Women’s World Cup 2022: ಪ್ರೇಕ್ಷಕರು ಮೂಕವಿಸ್ಮಿತ: ಮಿಂಚಿನ ವೇಗದಲ್ಲಿ ಅದ್ಭುತ ಕ್ಯಾಚ್

| Updated By: ಝಾಹಿರ್ ಯೂಸುಫ್

Updated on: Mar 20, 2022 | 3:08 PM

ಇನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 48.5 ಓವರ್‌ಗಳಲ್ಲಿ 203 ರನ್‌ಗಳಿಗೆ ಆಲೌಟ್ ಆಗಿತ್ತು. 204 ರನ್ ಗಳ ಗುರಿ ಪಡೆದ ಇಂಗ್ಲೆಂಡ್ ಪರ ನಾಯಕಿ ಹೀದರ್ ನೈಟ್ 42 ರನ್​ಗಳಿಸಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು.

Womens World Cup 2022: ಪ್ರೇಕ್ಷಕರು ಮೂಕವಿಸ್ಮಿತ: ಮಿಂಚಿನ ವೇಗದಲ್ಲಿ ಅದ್ಭುತ ಕ್ಯಾಚ್
Heather Knight
Follow us on

ಮಹಿಳಾ ವಿಶ್ವಕಪ್​ ಅತ್ಯಾದ್ಭುತ ಫೀಲ್ಡಿಂಗ್​ಗೆ ಸಾಕ್ಷಿಯಾಗುತ್ತಿದೆ. ಕಳೆದ ದಿನಗಳ ಹಿಂದೆಯಷ್ಟೇ ವೆಸ್ಟ್ ಇಂಡೀಸ್ ಆಟಗಾರ್ತಿ ಡೊಟಿನ್ ಅದ್ಭುತ ಡೈವಿಂಗ್ ಕ್ಯಾಚ್ ಮೂಲಕ ಎಲ್ಲರನ್ನು ನಿಬ್ಬೆರಗಾಗಿಸಿದ್ದರು. ಇದೀಗ ಇಂಗ್ಲೆಂಡ್ ತಂಡದ ನಾಯಕಿ ಹೀದರ್ ನೈಟ್ ಕೂಡ ರಾಕೆಟ್ ವೇಗದಲ್ಲಿ ಕ್ಯಾಚ್ ಹಿಡಿಯುವ ಮೂಲಕ ಎಲ್ಲರನ್ನು ಮೂಕವಿಸ್ಮಿತರನ್ನಾಗಿಸಿದ್ದಾರೆ. ಆಕ್ಲೆಂಡ್​ನಲ್ಲಿ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ಮುಖಾಮುಖಿಯಾಗಿತ್ತು. ಮೊದಲ ಬ್ಯಾಟ್ ಮಾಡಿದ ನ್ಯೂಜಿಲೆಂಡ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು.

ಪಂದ್ಯದ 39ನೇ ಓವರ್​ನ ಎರಡನೇ ಎಸೆತದಲ್ಲಿ ನ್ಯೂಜಿಲೆಂಡ್ ಆಟಗಾರ್ತಿ ಲೀ ತಾಹುಹು ಸ್ಟ್ರೈಟ್ ಹೊಡೆತಕ್ಕೆ ಮುಂದಾಗಿದ್ದರು. ಚೆಂಡು ಗಾಳಿಯಲ್ಲಿ ಚಿಮ್ಮುತ್ತಿದ್ದಂತೆ ಅಲ್ಲೇ ಫೀಲ್ಡಿಂಗ್​ನಲ್ಲಿದ್ದ ಇಂಗ್ಲೆಂಡ್ ನಾಯಕಿ ಹೀದರ್ ನೈಟ್ ಗಾಳಿಯಲ್ಲಿ ಜಿಗಿದು ಒಂದೇ ಕೈಯಿಂದ ಚೆಂಡನ್ನು ಹಿಡಿದು ಕ್ಯಾಚ್ ತಮ್ಮದಾಗಿಸಿಕೊಂಡರು. ಈ ಅದ್ಭುತ ಕ್ಯಾಚ್ ನೋಡಿ ಎಲ್ಲರೂ ನಿಬ್ಬೆರಗಾದರು. ಇದೀಗ ಹೀದರ್ ನೈಟ್​ ಹಿಡಿದಿರುವ ಅತ್ಯಾದ್ಭುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನ್ಯೂಜಿಲೆಂಡ್ ತಂಡ 203 ರನ್‌ಗಳಿಗೆ ಆಲೌಟ್:
ಇನ್ನು ಈ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 48.5 ಓವರ್‌ಗಳಲ್ಲಿ 203 ರನ್‌ಗಳಿಗೆ ಆಲೌಟ್ ಆಗಿತ್ತು. 204 ರನ್ ಗಳ ಗುರಿ ಪಡೆದ ಇಂಗ್ಲೆಂಡ್ ಪರ ನಾಯಕಿ ಹೀದರ್ ನೈಟ್ 42 ರನ್​ಗಳಿಸಿ ತಂಡಕ್ಕೆ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು. ಅಂತಿಮವಾಗಿ ಇಂಗ್ಲೆಂಡ್ ತಂಡವು 47.2 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ ಗುರಿ ಮುಟ್ಟುವ ಮೂಲಕ ರೋಚಕ ಜಯ ತನ್ನದಾಗಿಸಿಕೊಂಡಿತು.

ಇದನ್ನೂ ಓದಿ: IPL 2022: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಇವರೇ..!

ಇದನ್ನೂ ಓದಿ: IPL 2022: ಐಪಿಎಲ್ ಪಂದ್ಯವೊಂದರಲ್ಲಿ ಅತೀ ಹೆಚ್ಚು ಸಿಕ್ಸ್​ ಸಿಡಿಸಿದ ಬ್ಯಾಟರ್ ಯಾರು ಗೊತ್ತಾ?

(Women’s World Cup 2022: Heather Knight pulls off an incredible one handed catch of Lea Tahuhu)