AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Womens World Cup 2022: ಆಂಗ್ಲರ ವಿರುದ್ಧ ಸೋತ ಭಾರತಕ್ಕೆ ಸೆಮೀಸ್ ಹಾದಿ ಮತ್ತಷ್ಟು ಕಠಿಣ! ಮುಂದಿದೆ ಮಹಾ ಸವಾಲು

Womens World Cup 2022: ಸಮಸ್ಯೆಯೆಂದರೆ ಟೀಂ ಇಂಡಿಯಾ ಮುಂದಿನ ಎರಡು ಪಂದ್ಯಗನ್ನು ಬಲಿಷ್ಠ ತಂಡಗಳೆದುರು ಆಡಬೇಕಾಗಿದೆ. ಒಂದು ವೇಳೆ ಭಾರತ ತಂಡ ಫಾರ್ಮ್‌ನಿಂದ ಹೊರಗುಳಿದ ಇಂಗ್ಲೆಂಡ್ ತಂಡವನ್ನು ಸೋಲಿಸಿದ್ದರೆ, ಸೆಮಿಫೈನಲ್‌ಗೆ ಪ್ರವೇಶಿಸುವ ಹಕ್ಕು ಬಲಗೊಳ್ಳುತ್ತಿತ್ತು.

Womens World Cup 2022: ಆಂಗ್ಲರ ವಿರುದ್ಧ ಸೋತ ಭಾರತಕ್ಕೆ ಸೆಮೀಸ್ ಹಾದಿ ಮತ್ತಷ್ಟು ಕಠಿಣ! ಮುಂದಿದೆ ಮಹಾ ಸವಾಲು
ಟೀಂ ಇಂಡಿಯಾ
TV9 Web
| Updated By: ಪೃಥ್ವಿಶಂಕರ|

Updated on: Mar 16, 2022 | 2:22 PM

Share

ಮಹಿಳಾ ವಿಶ್ವಕಪ್ 2022 ( Womens World Cup 2022)ರಲ್ಲಿ, ಟೀಂ ಇಂಡಿಯಾ ಬುಧವಾರ ಇಂಗ್ಲೆಂಡ್ ವಿರುದ್ಧ (England Women vs India Women) ಹೀನಾಯ ಸೋಲನುಭವಿಸಿತು. ಮೌಂಟ್ ಮೌಂಗನುಯಿ ಮೈದಾನದಲ್ಲಿ ಟೀಂ ಇಂಡಿಯಾ ಕೇವಲ 136 ರನ್‌ಗಳಿಗೆ ಆಲೌಟ್ ಆಗಿದ್ದು, ಇಂಗ್ಲೆಂಡ್ 6 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಬೆನ್ನಟ್ಟಿತು. ಟೂರ್ನಿಯಲ್ಲಿ ಇಂಗ್ಲೆಂಡ್ ಮೊದಲ ಜಯ ದಾಖಲಿಸಿದರೆ, ಭಾರತ ನಾಲ್ಕು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದೆ. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋತಿರುವುದು ಟೀಂ ಇಂಡಿಯಾಗೆ ದೊಡ್ಡ ಹೊಡೆತ ನೀಡಿದೆ. ಏಕೆಂದರೆ ಟೀಮ್ ಇಂಡಿಯಾಗೆ ಇನ್ನೂ ಮೂರು ಲೀಗ್ ಪಂದ್ಯಗಳು ಉಳಿದಿವೆ ಆದರೆ ಸಮಸ್ಯೆಯೆಂದರೆ ಟೀಂ ಇಂಡಿಯಾ ಮುಂದಿನ ಎರಡು ಪಂದ್ಯಗನ್ನು ಬಲಿಷ್ಠ ತಂಡಗಳೆದುರು ಆಡಬೇಕಾಗಿದೆ. ಒಂದು ವೇಳೆ ಭಾರತ ತಂಡ ಫಾರ್ಮ್‌ನಿಂದ ಹೊರಗುಳಿದ ಇಂಗ್ಲೆಂಡ್ ತಂಡವನ್ನು ಸೋಲಿಸಿದ್ದರೆ, ಸೆಮಿಫೈನಲ್‌ಗೆ ಪ್ರವೇಶಿಸುವ ಹಕ್ಕು ಬಲಗೊಳ್ಳುತ್ತಿತ್ತು.

