AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2025: ಮಳೆಯಿಂದಾಗಿ ಕೊನೆಯ ಲೀಗ್ ಪಂದ್ಯ ರದ್ದು; ಸೆಮೀಸ್​ನಲ್ಲಿ ಭಾರತ- ಆಸೀಸ್ ಫೈಟ್

Women's World Cup 2025: 2025ರ ಮಹಿಳಾ ವಿಶ್ವಕಪ್‌ನಲ್ಲಿ ಭಾರತ-ಬಾಂಗ್ಲಾದೇಶ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಮುಂಬೈನಲ್ಲಿ ನಿರಂತರ ಮಳೆಯಿಂದಾಗಿ 27 ಓವರ್‌ಗಳಿಗೆ ಇಳಿಸಲಾದ ಪಂದ್ಯದಲ್ಲಿ, ಬಾಂಗ್ಲಾದೇಶ 119 ರನ್ ಗಳಿಸಿತು. ಭಾರತ 57/0 ರನ್ ಗಳಿಸಿದ್ದಾಗ ಮಳೆಯಿಂದ ಪಂದ್ಯವನ್ನು ನಿಲ್ಲಿಸಲಾಯಿತು. ಪಂದ್ಯ ರದ್ದಾದರೂ, ಭಾರತ ತಂಡ ಸೆಮಿಫೈನಲ್‌ಗೆ ಪ್ರವೇಶಿಸಿದೆ. ಅಕ್ಟೋಬರ್ 30ರಂದು ಭಾರತ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

World Cup 2025: ಮಳೆಯಿಂದಾಗಿ ಕೊನೆಯ ಲೀಗ್ ಪಂದ್ಯ ರದ್ದು; ಸೆಮೀಸ್​ನಲ್ಲಿ ಭಾರತ- ಆಸೀಸ್ ಫೈಟ್
Team India
ಪೃಥ್ವಿಶಂಕರ
|

Updated on:Oct 26, 2025 | 11:03 PM

Share

2025 ರ ಮಹಿಳಾ ವಿಶ್ವಕಪ್‌ನ (Women’s World Cup 2025) 28 ನೇ ಮತ್ತು ಕೊನೆಯ ಲೀಗ್ ಪಂದ್ಯ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಬಾಂಗ್ಲಾದೇಶ (India vs Bangladesh) ನಡುವೆ ನಡೆಯಿತು. ಆದರೆ ನಿರಂತರ ಮಳೆಯಿಂದಾಗಿ ಪಂದ್ಯವನ್ನು ಅರ್ಧಕ್ಕೆ ರದ್ದುಗೊಳಿಸಲಾಯಿತು. ಮಳೆಯಿಂದಾಗಿ ಈ ಪಂದ್ಯವನ್ನು ತಲಾ 27 ಓವರ್​ಗಳಿಗೆ ಇಳಿಸಲಾಯಿತು. ಹೀಗಾಗಿ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ತಂಡ 9ವಿಕೆಟ್ ಕಳೆದುಕೊಂಡು 119 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ ತಂಡ ಮೊದಲ 9 ಓವರ್​ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ 57 ರನ್ ಕಲೆಹಾಕಿತ್ತು. ಆದರೆ ಈ ಹೊತ್ತಿಗೆ ಮಳೆ ಸುರಿಯಲಾರಂಭಿಸಿದರಿಂದ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು. ಮಳೆ ಜೋರಾದ ಕಾರಣ ಪಂದ್ಯವನ್ನು ರದ್ದುಗೊಳಿಸಲು ತೀರ್ಮಾನಿಸಲಾಯಿತು. ಇದೀಗ ಅಕ್ಟೋಬರ್ 30 ರಂದು ನಡೆಯಲಿರುವ ಸೆಮಿಫೈನಲ್‌ನಲ್ಲಿ ಭಾರತ, ಆಸ್ಟ್ರೇಲಿಯಾವನ್ನು ಎದುರಿಸಲಿದೆ.

