
ಭಾನುವಾರ ನಡೆದ ಮಹಿಳಾ ಟಿ20 ವಿಶ್ವಕಪ್ 2026 (women’s t20 world cup 2026) ರ 30 ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ (India vs Australia) ಮಹಿಳಾ ತಂಡಗಳು ಮುಖಾಮುಖಿಯಾಗಿದ್ದವು. ಸೆಮಿಫೈನಲ್ ದೃಷ್ಟಿಯಿಂದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲ್ಲಲೇಬೇಕಿತ್ತು. ಆದರೆ ಬಲಿಷ್ಠ ಆಸ್ಟ್ರೇಲಿಯಾದ ವಿರುದ್ಧ ಮುಗ್ಗರಿಸಿದ ಹರ್ಮನ್‌ಪ್ರೀತ್ ಕೌರ್ ಪಡೆ 6 ವಿಕೆಟ್‌ಗಳ ಸೋಲು ಅನುಭವಿಸಿತು. ಈ ಸೋಲಿನೊಂದಿಗೆ ಭಾರತ ಟಿ20 ವಿಶ್ವಕಪ್ ಫೈನಲ್ ರೇಸ್‌ನಿಂದ ಹೊರಬಿದ್ದರೆ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಎ ಗುಂಪಿನಿಂದ ಸೆಮಿಫೈನಲ್‌ಗೆ ಅರ್ಹತೆ ಪಡೆದವು. ಗುಂಪು ಹಂತದಲ್ಲಿ ಆಸ್ಟ್ರೇಲಿಯಾ ಅಜೇಯವಾಗಿ ಉಳಿದರೆ, ದಕ್ಷಿಣ ಆಫ್ರಿಕಾ 8 ಅಂಕಗಳೊಂದಿಗೆ ಎರಡನೇ ಸ್ಥಾನ ಮತ್ತು ಭಾರತ 6 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದವು. ಇದೀಗ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ತಂಡವನ್ನು ಎದುರಿಸಿದರೆ, ದಕ್ಷಿಣ ಆಫ್ರಿಕಾ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಲಂಡನ್‌ನ ಲಾರ್ಡ್ಸ್‌ನಲ್ಲಿ ನಡೆದ ಈ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 170 ರನ್ ಗಳಿಸಿತು. ತಂಡದ ಪರ ನಾಯಕಿಯ ಇನ್ನಿಂಗ್ಸ್ ಆಡಿದ ಹರ್ಮನ್‌ಪ್ರೀತ್ ಕೌರ್ ಕೊನೆಯ ಓವರ್‌ನಲ್ಲಿ ಅವರು ಸತತ ಮೂರು ಸಿಕ್ಸರ್‌ಗಳನ್ನು ಬಾರಿಸಿ ತಂಡವನ್ನು ಈ ಮೊತ್ತಕ್ಕೆ ಕೊಂಡೊಯ್ದರು. ಹರ್ಮನ್ ಪ್ರೀತ್ ಕೌರ್ 27 ಎಸೆತಗಳಲ್ಲಿ 56 ರನ್‌ಗಳ ಇನ್ನಿಂಗ್ಸ್ ಆಡಿದರೆ, ಸ್ಮೃತಿ ಮಂಧಾನ 37 ಎಸೆತಗಳಲ್ಲಿ 38 ರನ್, ಶಫಾಲಿ ವರ್ಮಾ 26 ಎಸೆತಗಳಲ್ಲಿ 34 ರನ್ ಮತ್ತು ಜೆಮಿಮಾ ರೊಡ್ರಿಗಸ್ 28 ಎಸೆತಗಳಲ್ಲಿ 34 ರನ್ ಗಳಿಸಿದರು. ರಿಚಾ ಘೋಷ್ 1 ರನ್ ಮತ್ತು ದೀಪ್ತಿ ಶರ್ಮಾ 4 ರನ್ ಗಳಿಸಿ ಅಜೇಯರಾಗಿ ಉಳಿದರು.
ಒಂದೇ ಒಂದು ಪಂದ್ಯ ಗೆದ್ದು ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಪಾಕಿಸ್ತಾನ
ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ ಮೊದಲ ಓವರ್‌ನಲ್ಲೇ ತನ್ನ ಮೊದಲ ವಿಕೆಟ್ ಕಳೆದುಕೊಂಡಿತು. ಆದರೆ ಆ ನಂತರ ಬಂದ ಬ್ಯಾಟರ್ಗಳು ತಂಡದ ಇನ್ನಿಂಗ್ಸ್ ಕಟ್ಟಿದರು. ಆದಾಗ್ಯೂ ತಂಡದ ಮೊತ್ತ 68 ರನ್ಗಳಿರುವಾಗ ಅನುಭವಿ ಬೆತ್ ಮೂನಿ 10 ನೇ ಓವರ್‌ನಲ್ಲಿ ವಿಕೆಟ್ ಕಳೆದುಕೊಳ್ಳುವ ಮೂಲಕ ಟೀಂ ಇಂಡಿಯಾದ ಗೆಲುವಿನ ಆಸೆಗೆ ನೀರೆರೆದರು. ಆದರೆ ಆ ಬಳಿಕ ಜೊತೆಯಾದ ಎಲಿಸ್ ಪೆರ್ರಿ ಮತ್ತು ಆಶ್ಲೀ ಗಾರ್ಡ್ನರ್ ಭಾರತದ ಬೌಲರ್ಗಳ ಮೇಲೆ ಸವಾರಿ ನಡೆಸಲು ಶುರು ಮಾಡಿದರು. ಇವರಿಬ್ಬರು 100 ರನ್‌ಗಳ ಜೊತೆಯಾಟವನ್ನಾಡುವ ಮೂಲಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಪೆರ್ರಿ 38 ಎಸೆತಗಳಲ್ಲಿ 56 ಬಾರಿಸಿದರೆ, ಗಾರ್ಡ್ನರ್ 29 ಎಸೆತಗಳಲ್ಲಿ 53 ರನ್ ಕಲೆಹಾಕಿದರು.
Published On - 10:38 pm, Sun, 28 June 26