Womens T20 World Cup 2024: ಹೀಗಾದರೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸುತ್ತೆ..!

Womens T20 World Cup 2024: ವುಮೆನ್ಸ್ ಟಿ20 ವರ್ಲ್ಡ್ ​ಕಪ್​ನ 18ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 20 ಓವರ್​ಗಳಲ್ಲಿ 151 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 142 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವು 9 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

Womens T20 World Cup 2024: ಹೀಗಾದರೆ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಪ್ರವೇಶಿಸುತ್ತೆ..!
Team India
Follow us
ಝಾಹಿರ್ ಯೂಸುಫ್
|

Updated on: Oct 14, 2024 | 6:54 AM

ಮಹಿಳಾ ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಭಾರತ ತಂಡವು ಮುಗ್ಗರಿಸಿದೆ. ಶಾರ್ಜಾದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಕೇವಲ 9 ರನ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲಿನೊಂದಿಗೆ ಭಾರತ ತಂಡದ ಟಿ20 ವಿಶ್ವಕಪ್​ ಕನಸು ಬಹುತೇಕ ಕಮರಿದೆ. ಆದರೆ ಹೊರಬಿದ್ದಿಲ್ಲ ಎಂಬುದು ವಿಶೇಷ. ಅಂದರೆ ಇಂದು ನಡೆಯುವ ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ನಡುವಣ ಪಂದ್ಯದಲ್ಲಿ ಟೀಮ್ ಇಂಡಿಯಾದ ಟಿ20 ವಿಶ್ವಕಪ್ ಭವಿಷ್ಯ ನಿರ್ಧಾರವಾಗಲಿದೆ.

ಗ್ರೂಪ್-ಎ ಅಂಕ ಪಟ್ಟಿಯಲ್ಲಿ 8 ಅಂಕಗಳನ್ನು ಕಲೆಹಾಕಿರುವ ಆಸ್ಟ್ರೇಲಿಯಾ ತಂಡ ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇನ್ನು ದ್ವಿತೀಯ ಸ್ಥಾನಕ್ಕಾಗಿ ಈಗ ಭಾರತ, ಪಾಕಿಸ್ತಾನ್ ಹಾಗೂ ನ್ಯೂಝಿಲೆಂಡ್ ತಂಡಗಳ ನಡುವೆ ಪೈಪೋಟಿ ಇದೆ.

ಪ್ರಸ್ತುತ ಪಾಯಿಂಟ್ಸ್​ ಟೇಬಲ್​ನಲ್ಲಿ +0.322 ನೆಟ್​ ರನ್ ರೇಟ್ ಹೊಂದಿರುವ ಟೀಮ್ ಇಂಡಿಯಾ ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ +0.282 ನೆಟ್ ರನ್ ರೇಟ್ ಹೊಂದಿರುವ ನ್ಯೂಝಿಲೆಂಡ್ ತೃತೀಯ ಸ್ಥಾನದಲ್ಲಿದೆ. ಇನ್ನು -0.488 ನೆಟ್ ರನ್ ರೇಟ್ ಹೊಂದಿರುವ ಪಾಕಿಸ್ತಾನ್ ನಾಲ್ಕನೇ ಸ್ಥಾನದಲ್ಲಿದೆ.

ಇಲ್ಲಿ ಭಾರತ (+0.322) ಮತ್ತು ನ್ಯೂಝಿಲೆಂಡ್ (+0.282) ತಂಡಗಳಿಗೆ ಸೆಮಿಫೈನಲ್ ಪ್ರವೇಶಿಸುವ ಅವಕಾಶವಿದ್ದರೂ ಅದನ್ನು ನಿರ್ಧರಿಸುವುದು ಪಾಕಿಸ್ತಾನ್ ತಂಡ ಎಂಬುದು ವಿಶೇಷ. ಅಂದರೆ ನ್ಯೂಝಿಲೆಂಡ್ ಹಾಗೂ ಪಾಕಿಸ್ತಾನ್ ನಡುವಣ ಪಂದ್ಯದ ಫಲಿತಾಂಶವೇ ಇಲ್ಲಿ ನಿರ್ಣಾಯಕ.