ಪಂದ್ಯಕ್ಕೆ ಅಡ್ಡಿಪಡಿಸಿದ ಮಳೆ

ಮೇಲೆ ಹೇಳಿದಂತೆ ಮಳೆಯಿಂದಾಗಿ ಪಂದ್ಯವನ್ನು ತಡವಾಗಿ ಆರಂಭಿಸಬೇಕಾಯಿತು. ಇದರಿಂದಾಗಿ ಟಾಸ್ ಕೂಡ ವಿಳಂಬವಾಯಿತು. ಮೊದಲು ಓವರ್‌ಗಳನ್ನು ಕಡಿಮೆ ಮಾಡಿ ಪಂದ್ಯವನ್ನು ಪ್ರತಿ ಇನ್ನಿಂಗ್ಸ್‌ಗೆ 43 ಓವರ್‌ಗಳಿಗೆ ಸೀಮಿತಗೊಳಿಸಲಾಯಿತು. ನಂತರ ಮತ್ತೆ ಮಳೆ ಬಂದು ಪಂದ್ಯವನ್ನು ಸುಮಾರು ಒಂದು ಗಂಟೆ ನಿಲ್ಲಿಸಲಾಯಿತು, ನಂತರ ಅಂಪೈರ್‌ಗಳು ಪ್ರತಿ ಇನ್ನಿಂಗ್ಸ್‌ಗೆ 27 ಓವರ್‌ಗಳನ್ನು ಮೀಸಲಿರಿಸಿದರು.

119 ರನ್​​ಗಳಿಗೆ ಬಾಂಗ್ಲಾ ಆಲೌಟ್

ಈ ಪಂದ್ಯದಲ್ಲಿ, ಭಾರತದ ನಾಯಕಿ ಹರ್ಮನ್‌ಪ್ರೀತ್ ಕೌರ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ 27 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 119 ರನ್ ಗಳಿಸಿತು. ತಂಡದ ಪರ ಶರ್ಮಿನ್ ಅಖ್ತರ್ ಗರಿಷ್ಠ 36 ರನ್‌ ಬಾರಿಸಿದರು. ಭಾರತ ಪರ ರಾಧಾ ಯಾದವ್ ಮೂರು ವಿಕೆಟ್‌ಗಳನ್ನು ಪಡೆದರೆ, ಶ್ರೀ ಚರಣಿ ಎರಡು ವಿಕೆಟ್‌ಗಳನ್ನು ಪಡೆದರು. ರೇಣುಕಾ ಸಿಂಗ್, ದೀಪ್ತಿ ಶರ್ಮಾ ಮತ್ತು ಅಮನ್‌ಜೋತ್ ಕೌರ್ ಅದ್ಭುತ ಬೌಲಿಂಗ್ ಮಾಡಿ ತಲಾ ಒಂದು ವಿಕೆಟ್ ಪಡೆದರು.

ಪ್ರತೀಕಾ ರಾವಲ್​ಗೆ ಗಂಭೀರ ಗಾಯ

ಗೆಲ್ಲಲು 126 ರನ್‌ಗಳ ಗುರಿ ಪಡೆದ ಭಾರತ ಉತ್ತಮ ಆರಂಭ ಪಡೆಯಿತು. ಈ ಪಂದ್ಯದಲ್ಲಿ ತಂಡದ ಆರಂಭಿಕರು ಬದಲಾಗಿದ್ದರು. ಏಕೆಂದರೆ ಫಿಲ್ಡಿಂಗ್ ಮಾಡುವ ವೇಳೆ ಆರಂಭಿಕ ಆಟಗಾರ್ತಿ ಪ್ರತೀಕಾ ರಾವಲ್ ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಅವರ ಬದಲಿಗೆ ಅಮನ್‌ಜೋತ್ ಕೌರ್, ಸ್ಮೃತಿ ಮಂಧಾನ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದರು. ಮಳೆ ಬಂದಾಗ ಟೀಂ ಇಂಡಿಯಾ ವಿಕೆಟ್ ನಷ್ಟವಿಲ್ಲದೆ 57 ರನ್ ಗಳಿಸಿತ್ತು. ಸ್ಮೃತಿ ಮಂಧಾನ 34 ರನ್ ಬಾರಿಸಿದ್ದರೆ, ಅಮನ್‌ಜೋತ್ ಕೌರ್ 15 ರನ್ ಬಾರಿಸಿದ್ದರು.

Published On - 11:01 pm, Sun, 26 October 25

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