IND vs AUS: ಗೆಲ್ಲಲೇಬೇಕಾದ ಪಂದ್ಯದಲ್ಲಿ ಸೋತ ಭಾರತ; ಸೆಮೀಸ್ ಕನಸು ಭಾಗಶಃ ಭಗ್ನ

Women's T20 World Cup 2024: 2024ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಇಂದು ನಡೆದ 18ನೇ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿದ್ದವು. ಸೆಮಿಫೈನಲ್‌ ರೇಸ್‌ನಲ್ಲಿ ಉಳಿಯಬೇಕಾದರೆ ಟೀಂ ಇಂಡಿಯಾ ಈ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕಾಗಿತ್ತು. ಆದರೆ ಉಭಯ ತಂಡಗಳ ನಡುವೆ ನಡೆದ ಈ ರೋಚಕ ಹಣಾಹಣಿಯಲ್ಲಿ ಹರ್ಮನ್​ಪ್ರೀತ್ ಪಡೆ 9 ರನ್​ಗಳ ಸೋಲುಂಡಿದೆ.

IND vs AUS: ಗೆಲ್ಲಲೇಬೇಕಾದ ಪಂದ್ಯದಲ್ಲಿ ಸೋತ ಭಾರತ; ಸೆಮೀಸ್ ಕನಸು ಭಾಗಶಃ ಭಗ್ನ
ಭಾರತ ವನಿತಾ ಪಡೆ
Follow us
ಪೃಥ್ವಿಶಂಕರ
|

Updated on:Oct 13, 2024 | 11:21 PM

2024ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಇಂದು ನಡೆದ 18ನೇ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಿದ್ದವು. ಸೆಮಿಫೈನಲ್‌ ರೇಸ್‌ನಲ್ಲಿ ಉಳಿಯಬೇಕಾದರೆ ಟೀಂ ಇಂಡಿಯಾ ಈ ಪಂದ್ಯವನ್ನು ಯಾವುದೇ ಬೆಲೆ ತೆತ್ತಾದರೂ ಗೆಲ್ಲಲೇಬೇಕಾಗಿತ್ತು. ಆದರೆ ಉಭಯ ತಂಡಗಳ ನಡುವೆ ನಡೆದ ಈ ರೋಚಕ ಹಣಾಹಣಿಯಲ್ಲಿ ಹರ್ಮನ್​ಪ್ರೀತ್ ಪಡೆ 9 ರನ್​ಗಳ ಸೋಲುಂಡಿದೆ. ಈ ಮೂಲಕ ತನ್ನ ಸೆಮಿಫೈನಲ್ ಹಾದಿಯನ್ನು ಮತ್ತಷ್ಟು ಕಠಿಣ ಮಾಡಿಕೊಂಡಿದೆ. ನಾಳೆ ನಡೆಯಲ್ಲಿರುವ ಮತ್ತೊಂದು ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ನ್ಯೂಜಿಲೆಂಡ್ ತಂಡ ಸೋಲು ಕಂಡರಷ್ಟೇ ಟೀಂ ಇಂಡಿಯಾಕ್ಕೆ ಕೊನೆಯ ಅವಕಾಶ ಸಿಗಲಿದೆ. ಒಂದು ವೇಳೆ ಪಾಕ್ ವಿರುದ್ಧ ನ್ಯೂಜಿಲೆಂಡ್ ಕೇವಲ ಗೆಲುವು ಸಾಧಿಸಿದರೂ, ಟೀಂ ಇಂಡಿಯಾ ವಿಶ್ವಕಪ್​ನಿಂದ ಹೊರಬೀಳಲಿದೆ.

151 ರನ್ ಕಲೆಹಾಕಿದ ಆಸ್ಟ್ರೇಲಿಯಾ

ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ ಎಂಟು ವಿಕೆಟ್‌ಗೆ 151 ರನ್‌ ಕಲೆಹಾಕಿತು. ಆಸ್ಟ್ರೇಲಿಯಾ ಪರ ಅತಿ ಹೆಚ್ಚು ರನ್​ಗಳ ಇನ್ನಿಂಗ್ಸ್ ಆಡಿದ ಗ್ರೇಸ್ ಹ್ಯಾರಿಸ್ 41 ಎಸೆತಗಳಲ್ಲಿ 40 ರನ್ ಬಾರಿಸಿದರು. ಅವರನ್ನು ಹೊರತುಪಡಿಸಿ, ನಾಯಕಿ ಮೆಕ್‌ಗ್ರಾತ್ 32 ರನ್‌ಗಳ ಪ್ರಮುಖ ಇನ್ನಿಂಗ್ಸ್‌ ಆಡಿದರೆ, ಎಲ್ಲಿಸ್ ಪೆರ್ರಿ 32 ರನ್‌ಗಳ ಕಾಣಿಕೆ ನೀಡಿದರು. ಉಳಿದವರಿಂದ ಯಾವುದೇ ದೊಡ್ಡ ಇನ್ನಿಂಗ್ಸ್ ಮೂಡಿ ಬರಲಿಲ್ಲ. ಇತ್ತ ಟೀಂ ಇಂಡಿಯಾ ಪರ ಮಾರಕ ದಾಳಿ ನಡೆಸಿದ ರೇಣುಕಾ ಸಿಂಗ್ ಮತ್ತು ದೀಪ್ತಿ ಶರ್ಮಾ ತಲಾ ಎರಡು ವಿಕೆಟ್ ಪಡೆದರೆ, ಶ್ರೇಯಾಂಕ, ಪೂಜಾ ಹಾಗೂ ರಾಧಾ ತಲಾ 1 ವಿಕೆಟ್ ಪಡೆದರು.

