Viral Video: ವಾಟ್ ಎ ಕ್ಯಾಚ್…ಮಿಂಚಿನ ವೇಗದಲ್ಲಿ ಚೆಂಡನ್ನು ಹಿಡಿದ ಹರ್ಮನ್​ಪ್ರೀತ್

Harmanpreet Kaur: ಮೊದಲು ಬ್ಯಾಟ್ ಮಾಡಿದ ಸೂಪರ್ ನೋವಾಸ್ ಪರ ನಾಯಕಿ ಹರ್ಮನ್ 7 ಬೌಂಡರಿ ಹಾಗೂ 3 ಸಿಕ್ಸ್​ಗಳೊಂದಿಗೆ 71 ರನ್​ ಸಿಡಿಸಿದ್ದರು.

Viral Video: ವಾಟ್ ಎ ಕ್ಯಾಚ್...ಮಿಂಚಿನ ವೇಗದಲ್ಲಿ ಚೆಂಡನ್ನು ಹಿಡಿದ ಹರ್ಮನ್​ಪ್ರೀತ್
Harmanpreet Kaur
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 25, 2022 | 3:28 PM

ಮಹಿಳಾ ಟಿ20 ಚಾಲೆಂಜ್​ನ 2ನೇ ಪಂದ್ಯದಲ್ಲಿ ವೆಲೋಸಿಟಿ ಹಾಗೂ ಹಾಗೂ ಸೂಪರ್​ನೋವಾಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಯುವ ಆರಂಭಿಕರಾದ ಶಫಾಲಿ ವರ್ಮಾ (51) ಮತ್ತು ಲಾರಾ ವೂಲ್ವಾರ್ಡ್ಟ್ (ಔಟಾಗದೆ 51) ಅವರ ನೆರವಿನಿಂದ ವೆಲೋಸಿಟಿ ತಂಡವು ಸೂಪರ್​ನೋವಾಸ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಶಫಾಲಿ ಅವರ 33 ಎಸೆತಗಳ ಇನ್ನಿಂಗ್ಸ್‌ನಲ್ಲಿ ಒಂದು ಸಿಕ್ಸರ್ ಮತ್ತು ಒಂಬತ್ತು ಬೌಂಡರಿಗಳನ್ನು ಬಾರಿಸಿದರೆ, ವೂಲ್ವಾರ್ಡ್ ಅಜೇಯ 35 ಎಸೆತಗಳಲ್ಲಿ 7 ಬೌಂಡರಿಗಳೊಂದಿಗೆ 1 ಸಿಕ್ಸರ್ ಬಾರಿಸಿ ಮಿಂಚಿದರು. ಇನ್ನು ಈ ಪಂದ್ಯದದ ಸೋಲಿನ ಹೊರತಾಗಿಯೂ ಸೂಪರ್‌ನೋವಾಸ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಹಿಡಿದ ಕ್ಯಾಚ್‌ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.

ವೆಲೋಸಿಟಿ ತಂಡದ ಇನ್ನಿಂಗ್ಸ್‌ನ 10 ನೇ ಓವರ್‌ನಲ್ಲಿ, ಸೂಪರ್​ನೋವಾಸ್ ಬೌಲರ್ ಡಿಯಾಂಡ್ರಾ ಡಾಟಿನ್ ಆಫ್-ಸ್ಟಂಪ್‌ನ ಹೊರಗೆ ಶಾರ್ಟ್ ಬಾಲ್ ಬೌಲ್ ಮಾಡಿದರು. ಈ ಚೆಂಡನ್ನು ಶಫಾಲಿ ವರ್ಮಾ ಬಲವಾಗಿ ಹೊಡೆದರು. ಚೆಂಡು ಹರ್ಮನ್‌ಪ್ರೀತ್ ಕೌರ್ ಫೀಲ್ಡಿಂಗ್ ಮಾಡುತ್ತಿದ್ದ ಶಾರ್ಟ್ ಥರ್ಡ್ ಮ್ಯಾನ್ ಕಡೆಗೆ ಚಿಮ್ಮಿತು. ಕ್ಷಣಾರ್ಧದಲ್ಲೇ ಹರ್ಮನ್‌ಪ್ರೀತ್ ಗಾಳಿಯಲ್ಲಿ ಡೈವ್ ಮಾಡುವ ಮೂಲಕ ಅದ್ಭುತವಾಗಿ ಕ್ಯಾಚ್ ಹಿಡಿದರು. ಹರ್ಮನ್‌ಪ್ರೀತ್ ಕೌರ್​ ಅವರ ಈ ಅದ್ಭುತ ಕ್ಯಾಚ್‌ನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು
Image
Virat Kohli: ಕೊಹ್ಲಿ ಕಡೆಯಿಂದ ರಶೀದ್ ಖಾನ್​​ಗೆ ಸ್ಪೆಷಲ್ ಗಿಫ್ಟ್​: ಸೇಫ್ ಆಗಿ ಇಟ್ಟಿರಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
Image
KL Rahul: ಐಪಿಎಲ್​ನಲ್ಲಿ ರಾಹುಲ್ ಅಬ್ಬರ: ಸತತ 5ನೇ ಬಾರಿ ಕೆಎಲ್ ಕಿಂಗ್
Image
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

ಇನ್ನು ಈ ಪಂದ್ಯದಲ್ಲಿ ಹರ್ಮನ್‌ಪ್ರೀತ್ ಕೌರ್ 51 ಎಸೆತಗಳಲ್ಲಿ 71 ರನ್ ಬಾರಿಸಿ ಮಿಂಚಿದ್ದರು. ಮೊದಲು ಬ್ಯಾಟ್ ಮಾಡಿದ ಸೂಪರ್ ನೋವಾಸ್ ಪರ ನಾಯಕಿ ಹರ್ಮನ್ 7 ಬೌಂಡರಿ ಹಾಗೂ 3 ಸಿಕ್ಸ್​ಗಳೊಂದಿಗೆ 71 ರನ್​ ಸಿಡಿಸಿದ್ದರು. ಈ ಅರ್ಧಶತಕದ ನೆರವಿನಿಂದ ಸೂಪರ್​ನೋವಾಸ್ ಐದು ವಿಕೆಟ್‌ ಕಳೆದುಕೊಂಡು 150 ರನ್ ಗಳಿಸಿತು. ಈ ಗುರಿಯನ್ನು ವೆಲೋಸಿಟಿ ತಂಡ 10 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್‌ ಕಳೆದುಕೊಂಡು ಸುಲಭವಾಗಿ ಚೇಸ್ ಮಾಡಿತು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