T20 World Cup 2023:ಕೇವಲ 14 ಎಸೆತಗಳಲ್ಲಿ 56 ರನ್! ಟಿ20ಯಲ್ಲಿ ಪಾಕ್ ಪರ ಸಿಡಿಯಿತು ಮೊದಲ ಶತಕ

Women's T20 World Cup 2023: 25 ವರ್ಷದ ಈ ಪಾಕಿಸ್ತಾನಿ ಬ್ಯಾಟರ್​ ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 68 ಎಸೆತಗಳನ್ನು ಎದುರಿಸಿ, 86 ನಿಮಿಷಗಳ ಕಾಲ ಕ್ರೀಸ್‌ನಲ್ಲಿ ಬ್ಯಾಟ್​ ಬೀಸಿ, 102 ರನ್ ಚಚ್ಚಿದರು.

T20 World Cup 2023:ಕೇವಲ 14 ಎಸೆತಗಳಲ್ಲಿ 56 ರನ್! ಟಿ20ಯಲ್ಲಿ ಪಾಕ್ ಪರ ಸಿಡಿಯಿತು ಮೊದಲ ಶತಕ
ಪಾಕ್ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on: Feb 16, 2023 | 10:11 AM

ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup) ಭಾರತದ ವಿರುದ್ಧ ಹೀನಾಯ ಸೋಲು ಕಂಡಿದ್ದ ಪಾಕಿಸ್ತಾನ ತಂಡ ತನ್ನ ಎರಡನೇ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಟಿ20 ವಿಶ್ವಕಪ್​ನಲ್ಲಿ ಗೆಲುವಿನ ಖಾತೆ ತೆರೆದಿರುವ ಪಾಕ್ ಪಡೆ (Pakistan women’s cricket team) ಗ್ರೂಪ್ 2ರಲ್ಲಿ 3ನೇ ಸ್ಥಾನವನ್ನು ಪಡೆದುಕೊಂಡಿದೆ. ಪಾಕ್ ತಂಡದ ಈ ಗೆಲುವಿನಲ್ಲಿ ದುರ್ಬಲ ಐರ್ಲೆಂಡ್ ತಂಡದ ಬೌಲರ್‌ಗಳನ್ನು ಬಗ್ಗುಬಡಿದು ದಾಖಲೆಯ ಶತಕ ಸಿಡಿಸಿದ ಮುನೀಬಾ ಅಲಿ (Muneeba Ali) ಪ್ರಮುಖ ಪಾತ್ರವಹಿಸಿದರು. ಅಲ್ಲದೆ ಈ ಶತಕದೊಂದಿಗೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಶತಕ ಸಿಡಿಸಿದ ಮೊದಲ ಪಾಕಿಸ್ತಾನಿ ಮಹಿಳೆ ಎಂಬ ಹೆಗ್ಗಳಿಕೆಗೂ ಪಾತ್ರರಾದರು.

ಶತಕ ಬಾರಿಸುವ ಮೂಲಕ ಟೂರ್ನಿಯಲ್ಲಿ ಪಾಕಿಸ್ತಾನದ ಮೊದಲ ಗೆಲುವಿನ ಪತಾಕೆಯನ್ನು ಹಾರಿಸಿದ ಮುನೀಬಾ ಅಲಿ ತಂಡದ ಆರಂಭಿಕ ಆಟಗಾರ್ತಿ ಮತ್ತು ವಿಕೆಟ್ ಕೀಪರ್ ಬ್ಯಾಟರ್​ ಕೂಡ ಆಗಿದ್ದಾರೆ. ಫೆ.15ರ ಸಂಜೆ ಐರ್ಲೆಂಡ್​ನ ಮಹಿಳಾ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಕೇವಲ 68 ಎಸೆತಗಳಲ್ಲಿ ಮುನೀಬಾ ಅಲಿ ಶತಕ ಸಿಡಿಸಿ ಮಿಂಚಿದರು.

IND vs PAK: ಟಿ20 ವಿಶ್ವಕಪ್​ನಲ್ಲಿ ಪಾಕ್ ತಂಡಕ್ಕೆ ಮಣ್ಣು ಮುಕ್ಕಿಸಿ 5 ದಾಖಲೆ ನಿರ್ಮಿಸಿದ ಟೀಂ ಇಂಡಿಯಾ..!

