IND vs PAK: ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ ದಾಖಲೆಯ ಗೆಲುವು ದಾಖಲಿಸಿದ ಟೀಂ ಇಂಡಿಯಾ

Women's T20 World Cup 2024: 2024ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಅಂತಿಮವಾಗಿ ಟೀಂ ಇಂಡಿಯಾ ತನ್ನ ಗೆಲುವಿನ ಖಾತೆ ತೆರೆದಿದೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿದ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಿದ್ದು, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 6 ವಿಕೆಟ್​ಗಳಿಂದ ಸೋಲಿಸಿದೆ.

IND vs PAK: ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ ದಾಖಲೆಯ ಗೆಲುವು ದಾಖಲಿಸಿದ ಟೀಂ ಇಂಡಿಯಾ
ಭಾರತ- ಪಾಕ್
Follow us
|

Updated on:Oct 06, 2024 | 7:30 PM

2024ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಅಂತಿಮವಾಗಿ ಟೀಂ ಇಂಡಿಯಾ ತನ್ನ ಗೆಲುವಿನ ಖಾತೆ ತೆರೆದಿದೆ. ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲನುಭವಿಸಿದ್ದ ಟೀಂ ಇಂಡಿಯಾ ತನ್ನ ಎರಡನೇ ಪಂದ್ಯದಲ್ಲಿ ಕಮ್ ಬ್ಯಾಕ್ ಮಾಡಿದ್ದು, ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 6 ವಿಕೆಟ್​ಗಳಿಂದ ಸೋಲಿಸಿದೆ. ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ಅಧಿಕ ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆ ಟೀಂ ಇಂಡಿಯಾ ಪಾತ್ರವಾಗಿದೆ. ಇದುವರೆಗೆ ಟಿ20 ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ 8 ಪಂದ್ಯಗಳನ್ನು ಆಡಿರುವ ಭಾರತ 6 ಪಂದ್ಯಗಳಲ್ಲಿ ಗೆದ್ದು, 2 ಪಂದ್ಯಗಳಲ್ಲಿ ಸೋಲು ಕಂಡಿದೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಭಾರತದ ಬೌಲರ್‌ಗಳ ಸಾಂಘೀಕ ದಾಳಿಗೆ ತತ್ತರಿಸಿ ಕೇವಲ 105 ರನ್ ಗಳಿಸಲಷ್ಟೇ ಶಕ್ತವಾಯಿತು. ಆದಾಗ್ಯೂ, ಈ ಅಲ್ಪ ಗುರಿ ಬೆನ್ನಟ್ಟಿದ್ದ ಭಾರತ ತಂಡಕ್ಕೆ ಮತ್ತೊಮ್ಮೆ ಉತ್ತಮ ಆಂಭ ಸಿಗಲಿಲ್ಲ. ಆದರೆ ನಾಯಕಿ ಹರ್ಮನ್‌ಪ್ರೀತ್ ಕೌರ್ ಅತ್ಯುತ್ತಮ ಇನ್ನಿಂಗ್ಸ್‌ ಆಡಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಇದರೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ತಲುಪುವ ಭರವಸೆಯನ್ನು ಇನ್ನು ಜೀವಂತವಾಗಿ ಉಳಿಸಿಕೊಂಡಿದೆ.

ಭಾರತಕ್ಕೆ ಮತ್ತೆ ಕಳಪೆ ಆರಂಭ

ಪಾಕ್ ನೀಡಿದ 105 ರನ್​ಗಳ ಗುರಿ ಬೆನ್ನಟ್ಟಿದ ಭಾರತ ಮಹಿಳಾ ತಂಡ ಮತ್ತೊಮ್ಮೆ ಉತ್ತಮ ಆರಂಭ ಪಡೆಯಲಿಲ್ಲ. ಮತ್ತೊಮ್ಮೆ ನಿರಾಸೆ ಮೂಡಿಸಿದ ಸ್ಮೃತಿ ಮಂಧಾನ ಕೇವಲ ಏಳು ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇದಾದ ನಂತರ ಬಂದ ಜೆಮಿಮಾ, ಶಫಾಲಿ ಜೊತೆಗೂಡಿ ಎರಡನೇ ವಿಕೆಟ್‌ಗೆ 43 ರನ್‌ಗಳ ಜೊತೆಯಾಟ ಹಂಚಿಕೊಂಡರು. ಈ ವೇಳೆ ಶಫಾಲಿ 32 ರನ್‌ಗಳ ಇನ್ನಿಂಗ್ಸ್‌ ಆಡಿ ವಿಕೆಟ್ ಒಪ್ಪಿಸಿದರು. ಅವರ ಹಿಂದೆ ಜೆಮಿಮಾ ಕೂಡ 23 ರನ್​ಗಳ ಇನ್ನಿಂಗ್ಸ್​ ಆಡಿ ಬ್ಯಾಟ್ ಎತ್ತಿಟ್ಟರು.

