AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women’s T20 World Cup 2026: ಚಾಂಪಿಯನ್‌ ತಂಡಕ್ಕೆ ಸಿಗಲಿದೆ ದಾಖಲೆಯ ಬಹುಮಾನ..!

Women's T20 World Cup 2026 Prize Money: 10ನೇ ಮಹಿಳಾ ಟಿ20 ವಿಶ್ವಕಪ್ ಜೂನ್ 12ರಿಂದ ಜುಲೈ 5ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ನಡೆಯಲಿದೆ. ಈ ಬಾರಿಯ ಪಂದ್ಯಾವಳಿಯಲ್ಲಿ 12 ತಂಡಗಳು ಭಾಗವಹಿಸಲಿದ್ದು, ಒಟ್ಟು ಬಹುಮಾನದ ಮೊತ್ತ 83 ಕೋಟಿ ರೂ.ಗೆ ಏರಿಕೆಯಾಗಿದೆ. ಜೂನ್ 14ರಂದು ಭಾರತ ತಂಡ ಪಾಕಿಸ್ತಾನ ವಿರುದ್ಧ ತನ್ನ ಅಭಿಯಾನ ಆರಂಭಿಸಲಿದೆ. ವಿಜೇತ ತಂಡಕ್ಕೆ 21.8 ಕೋಟಿ ರೂ. ಬಹುಮಾನ ಲಭಿಸಲಿದೆ.

Women's T20 World Cup 2026: ಚಾಂಪಿಯನ್‌ ತಂಡಕ್ಕೆ ಸಿಗಲಿದೆ ದಾಖಲೆಯ ಬಹುಮಾನ..!
T20 World Cup
ಪೃಥ್ವಿಶಂಕರ
|

Updated on:Jun 04, 2026 | 3:28 PM

Share

10 ನೇ ಆವೃತ್ತಿಯ ಮಹಿಳಾ ಟಿ20 ವಿಶ್ವಕಪ್​ಗೆ (Women’s T20 World Cup 2026) ಕ್ಷಣಗಣನೆ ಆರಂಭವಾಗಿದೆ. ಜೂನ್ 12 ರಿಂದ ಜುಲೈ 5 ರವರೆಗೆ ಇಂಗ್ಲೆಂಡ್ ಮತ್ತು ವೇಲ್ಸ್ ಆತಿಥ್ಯದಲ್ಲಿ ಈ ಪಂದ್ಯಾವಳಿ ನಡೆಯಲಿದೆ. 24 ದಿನಗಳ ಈ ಪಂದ್ಯಾವಳಿಯಲ್ಲಿ ಹನ್ನೆರಡು ತಂಡಗಳು ಭಾಗವಹಿಸಲಿದ್ದು, ಒಟ್ಟು 33 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಉದ್ಘಾಟನಾ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾಗಲಿದ್ದು, ಭಾರತ ಜೂನ್ 14 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಈ ಬಾರಿ, ಪಂದ್ಯಾವಳಿಯ ಒಟ್ಟು ಬಹುಮಾನದ ಹಣವನ್ನು 83ಕೋಟಿ ರೂ.ಗೆ ಏರಿಸಲಾಗಿದೆ ಎಂಬುದು ಗಮನಿಸಬೇಕಾದ ಸಂಗತಿಯಾಗಿದೆ.

  • ಹಿಂದಿನ ಆವೃತ್ತಿಗೆ ಹೋಲಿಸಿದರೆ ಒಟ್ಟು ಬಹುಮಾನದ ಹಣವನ್ನು ಶೇಕಡಾ 10 ರಷ್ಟು ಹೆಚ್ಚಿಸಲಾಗಿದೆ.
  • ಯುಎಇಯಲ್ಲಿ ನಡೆದ ಕಳೆದ ಮಹಿಳಾ ಟಿ20 ವಿಶ್ವಕಪ್‌ನ ಒಟ್ಟು ಬಹುಮಾನದ ಮೊತ್ತ 74 ಕೋಟಿ ರೂ.ಗಳಾಗಿತ್ತು.
  • ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ 12 ತಂಡಗಳು ಭಾಗವಹಿಸಲಿವೆ.
  • ಕಳೆದ ಆವೃತ್ತಿಯ ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಿದ್ದವು.
  • ಭಾಗವಹಿಸುವ 12 ತಂಡಗಳು ಕನಿಷ್ಠ 2.06 ಕೋಟಿ ರೂಪಾಯಿಗಳ ಖಚಿತ ಬಹುಮಾನ ಹಣವನ್ನು ಪಡೆಯುತ್ತವೆ.
  • ಭಾರತ ತಂಡ ಜೂನ್ 14 ರಂದು ಪಾಕಿಸ್ತಾನ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.
  • 2026 ರ ಪುರುಷರ ಟಿ20 ವಿಶ್ವಕಪ್ ವಿಜೇತ ತಂಡಕ್ಕೆ 25 ಕೋಟಿ ರೂಪಾಯಿಗಳನ್ನು ನೀಡಲಾಗಿತ್ತು.

ಯಾರಿಗೆ ಎಷ್ಟು ಬಹುಮಾನ ಸಿಗಲಿದೆ?

  • ವಿಜೇತ ತಂಡಕ್ಕೆ: 21.8 ಕೋಟಿ ರೂ.
  • ರನ್ನರ್ ಅಪ್ ತಂಡಕ್ಕೆ: 10 ಕೋಟಿ ರೂ.
  • ಸೆಮಿಫೈನಲಿಸ್ಟ್‌ ತಂಡಗಳಿಗೆ: 6.29 ಕೋಟಿ ರೂ.
  • ಗುಂಪು ಪಂದ್ಯಗಳನ್ನು ಗೆದ್ದ ತಂಡಗಳಿಗೆ: 29 ಲಕ್ಷ ರೂ.

ಭಾರತದ ವೇಳಾಪಟ್ಟಿ

  • ಜೂನ್ 14 ರಂದು ಪಾಕಿಸ್ತಾನ ವಿರುದ್ಧ
  • ಜೂನ್ 17 ರಂದು ನೆದರ್ಲ್ಯಾಂಡ್ಸ್ ವಿರುದ್ಧ
  • ಜೂನ್ 21 vs ದಕ್ಷಿಣ ಆಫ್ರಿಕಾ ವಿರುದ್ಧ
  • ಜೂನ್ 25 ರಂದು ಬಾಂಗ್ಲಾದೇಶ ವಿರುದ್ಧ
  • ಜೂನ್ 28 ರಂದು ಆಸ್ಟ್ರೇಲಿಯಾ ವಿರುದ್ಧ

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:28 pm, Thu, 4 June 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'