಿದ್ದ ಜೆಮಿಮಾ ರೊಡ್ರಿಗಸ್

ಏಷ್ಯಾಕಪ್‌ಗೆ ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ಭಾರತಿ ಫುಲ್‌ಮಾಲಿ, ದೀಪ್ತಿ ಶರ್ಮಾ, ರಿಚಾ ಘೋಷ್ (ವಿಕೆಟ್‌ಕೀಪರ್), ಜಿ. ಕಮಲಿನಿ (ವಿಕೆಟ್‌ಕೀಪರ್), ಅರುಂಧತಿ ರೆಡ್ಡಿ, ಪ್ರೇಮಾ ರಾವತ್, ರಾಧಾ ಯಾದವ್, ಶ್ರೀ ಚರಣಿ, ರೇಣುಕಾ ಸಿಂಗ್ ಠಾಕೂರ್, ನಂದನಿ ಶರ್ಮಾ, ಕ್ರಾಂತಿ ಗೌಡ್, ಪ್ರತೀಕಾ ರಾವಲ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Thu, 27 August 26

Follow Us