ಕೇವಲ 14 ಎಸೆತಗಳಲ್ಲಿ 56 ರನ್!

ತಮ್ಮ ಅಬ್ಬರದ ಇನ್ನಿಂಗ್ಸ್​ನಲ್ಲಿ ಬರೋಬ್ಬರಿ 14 ಬೌಂಡರಿಗಳನ್ನು ಬಾರಿಸಿದ ಮುನಿಬಾ ಅಲಿ ಕೇವಲ ಬೌಂಡರಿಗಳಿಂದಲೇ ಬರೋಬ್ಬರಿ 56 ರನ್ ಕಲೆ ಹಾಕಿದರು. ಅಂದರೆ ತಮ್ಮ ಶತಕದ ಇನ್ನಿಂಗ್ಸ್‌ನ ಅರ್ಧಕ್ಕಿಂತ ಹೆಚ್ಚು ರನ್​ಗಳನ್ನು ಮುನೀಬಾ ಅಲಿ ಕೇವಲ ಬೌಂಡರಿಗಳಿಂದಲೇ ದೋಚಿದರು.

ಟಿ20ಯಲ್ಲಿ ಪಾಕಿಸ್ತಾನದ ಮೊದಲ ಶತಕ

25 ವರ್ಷದ ಈ ಪಾಕಿಸ್ತಾನಿ ಬ್ಯಾಟರ್​ ತಮ್ಮ ಇನ್ನಿಂಗ್ಸ್​ನಲ್ಲಿ ಕೇವಲ 68 ಎಸೆತಗಳನ್ನು ಎದುರಿಸಿ, 86 ನಿಮಿಷಗಳ ಕಾಲ ಕ್ರೀಸ್‌ನಲ್ಲಿ ಬ್ಯಾಟ್​ ಬೀಸಿ, 102 ರನ್ ಚಚ್ಚಿದರು. ಇದು ಅಂತಾರಾಷ್ಟ್ರೀಯ ಟಿ20ಯಲ್ಲಿ ಅವರ ಮೊದಲ ಶತಕ ಮಾತ್ರವಲ್ಲದೆ, ಪಾಕಿಸ್ತಾನಿ ಮಹಿಳಾ ಕ್ರಿಕೆಟ್​ನಲ್ಲಿ ಆಟಗಾರ್ತಿಯೊಬ್ಬರು ಸಿಡಿಸಿದ ಮೊದಲ ಶತಕ ಇದಾಗಿದೆ. ಇದಲ್ಲದೆ, 2023 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಸಿಡಿದ ಮೊದಲ ಶತಕ ಕೂಡ ಇದಾಗಿದೆ.

ಮುನೀಬಾ ಅಬ್ಬರಕ್ಕೆ ಒಲಿದ ಜಯ

ಮುನೀಬಾ ಅಲಿ ಅವರ ಶತಕದ ಬಲದಿಂದ ಪಾಕಿಸ್ತಾನ ಮಹಿಳಾ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 165 ರನ್ ಗಳಿಸಿತು. ಇದಕ್ಕುತ್ತರವಾಗಿ 166 ರನ್‌ಗಳ ಗುರಿ ಬೆನ್ನತ್ತಿದ ಐರ್ಲೆಂಡ್‌ನ ಮಹಿಳಾ ತಂಡವು 20 ಓವರ್‌ಗಳನ್ನು ಆಡಲು ಸಾಧ್ಯವಾಗದೆ 16.3 ಓವರ್‌ಗಳಲ್ಲಿ 95 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಪಾಕ್ ತಂಡ 70 ರನ್‌ಗಳ ದೊಡ್ಡ ಅಂತರದ ಗೆಲುವು ಸಾಧಿಸಲು ಕಾರಣರಾದ ಮುನೀಬಾ ಪಂದ್ಯ ಶ್ರೇಷ್ಠ ಪ್ರಶಸ್ತಿಗೂ ಭಾಜನರಾದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