T20 World Cup 2024: ದುರ್ಬಲ ಸ್ಕಾಟ್ಲೆಂಡ್ ಮುಂದೆ ಮಂಡಿಯೂರಿದ ಪಾಕಿಸ್ತಾನ

T20 World Cup 2024: ಮಹಿಳಾ ಟಿ20 ವಿಶ್ವಕಪ್ ಮುಂದಿನ ತಿಂಗಳು ಅಕ್ಟೋಬರ್ 3 ರಿಂದ ಯುಎಇನಲ್ಲಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಅಭ್ಯಾಸ ಪಂದ್ಯಗಳು ನಡೆಯುತ್ತಿವೆ. ಅದರಂತೆ ನಡೆದ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡ, ಕ್ರಿಕೆಟ್ ಶಿಶು ಸ್ಕಾಟ್ಲೆಂಡ್ ಮಹಿಳಾ ತಂಡದ ವಿರುದ್ಧ ಹೀನಾಯ ಸೋಲನ್ನು ಅನುಭವಿಸಿದೆ.

T20 World Cup 2024: ದುರ್ಬಲ ಸ್ಕಾಟ್ಲೆಂಡ್ ಮುಂದೆ ಮಂಡಿಯೂರಿದ ಪಾಕಿಸ್ತಾನ
ಪಾಕಿಸ್ತಾನ- ಸ್ಕಾಟ್ಲೆಂಡ್
Follow us
ಪೃಥ್ವಿಶಂಕರ
|

Updated on: Sep 29, 2024 | 4:47 PM

ಮಹಿಳಾ ಟಿ20 ವಿಶ್ವಕಪ್ ಮುಂದಿನ ತಿಂಗಳು ಅಕ್ಟೋಬರ್ 3 ರಿಂದ ಯುಎಇನಲ್ಲಿ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಅಭ್ಯಾಸ ಪಂದ್ಯಗಳು ನಡೆಯುತ್ತಿವೆ. ಅದರಂತೆ ನಡೆದ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡ, ಕ್ರಿಕೆಟ್ ಶಿಶು ಸ್ಕಾಟ್ಲೆಂಡ್ ಮಹಿಳಾ ತಂಡದ ವಿರುದ್ಧ ಹೀನಾಯ ಸೋಲನ್ನು ಅನುಭವಿಸಿದೆ. ಟಿ20 ವಿಶ್ವಕಪ್‌ಗೂ ಮುನ್ನ ಪಾಕಿಸ್ತಾನ ತಂಡ ಸ್ಕಾಟ್ಲೆಂಡ್‌ನಂತಹ ದುರ್ಬಲ ತಂಡದ ವಿರುದ್ಧ ಸೋತಿರುವುದು ತಂಡಕ್ಕೆ ಆರಂಭಿಕ ಆಘಾತ ನೀಡಿದೆ.

ಈ ಅಭ್ಯಾಸ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 132 ರನ್ ಗಳಿಸಿತು. ತಂಡದ ಪರ ಅಗ್ರ ಕ್ರಮಾಂಕ ರನ್ ಕಲೆಹಾಕುವಲ್ಲಿ ಎಡವಿತು. ಇದರಿಂದಾಗಿ ತಂಡಕ್ಕೆ ಆರಂಭಿಕ ಆಘಾತ ಎದುರಾಯಿತು. ತಂಡದ ಪರ ಹೋರಾಟದ ಇನ್ನಿಂಗ್ಸ್ ಕಟ್ಟಿದ ಮುನಿಬಾ ಮತ್ತು ಒಮೈಮಾ ತಂಡಕ್ಕೆ ಉತ್ತಮ ಜೊತೆಯಾಟ ನೀಡಿದರು. ಈ ಪಂದ್ಯದಲ್ಲಿ ಒಮೈಮಾ 30 ರನ್ ಮತ್ತು ಮುನಿಬಾ 27 ರನ್ ಗಳಿಸಿದರು.

ಸುಲಭವಾಗಿ ಗುರಿ ಬೆನ್ನಟ್ಟಿದ ಸ್ಕಾಟ್ಲೆಂಡ್

133 ರನ್​ಗಳ ಗುರಿ ಬೆನ್ನಟ್ಟಿದ ಸ್ಕಾಟ್ಲೆಂಡ್ ತಂಡ ಕೇವಲ 2 ವಿಕೆಟ್ ಕಳೆದುಕೊಂಡು 18 ಓವರ್​ಗಳಲ್ಲೇ ಸುಲಭವಾಗಿ ಜಯದ ನಗೆ ಬೀರಿತು. ಸ್ಕಾಟ್ಲೆಂಡ್ ಪರ ಅದ್ಭುತ ಬ್ಯಾಟಿಂಗ್ ಮಾಡಿದ ಸಾರಾ 52 ಎಸೆತಗಳಲ್ಲಿ 60 ರನ್​ಗಳ ಅತ್ಯಧಿಕ ಇನ್ನಿಂಗ್ಸ್ ಆಡಿದರೆ, ಹೋರ್ಲಿ ಕೂಡ 48 ರನ್​ಗಳ ಗೆಲುವಿನ ಕಾಣಿಕೆ ನೀಡಿದರು.

ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ 8 ಬೌಲರ್‌ಗಳನ್ನು ಬಳಸಿತು. ಆದರೆ, ಅದರಲ್ಲಿ ಒಬ್ಬರಿಗೆ ಮಾತ್ರ ಏಕೈಕ ವಿಕೆಟ್ ಪಡೆಯಲು ಸಾಧ್ಯವಾಯಿತು. ಉಳಿದ ಇನ್ನೊಂದು ವಿಕೆಟ್ ರನೌಟ್‌ನಿಂದ ಸಿಕ್ಕಿತು. ಒಟ್ಟಿನಲ್ಲಿ ಸ್ಕಾಟ್ಲೆಂಡ್ ವಿರುದ್ಧ ಆಡಿದ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನದ ಬ್ಯಾಟಿಂಗ್ ಮಾತ್ರವಲ್ಲದೆ ಬೌಲಿಂಗ್ ಕೂಡ ವಿಫಲವಾಗಿದೆ.

ಇಂದು ಟೀಂ ಇಂಡಿಯಾ ಪಂದ್ಯ

ಭಾರತ ಮಹಿಳಾ ಕ್ರಿಕೆಟ್ ತಂಡ ಇಂದು ತನ್ನ ಏಕೈಕ ಅಭ್ಯಾಸ ಪಂದ್ಯವನ್ನು ಆಡಲಿದೆ. ಹರ್ಮನ್‌ಪ್ರೀತ್ ಕೌರ್ ಪಡೆ ಇಂದು ವೆಸ್ಟ್ ಇಂಡೀಸ್‌ ವಿರುದ್ಧ ಸೆಣಸಲಿದೆ. ಈ ಅಭ್ಯಾಸ ಪಂದ್ಯವನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಟಿ20 ವಿಶ್ವಕಪ್‌ಗೆ ತನ್ನ ಸಿದ್ಧತೆಯನ್ನು ಮತ್ತಷ್ಟು ಬಲಪಡಿಸಲು ಬಯಸುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!