Women’s T20 World Cup 2024: ಭಾರತ-ಪಾಕ್ ಮುಖಾಮುಖಿ: ಇಲ್ಲಿದೆ ನೋಡಿ ವೇಳಾಪಟ್ಟಿ

Women’s T20 World Cup 2024: ಈ ಬಾರಿಯ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ ಒಟ್ಟು 4 ಪಂದ್ಯಗಳನ್ನಾಡಲಿದೆ. ಅಕ್ಟೋಬರ್ 4 ರಂದು ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದ್ದು, ಅಕ್ಟೋಬರ್ 6 ರಂದು ನಡೆಯಲಿರುವ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ.

Women’s T20 World Cup 2024: ಭಾರತ-ಪಾಕ್ ಮುಖಾಮುಖಿ: ಇಲ್ಲಿದೆ ನೋಡಿ ವೇಳಾಪಟ್ಟಿ
Team India
Follow us
ಝಾಹಿರ್ ಯೂಸುಫ್
|

Updated on:Oct 03, 2024 | 10:00 AM

ಮಹಿಳಾ ಟಿ20 ವಿಶ್ವಕಪ್ ಇಂದಿನಿಂದ (ಅಕ್ಟೋಬರ್ 3) ಆರಂಭವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಸುತ್ತಿನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ ತಂಡಗಳನ್ನು ಎದುರಿಸಲಿದೆ. ಅಲ್ಲದೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳಲ್ಲಿ ಕಾಣಿಸಿಕೊಂಡರೆ ಸೆಮಿಫೈನಲ್​ಗೆ ಅರ್ಹತೆ ಪಡೆಯಬಹುದು.

ಏಕೆಂದರೆ ಈ ಬಾರಿಯ ಟಿ20 ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಗ್ರೂಪ್​ ಹಂತದಲ್ಲಿ ನಡೆಯಲಿದ್ದು, ಇಲ್ಲಿ 10 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಈ ಗ್ರೂಪ್​ಗಳಿಗೆ ಪತ್ಯೇಕ ಪಾಯಿಂಟ್ಸ್ ಟೇಬಲ್ ಇರಲಿದ್ದು, ಅದರಂತೆ ಅಂಕ ಪಟ್ಟಿಗಳಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ನಾಲ್ಕು ತಂಡಗಳು ಸೆಮಿಫೈನಲ್​ಗೇರಲಿದೆ.

ಮಹಿಳಾ ಟಿ20 ವಿಶ್ವಕಪ್ ತಂಡಗಳು:

  • ಗುಂಪು A : ಆಸ್ಟ್ರೇಲಿಯಾ, ಭಾರತ, ನ್ಯೂಝಿಲೆಂಡ್, ಪಾಕಿಸ್ತಾನ್, ಶ್ರೀಲಂಕಾ.
  • ಗುಂಪು B : ಸೌತ್ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಬಾಂಗ್ಲಾದೇಶ, ಸ್ಕಾಟ್ಲೆಂಡ್.

ಭಾರತದ ಅಭಿಯಾನ:

ಟೀಮ್ ಇಂಡಿಯಾ ಅಕ್ಟೋಬರ್ 4 ರಂದು ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದ್ದು, ಅಕ್ಟೋಬರ್ 6 ರಂದು ನಡೆಯಲಿರುವ ತನ್ನ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ.  ಅದರಂತೆ  ಭಾರತ ತಂಡದ ಮೊದಲ ಸುತ್ತಿನ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…

  1. ಅಕ್ಟೋಬರ್ 4: ಭಾರತ vs ನ್ಯೂಝಿಲೆಂಡ್- ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (ರಾತ್ರಿ- 7:30 IST)
  2. ಅಕ್ಟೋಬರ್ 6: ಭಾರತ vs ಪಾಕಿಸ್ತಾನ್- ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (ಮಧ್ಯಾಹ್ನ 3:30 IST)
  3. ಅಕ್ಟೋಬರ್ 9: ಭಾರತ vs ಶ್ರೀಲಂಕಾ- ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (ರಾತ್ರಿ 7:30 IST)
  4. ಅಕ್ಟೋಬರ್ 13: ಭಾರತ vs ಆಸ್ಟ್ರೇಲಿಯಾ- ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (ರಾತ್ರಿ 7:30 IST)

ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್, ಯಾಸ್ತಿಕಾ ಭಾಟಿಯಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯದ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.

ಮೀಸಲು ಆಟಗಾರ್ತಿಯರು: ಉಮಾ ಚೆಟ್ರಿ (ವಿಕೆಟ್ ಕೀಪರ್), ತನುಜಾ ಕನ್ವರ್, ಸೈಮಾ ಠಾಕೂರ್.

ಸೆಮಿಫೈನಲ್​​ನಲ್ಲಿ ಸೋತಿದ್ದ ಟೀಮ್ ಇಂಡಿಯಾ:

2023 ರಲ್ಲಿ ನಡೆದ ಮಹಿಳಾ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಅದ್ಭುತ ಪ್ರದರ್ಶನ ನೀಡಿತ್ತು. ಈ ಮೂಲಕ ಸೆಮಿಫೈನಲ್​ಗೆ ಪ್ರವೇಶಿಸಿದ್ದ ಟೀಮ್ ಇಂಡಿಯಾ ನಿರ್ಣಾಯಕ ಪಂದ್ಯದಲ್ಲಿಆಸ್ಟ್ರೇಲಿಯಾ ವಿರುದ್ಧ ಮುಗ್ಗರಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ 4 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿದ್ದರು.

ಇದನ್ನೂ ಓದಿ: Women’s T20 World Cup 2024: ಇಂದಿನಿಂದ ಟಿ20 ವಿಶ್ವಕಪ್ ಶುರು: ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 167 ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಈ ಮೂಲಕ ಕೇವಲ 5 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಬಾರಿ ಕೂಡ ಬಲಿಷ್ಠ ಪಡೆಯನ್ನೇ ರೂಪಿಸಿರುವ ಭಾರತ ತಂಡವು ವಿಶ್ವಕಪ್ ಗೆಲ್ಲುವ ಫೇವರೇಟ್ ತಂಡಗಳಲ್ಲಿ ಗುರುತಿಸಿಕೊಂಡಿದೆ.

Published On - 9:56 am, Thu, 3 October 24

ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!