IND vs AUS: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಸೋತ ಭಾರತ; ನಾಯಕಿ ಇಲ್ಲದೆ ಆಡುತ್ತಿದೆ ಆಸ್ಟ್ರೇಲಿಯಾ
Women's T20 World Cup 2024: ಮಹಿಳಾ ಟಿ20 ವಿಶ್ವಕಪ್ನಲ್ಲಿ ಇಂದು ಎರಡು ಬಲಿಷ್ಠ ತಂಡಗಳಾದ ಆಸ್ಟ್ರೇಲಿಯಾ ಹಾಗೂ ಭಾರತ ವನಿತಾ ಪಡೆಯ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಈ ಪಂದ್ಯ ಟೀಂ ಇಂಡಿಯಾಗೆ ಅತ್ಯಂತ ಮಹತ್ವದ್ದಾಗಿದ್ದು, ಈ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸೆಮಿಫೈನಲ್‌ಗೆ ತಲುಪುವ ಭರವಸೆಯನ್ನು ಜೀವಂತವಾಗಿರಿಸಿಕೊಳ್ಳಬಹುದು. ಸದ್ಯ ಎ ಗುಂಪಿನ ಪಾಯಿಂಟ್ಸ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದು, ಟೀಂ ಇಂಡಿಯಾ ಎರಡನೇ ಸ್ಥಾನದಲ್ಲಿದೆ.
ಮಹಿಳಾ ಟಿ20 ವಿಶ್ವಕಪ್ನಲ್ಲಿ ಇಂದು ಟೀಂ ಇಂಡಿಯಾ ಪಾಲಿನ ಅತ್ಯಂತ ಮಹತ್ವದ ಪಂದ್ಯ ನಡೆಯುತ್ತಿದೆ. ಎ ಗುಂಪಿನಲ್ಲಿರುವ ಎರಡು ಬಲಿಷ್ಠ ತಂಡಗಳಾದ ಆಸ್ಟ್ರೇಲಿಯಾ ಹಾಗೂ ಭಾರತ ವನಿತಾ ಪಡೆಯ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯುತ್ತಿದೆ. ಈ ಪಂದ್ಯ ಟೀಂ ಇಂಡಿಯಾಗೆ ಅತ್ಯಂತ ಮಹತ್ವದ್ದಾಗಿದ್ದು, ಈ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಸೆಮಿಫೈನಲ್‌ಗೆ ತಲುಪುವ ಭರವಸೆಯನ್ನು ಜೀವಂತವಾಗಿರಿಸಿಕೊಳ್ಳಬಹುದು. ಸದ್ಯ ಎ ಗುಂಪಿನ ಪಾಯಿಂಟ್ಸ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದ್ದು, ಟೀಂ ಇಂಡಿಯಾ ಎರಡನೇ ಸ್ಥಾನದಲ್ಲಿದೆ. ಇನ್ನು ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಇದಲ್ಲದೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದೆ.
2 ತಂಡಗಳಲ್ಲೂ ಬದಲಾವಣೆ
ಟಾಸ್ ಬಳಿಕ ಎರಡೂ ತಂಡಗಳ ಪ್ಲೇಯಿಂಗ್ 11 ಪ್ರಕಟವಾಗಿದ್ದು, ಅದರಂತೆ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಎರಡು ಬದಲಾವಣೆ ಮಾಡಿದೆ. ನಾಯಕಿ ಅಲಿಸಾ ಹೀಲಿ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅವರ ಸ್ಥಾನದಲ್ಲಿ ತಹ್ಲಿಯಾ ಮೆಕ್‌ಗ್ರಾತ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಹೀಲಿ ಜೊತೆಗೆ ಟೈಲಾ ವ್ಲೇಮಿಂಕ್ ಕೂಡ ತಂಡದಿಂದ ಹೊರಬಿದ್ದಿದ್ದಾರೆ. ಈ ಇಬ್ಬರ ಸ್ಥಾನದಲ್ಲಿ ಗ್ರೇಸ್ ಹ್ಯಾರಿಸ್ ಮತ್ತು ಡಾರ್ಸಿ ಬ್ರೌನ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಟೀಂ ಇಂಡಿಯಾ ಕೂಡ ಒಂದು ಬದಲಾವಣೆ ಮಾಡಿದ್ದು, ಸಜೀವನ್ ಸಜನಾ ಬದಲಿಗೆ ಪೂಜಾ ವಸ್ತ್ರಾಕರ್ ಅವರನ್ನು ಮತ್ತೆ ತಂಡಕ್ಕೆ ಸೇರಿಸಿಕೊಂಡಿದೆ.
🚨 Toss Update 🚨
Australia win the toss, #TeamIndia will be bowling first in Sharjah
Follow the match ▶️ https://t.co/Nbe57MXNuQ#T20WorldCup | #INDvAUS | #WomenInBlue pic.twitter.com/d2OGNzrlEw
— BCCI Women (@BCCIWomen) October 13, 2024
ಉಭಯ ತಂಡಗಳು
ಆಸ್ಟ್ರೇಲಿಯಾ ತಂಡ: ಬೆತ್ ಮೂನಿ (ವಿಕೆಟ್ ಕೀಪರ್), ಗ್ರೇಸ್ ಹ್ಯಾರಿಸ್, ಎಲ್ಲಿಸ್ ಪೆರ್ರಿ, ಆಶ್ಲೇ ಗಾರ್ಡ್ನರ್, ಫೋಬೆ ಲಿಚ್‌ಫೀಲ್ಡ್, ತಾಲಿಯಾ ಮೆಕ್‌ಗ್ರಾತ್ (ನಾಯಕಿ), ಜಾರ್ಜಿಯಾ ವೇರ್‌ಹ್ಯಾಮ್, ಅನ್ನಾಬೆಲ್ ಸದರ್ಲ್ಯಾಂಡ್, ಸೋಫಿ ಮೊಲಿನೆಕ್ಸ್, ಮೇಗನ್ ಶುಟ್, ಡಾರ್ಸಿ ಬ್ರೌನ್.
A look at #TeamIndia's Playing XI for the match against Australia 👌👌
Follow the match ▶️ https://t.co/Nbe57MXNuQ#T20WorldCup | #INDvAUS | #WomenInBlue pic.twitter.com/DbLwLjo16c
— BCCI Women (@BCCIWomen) October 13, 2024
ಟೀಂ ಇಂಡಿಯಾ: ಶಫಾಲಿ ವರ್ಮಾ, ಸ್ಮೃತಿ ಮಂಧಾನ, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಶ್ರೇಯಾಂಕಾ ಪಾಟೀಲ್, ಆಶಾ ಶೋಭಾನಾ, ರೇಣುಕಾ ಠಾಕೂರ್ ಸಿಂಗ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:25 pm, Sun, 13 October 24