AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್ ಸೆಮಿಫೈನಲ್; ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ

2026 ರ ಮಹಿಳಾ ಟಿ20 ಏಷ್ಯಾಕಪ್‌ನ ನಾಕೌಟ್ ಹಂತ ಆರಂಭವಾಗಿದೆ. ಮೊದಲ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮಹಿಳಾ ತಂಡಗಳು ದುಬೈನಲ್ಲಿ ಕಾದಾಟ ನಡೆಸುತ್ತಿವೆ. ಈ ಪಂದ್ಯದ ವಿಜೇತರು ನೇರವಾಗಿ ಫೈನಲ್‌ಗೆ ಪ್ರವೇಶಿಸಲಿದ್ದಾರೆ. ಇದುವರೆಗೆ ಅಜೇಯವಾಗಿರುವ ಟೀಂ ಇಂಡಿಯಾ ಫೇವರಿಟ್ ಎನಿಸಿದೆ. ಇತ್ತ ಬಾಂಗ್ಲಾದೇಶ ಸಹ ಫೈನಲ್ ಪ್ರವೇಶಿಸಲು ತೀವ್ರ ಪೈಪೋಟಿ ನೀಡಲು ಸಜ್ಜಾಗಿದೆ.

ಏಷ್ಯಾಕಪ್ ಸೆಮಿಫೈನಲ್; ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ
ಭಾರತ Vs ಬಾಂಗ್ಲಾದೇಶ
ಪೃಥ್ವಿಶಂಕರ
|

Updated on:Sep 10, 2026 | 7:49 PM

Share

2026 ರ ಮಹಿಳಾ ಟಿ20 ಏಷ್ಯಾಕಪ್‌ನ ನಾಕೌಟ್ ಹಂತ ಇಂದಿನಿಂದ ಆರಂಭವಾಗಿದೆ. ಅದರಂತೆ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ಭಾರತ ಮತ್ತು ಬಾಂಗ್ಲಾದೇಶ ಮಹಿಳಾ ತಂಡಗಳ ನಡುವೆ ಆರಂಭವಾಗಿದೆ. ಈ ಪಂದ್ಯವು ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಗೆದ್ದ ತಂಡವು ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುತ್ತದೆ. ಪಂದ್ಯಾವಳಿಯಲ್ಲಿ ಇದುವರೆಗೆ ಅಜೇಯ ತಂಡವಾಗಿರುವ ಟೀಂ ಇಂಡಿಯಾ, ಈ ಪಂದ್ಯವನ್ನು ಗೆದ್ದು ನೇರವಾಗಿ ಫೈನಲ್ ಆಡಲು ಎದುರು ನೋಡುತ್ತಿದೆ. ಇತ್ತ ಬಾಂಗ್ಲಾದೇಶ ಕೂಡ ಟೀಂ ಇಂಡಿಯಾವನ್ನು ಮಣಿಸಿ ಫೈನಲ್​ಗೇರಲು ಪ್ರಯತ್ನಿಸಲಿದೆ.

ಟಾಸ್ ಗೆದ್ದ ಬಾಂಗ್ಲಾದೇಶ

ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ಬೌಲಿಂಗ್ ಮಾಡಲು ನಿರ್ಧರಿಸಿದೆ. ಹೀಗಾಗಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಲಿದೆ. ಈ ಪಂದ್ಯಾವಳಿಯಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್‌ ಮಾಡಿಯೇ ಗೆಲುವು ಸಾಧಿಸಿದೆ. ಹೀಗಾಗಿ ಈ ಪಂದ್ಯದಲ್ಲೂ ಟೀಂ ಇಂಡಿಯಾವೇ ಗೆಲುವಿನ ಫೇವರೇಟ್ ಎನಿಸಿಕೊಂಡಿದೆ. ಟಾಸ್ ಜೊತೆಗೆ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ.

ಹೆಡ್-ಟು-ಹೆಡ್ ದಾಖಲೆ

ಟಿ20 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವು, ಬಾಂಗ್ಲಾದೇಶದ ವಿರುದ್ಧ ಮೇಲುಗೈ ಸಾಧಿಸಿದೆ. ಇಲ್ಲಿಯವರೆಗೆ ಎರಡೂ ತಂಡಗಳ ನಡುವೆ ನಡೆದ 21 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 18 ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ ಕೇವಲ ಮೂರರಲ್ಲಿ ಮಾತ್ರ ಗೆದ್ದಿದೆ. ಆದಾಗ್ಯೂ, 2018 ರ ಏಷ್ಯಾಕಪ್ ಫೈನಲ್‌ನಲ್ಲಿ ಬಾಂಗ್ಲಾದೇಶ ಭಾರತವನ್ನು ಸೋಲಿಸಿತ್ತು. ಹೀಗಿರುವಾಗ ಈ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಹಗುರವಾಗಿ ಪರಿಗಣಿಸುವ ಕೆಲಸವನ್ನು ಟೀಂ ಇಂಡಿಯಾ ಮಾಡಬಾರದು.

ಏಷ್ಯಾಕಪ್‌ನಲ್ಲಿ ಭಾರತ- ಪಾಕಿಸ್ತಾನ್ ನಡುವೆ ಮತ್ತೊಂದು ಪಂದ್ಯ

ಉಭಯ ತಂಡಗಳು

ಭಾರತ ತಂಡ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಪ್ರತೀಕಾ ರಾವಲ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ದೀಪ್ತಿ ಶರ್ಮಾ, ಭಾರತಿ ಫುಲ್ಮಾಲಿ, ರಿಚಾ ಘೋಷ್ (ವಿಕೆಟ್ ಕೀಪರ್), ಪ್ರೇಮಾ ರಾವತ್, ಶ್ರೀ ಚರಣಿ, ಕ್ರಾಂತಿ ಗೌಡ್ ಮತ್ತು ನಂದನಿ ಶರ್ಮಾ.

ಬಾಂಗ್ಲಾದೇಶ ತಂಡ: ದಿಲಾರಾ ಅಖ್ತರ್, ಜುವೈರಿಯಾ ಫಿರ್ದೋಸ್, ಸೋಭಾನಾ ಮೊಸ್ತರಿ, ನಿಗರ್ ಸುಲ್ತಾನಾ (ನಾಯಕಿ), ಶರ್ಮಿನ್ ಅಖ್ತರ್, ಶೋರ್ನಾ ಅಖ್ತರ್, ಫಾಹಿಮಾ ಖಾತುನ್, ನಹಿದಾ ಅಖ್ತರ್, ರಬೇಯಾ ಖಾನ್, ಮಾರುಫಾ ಅಖ್ತರ್ ಮತ್ತು ಸುಲ್ತಾನಾ ಖಾತುನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:42 pm, Thu, 10 September 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More