ಈ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಪಾಕಿಸ್ತಾನ್ ತಂಡ ಗೆದ್ದರೆ, ನೆಟ್ ರನ್ ರೇಟ್ ನೆರವಿನಿಂದ ಭಾರತ ತಂಡ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ. ಒಂದು ವೇಳೆ ನ್ಯೂಝಿಲೆಂಡ್ ಗೆದ್ದರೆ 6 ಅಂಕಗಳೊಂದಿಗೆ ಸೆಮೀಸ್​ಗೆ ಎಂಟ್ರಿ ಕೊಡಲಿದೆ. ಇತ್ತ ಟೀಮ್ ಇಂಡಿಯಾ ಹೊರಬೀಳಲಿದೆ.

ಇನ್ನು ನ್ಯೂಝಿಲೆಂಡ್ ವಿರುದ್ಧ ಭಾರೀ ಅಂತರದಿಂದ ಗೆದ್ದರೆ ಪಾಕಿಸ್ತಾನ್ ತಂಡಕ್ಕೂ ಸೆಮಿಫೈನಲ್​ಗೆ ಪ್ರವೇಶಿಸುವ ಅವಕಾಶವಿದೆ. ಹಾಗಿದ್ರೆ ಈ ಮೂರು ತಂಡಗಳು ಸೆಮಿಫೈನಲ್​ಗೆ ಪ್ರವೇಶಿಸುವುದು ಹೇಗೆ ಎಂದು ನೋಡೋಣ…

  • ನ್ಯೂಝಿಲೆಂಡ್ ವಿರುದ್ಧ ಪಾಕಿಸ್ತಾನ್ ತಂಡ ಗೆದ್ದರೆ ಭಾರತ ಸೆಮಿಫೈನಲ್​ಗೆ ಪ್ರವೇಶಿಸುತ್ತದೆ.
  • ಪಾಕಿಸ್ತಾನ್ ವಿರುದ್ಧ ಗೆದ್ದರೆ ನ್ಯೂಝಿಲೆಂಡ್ ತಂಡ ಸೆಮಿಫೈನಲ್​ಗೆ ಎಂಟ್ರಿ ಕೊಡಲಿದೆ.
  • ನ್ಯೂಝಿಲೆಂಡ್ ವಿರುದ್ಧ 150 ರನ್​​ ಬಾರಿಸಿ 53 ರನ್​ಗಳ ಅಂತರದಿಂದ ಗೆದ್ದರೆ ಪಾಕಿಸ್ತಾನ್ ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ.
  • ನ್ಯೂಝಿಲೆಂಡ್ ನೀಡುವ ಟಾರ್ಗೆಟ್ (150 ರನ್​) ಅನ್ನು 9.1 ಓವರ್​ಗಳಲ್ಲಿ ಚೇಸ್ ಮಾಡಿದರೆ, ಪಾಕ್ ತಂಡ ಸೆಮಿಫೈನಲ್​ಗೆ ಪ್ರವೇಶಿಸುತ್ತದೆ.

ಇದನ್ನೂ ಓದಿ: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಟೀಮ್ ಇಂಡಿಯಾ

ಅಂದರೆ ಇಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್​ಗೆ ಅರ್ಹತೆ ಪಡೆಯಬೇಕಿದ್ದರೆ ನ್ಯೂಝಿಲೆಂಡ್ ತಂಡ ಸೋಲಬೇಕು. ಪಾಕಿಸ್ತಾನ್ ತಂಡ ಭಾರೀ ಅಂತರದಿಂದ ಗೆಲ್ಲಬಾರದು. ಹೀಗಾದರೆ ಭಾರತ ತಂಡವು ನೆಟ್ ರನ್ ರೇಟ್​ನಲ್ಲಿ ಎರಡೂ ತಂಡಗಳನ್ನು ಹಿಂದಿಕ್ಕಿ ಸೆಮಿಫೈನಲ್​ಗೆ ಪ್ರವೇಶಿಸಬಹುದು.

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