ಪ್ರಮುಖ ಪಂದ್ಯದಲ್ಲಿ ಕೈಕೊಟ್ಟ ಸ್ಮೃತಿ

151 ರನ್​​ಗಳ ಗೆಲುವಿನ ಗುರಿ ಬೆನ್ನಟ್ಟಿದ ಟೀಂ ಇಂಡಿಯಾ ಪರ ಶೆಫಾಲಿ ವರ್ಮಾ ಸ್ಫೋಟಕ ಆರಂಭ ಒದಗಿಸಿಕೊಟ್ಟರು. ಆದಾಗ್ಯೂ ಅವರು ಬಿಗ್ ಇನ್ನಿಂಗ್ಸ್ ಆಡುವಲ್ಲಿ ಎಡವಿ ನಾಲ್ಕನೇ ಓವರ್‌ನಲ್ಲಿಯೇ ಔಟಾದರು. ಇತ್ತ ಇಡೀ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವಿದ್ದ ಸ್ಮೃತಿ ಮಂಧಾನ ಈ ಪಂದ್ಯದಲ್ಲೂ ಒಂದಂಕಿಗೆ ಸುಸ್ತಾದರು. ಕಳೆದ ಹಲವು ಪಂದ್ಯಗಳಲ್ಲಿ ಟೀಂ ಇಂಡಿಯಾ ಪರ ಗೆಲುವಿನ ಇನ್ನಿಂಗ್ಸ್ ಆಡಿದ್ದ ಜೆಮಿಮಾ ರೋಡ್ರಿಗಸ್ ಕೂಡ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ. ಹೀಗಾಗಿ ಭಾರತ 7 ಓವರ್​ಗಳಲ್ಲಿ ಕೇವಲ 47 ರನ್ ಕಲೆಹಾಕಿ ಪ್ರಮುಖ 3 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಒಂದಾದ ನಾಯಕಿ ಹರ್ಮನ್‌ಪ್ರೀತ್ ಮತ್ತು ದೀಪ್ತಿ ಶರ್ಮಾ ತಂಡದ ಇನ್ನಿಂಗ್ಸ್‌ ಜವಾಬ್ದಾರಿಯನ್ನು ವಹಿಸಿಕೊಂಡರು.

ಹರ್ಮನ್ ಆಮೆಗತಿಯ ಬ್ಯಾಟಿಂಗ್

ಆದಾಗ್ಯೂ, ಇಬ್ಬರ ನಡುವಿನ ಜೊತೆಯಾಟವು ತುಂಬಾ ನಿಧಾನವಾಗಿತ್ತು. ಇದರಲ್ಲಿ ನಾಯಕಿ ಹರ್ಮನ್​ಪ್ರೀತ್ ಕೌರ್ ನಡೆಸಿದ ಆಮೆಗತಿಯ ಬ್ಯಾಟಿಂಗ್ ತಂಡದ ಸೋಲಿಗೆ ಪ್ರಮುಖ ಕಾರಣವಾಯಿತು. ಕೊನೆಯಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಲು ಮುಂದಾದ ಕೌರ್, ಆರಂಭದಿಂದಲೂ ಇದೇ ಆಟವನ್ನು ಆಡಿದ್ದರೆ, ಟೀಂ ಇಂಡಿಯಾ ಗೆಲ್ಲಬಹುದಿತ್ತು. ಆದಾಗ್ಯೂ ಈ ಇಬ್ಬರು ನಿಧಾನಗತಿಯ ಬ್ಯಾಟಿಂಗ್ ಮೂಲಕವೇ ತಂಡವನ್ನು 100 ರನ್‌ಗಳ ಗಡಿ ದಾಟಿಸಿದರು.

ದುಬಾರಿಯಾಯ್ತು ರಿಚಾ ರನೌಟ್

ಆದರೆ ಇಲ್ಲಿಯೇ ಭಾರತಕ್ಕೆ ಎರಡು ಹೊಡೆತ ಬಿದ್ದಿತು. ಮೊದಲು ದೀಪ್ತಿ ಔಟಾದರೆ 17ನೇ ಓವರ್​ನಲ್ಲಿ ರಿಚಾ ಘೋಷ್ ರನೌಟ್ ಆದರು. ಈ ಸಂಪೂರ್ಣ ಓವರ್‌ನಲ್ಲಿ ಕೇವಲ 1 ರನ್ ಬಂದಿತು. ಇದು ಟೀಂ ಇಂಡಿಯಾ ಸೋಲಿಗೆ ಮುನ್ನುಡಿ ಬರೆಯಿತು. ನಾಯಕಿ ಕೌರ್ ಮತ್ತು ಪೂಜಾ ವಸ್ತ್ರಾಕರ್ ನಡುವೆ ಕೊನೆಯ ಓವರ್‌ನಲ್ಲಿ 18 ಎಸೆತಗಳಲ್ಲಿ 28 ರನ್‌ಗಳ ತ್ವರಿತ ಜೊತೆಯಾಟವು ಗೆಲುವಿನ ಭರವಸೆ ಮೂಡಿಸಿತು. ಆದರೆ ಅನ್ನಾಬೆಲ್ ಸದರ್ಲ್ಯಾಂಡ್ ಕೊನೆಯ ಓವರ್‌ನಲ್ಲಿ 3 ವಿಕೆಟ್ ಸೇರಿದಂತೆ ಒಟ್ಟು 4 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಭಾರತದ ಸೋಲನ್ನು ಖಚಿತಪಡಿಸಿದರು. ಅಂತಿಮವಾಗಿ ಟೀಂ ಇಂಡಿಯಾ 9 ವಿಕೆಟ್ ಕಳೆದುಕೊಂಡು 142 ರನ್ ಗಳಿಸಲಷ್ಟೇ ಶಕ್ತವಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 pm, Sun, 13 October 24

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?