ಆ ಬಳಿಕ ಇನ್ನಿಂಗ್ಸ್ ಜವಬ್ದಾರಿ ಹೊತ್ತುಕೊಂಡ ನಾಯಕಿ ಹರ್ಮನ್‌ಪ್ರೀತ್ ಸಿಂಗ್ ಪಾಕಿಸ್ತಾನದ ಬೌಲರ್‌ಗಳ ಲೆಕ್ಕಾಚಾರವನ್ನು ಬುಡಮೇಲು ಮಾಡಿದರು. 29 ರನ್‌ಗಳ ಗೆಲುವಿನ ಇನ್ನಿಂಗ್ಸ್ ಆಡುವ ಮೂಲಕ ಹರ್ಮನ್​ಪ್ರೀತ್ ತಂಡವನ್ನುಯ ಗೆಲುವಿನ ಹತ್ತಿರಕ್ಕೆ ಕೊಂಡೊಯ್ದರು. ಕೊನೆಯದಾಗಿ ದೀಪ್ತಿ ಶರ್ಮಾ ಮತ್ತು ಸಜೀವನ್ ಸಜ್ನಾ ಕ್ರಮವಾಗಿ ಅಜೇಯ ಏಳು ಮತ್ತು ನಾಲ್ಕು ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಬಾಂಗ್ಲಾದೇಶ ಪರ ಫಾತಿಮಾ ಸನಾ ಎರಡು ಹಾಗೂ ಸಾದಿಯಾ ಮತ್ತು ಒಮೈಮಾ ತಲಾ ಒಂದು ವಿಕೆಟ್ ಪಡೆದರು.

ಪಾಕಿಸ್ತಾನಕ್ಕೂ ಕಳಪೆ ಆರಂಭ

ಇದಕ್ಕೂ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಮೊದಲ ಓವರ್​ನಲ್ಲೇ ರೇಣುಕಾ ಸಿಂಗ್, ಗುಲ್ ಫಿರೋಜಾ ಅವರನ್ನು ಶೂನ್ಯಕ್ಕೆ ಪೆವಿಲಿಯನ್​ಗಟ್ಟಿದರು. ನಂತರ ಎರಡನೇ ವಿಕೆಟ್​ಗೆ 24 ರನ್​ಗಳ ಜೊತೆಯಾಟ ಕಂಡುಬಂತು ಈ ವೇಳೆ ದಾಳಿಗಿಳಿದ ದೀಪ್ತಿ, ಸಿದ್ರಾ ಅಮೀನ್ ಅವರನ್ನು 8 ರನ್​ಗಳಿಗೆ ಬಲಿ ಪಡೆದರು. ಆ ನಂತರವೂ ನಿಯಮಿತ ಅಂತರದಲ್ಲಿ ಪಾಕ್ ತಂಡದ ವಿಕೆಟ್​ಗಳು ಪತನವಾಗುತ್ತಲೇ ಇದ್ದವು.

ಆದರೆ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಮಾಜಿ ನಾಯಕಿ ನಿದಾ ದರ್ ಗರಿಷ್ಠ 28 ರನ್​ಗಳ ಇನ್ನಿಂಗ್ಸ್ ಆಡಿದರು. ನಿದಾ ಅವರು ವಿಕೆಟ್​ನಲ್ಲಿ ನಿಲ್ಲದೆ ಹೋಗಿದ್ದರೆ, ಪಾಕ್ ತಂಡ ಶತಕದ ಗಡಿಯನ್ನೂ ಸಹ ದಾಟುತ್ತಿರಲಿಲ್ಲ. ನಿದಾಗೆ ಸಾಥ್ ನೀಡಿದ ನಾಯಕಿ ಫಾತಿಮಾ 13 ರನ್​ಗಳ ಕಾಣಿಕೆ ನೀಡಿದರೆ, ಕೊನೆಯಲ್ಲಿ ಸೈಯದಾ ಅರೂಬ್ ಶಾ 14 ರನ್​ಗಳ ಇನ್ನಿಂಗ್ಸ್ ಆಡಿದರು.

ಮಿಂಚಿದ ಅರುಂಧತಿ, ಶ್ರೇಯಾಂಕ

ಟೀಂ ಇಂಡಿಯಾ ಪರ ಬೌಲಿಂಗ್​ನಲ್ಲಿ ಮಿಂಚಿದ ಅರುಂಧತಿ ರೆಡ್ಡಿ 4 ಓವರ್​ಗಳಲ್ಲಿ 19 ರನ್ ನೀಡಿ ಪ್ರಮುಖ 3 ವಿಕೆಟ್ ಕಬಳಿಸಿದರೆ, ಪಂದ್ಯದುದ್ದಕ್ಕೂ ರನ್​ಗಳಿಗೆ ಕಡಿವಾಣ ಹಾಕುವ ಕೆಲಸ ಮಾಡಿದ ಕನ್ನಡತಿ ಶ್ರೇಯಾಂಕ ಪಾಟೀಲ್ ತಮ್ಮ ಖೋಟಾದ 4 ಓವರ್​ಗಳಲ್ಲಿ ಕೇವಲ 12 ರನ್ ನೀಡಿ 2 ವಿಕೆಟ್ ಕಬಳಿಸಿದರು. ಇದರಲ್ಲಿ 1 ಮೇಡನ್ ಓವರ್​ ಕೂಡ ಸೇರಿತ್ತು.

4ನೇ ಸ್ಥಾನದಲ್ಲಿ ಭಾರತ

ಭಾರತ ತಂಡ ಈ ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ತಲುಪಿದೆ.  ಹರ್ಮನ್ ಪಡೆ ಎರಡು ಅಂಕ ಗಳಿಸಿದೆಯಾದರೂ ನೆಟ್ ರನ್ ರೇಟ್ ಮಾತ್ರ -1.217 ಆಗಿದೆ. ಇದೀಗ ಭಾರತ ತಂಡ ತನ್ನ ಮುಂದಿನ ಪಂದ್ಯವನ್ನು ಶ್ರೀಲಂಕಾ ವಿರುದ್ಧ ಇದೇ ಮೈದಾನದಲ್ಲಿ ಅಕ್ಟೋಬರ್ 9 ರಂದು ಆಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:10 pm, Sun, 6 October 24

‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?