ಸೆಮಿಫೈನಲ್ ತಲುಪಲು ಟೀಂ ಇಂಡಿಯಾ ಏಕೆ ಪರದಾಡಬೇಕಾಗಬಹುದು ಎಂಬುದಕ್ಕೂ ಮುನ್ನ ಪಾಯಿಂಟ್ ಪಟ್ಟಿಯ ಸ್ಥಿತಿಗತಿಯನ್ನು ತಿಳಿಯಬೇಕಿದೆ. ಆಸ್ಟ್ರೇಲಿಯ 4 ಪಂದ್ಯಗಳಲ್ಲಿ 4ರಲ್ಲಿ ಗೆದ್ದು ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಇದುವರೆಗೆ ಆಡಿದ ಎಲ್ಲಾ ಮೂರು ಪಂದ್ಯಗಳನ್ನು ಗೆದ್ದು ಎರಡನೇ ಸ್ಥಾನದಲ್ಲಿದೆ. ಭಾರತ ತಂಡವು 2 ಪಂದ್ಯಗಳಲ್ಲಿ ಗೆದ್ದು, 4 ಅಂಕಗಳು ಮತ್ತು +0.632 ರ ಉತ್ತಮ ರನ್ ರೇಟ್‌ನಿಂದ ಮೂರನೇ ಸ್ಥಾನದಲ್ಲಿದೆ. ಅದೇ ಸಮಯದಲ್ಲಿ, ನ್ಯೂಜಿಲೆಂಡ್ ಮತ್ತು ವೆಸ್ಟ್ ಇಂಡೀಸ್ ಸಹ ತಲಾ 4 ಅಂಕಗಳನ್ನು ಹೊಂದಿದ್ದು, ಈ ಎರಡೂ ತಂಡಗಳು ನಾಲ್ಕು ಮತ್ತು ಐದನೇ ಸ್ಥಾನದಲ್ಲಿವೆ.

ಭಾರತ ಸೆಮಿಫೈನಲ್ ತಲುಪಲು ಏನು ಮಾಡಬೇಕು? ಭಾರತ ತಂಡ ಸೆಮಿಫೈನಲ್ ತಲುಪಲು ಅತ್ಯುತ್ತಮ ಕ್ರಿಕೆಟ್ ಆಡಬೇಕಿದೆ. ಜೊತೆಗೆ ಉಳಿದ ಮೂರು ಪಂದ್ಯಗಳನ್ನು ಗೆದ್ದು 10 ಅಂಕಗಳನ್ನು ಪಡೆಯಬೇಕಿದೆ. ಆದರೆ ಇದು ಆಗದೇ ಇದ್ದರೆ ಕನಿಷ್ಠ 2 ಪಂದ್ಯಗಳನ್ನಾದರೂ ಗೆಲ್ಲಲೇ ಬೇಕು ಜೊತೆಗೆ ನೆಟ್ ರನ್ ರೇಟ್ ಬಗ್ಗೆಯೂ ಕಾಳಜಿ ವಹಿಸಬೇಕಾಗುತ್ತದೆ. ಆದರೆ, ಇಲ್ಲಿರುವ ತೊಂದರೆ ಏನೆಂದರೆ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಇನ್ನೂ ಅಜೇಯ ಆಸ್ಟ್ರೇಲಿಯಾ ವಿರುದ್ಧ ಆಡಬೇಕಿದೆ. ಇದಾದ ಬಳಿಕ ದುರ್ಬಲ ಬಾಂಗ್ಲಾದೇಶವನ್ನು ಎದುರಿಸಬೇಕಾಗಿದೆ ಆದರೆ ಕೊನೆಯ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ. ಇಂತಹ ಪರಿಸ್ಥಿತಿಯಲ್ಲಿ ಭಾರತಕ್ಕೆ ಎರಡು ಪಂದ್ಯಗಳು ಸವಾಲಾಗಿದ್ದು, ಎರಡರಲ್ಲೂ ಸೋಲನುಭವಿಸಿದರೆ ಸೆಮಿಫೈನಲ್ ತಲುಪುವ ನಿರೀಕ್ಷೆ ಹುಸಿಯಾಗಬಹುದು.

ನ್ಯೂಜಿಲೆಂಡ್-ವೆಸ್ಟ್ ಇಂಡೀಸ್ ಅಪಾಯಕಾರಿ ನ್ಯೂಜಿಲೆಂಡ್‌ಗೆ 3 ಪಂದ್ಯಗಳು ಬಾಕಿ ಉಳಿದಿವೆ. ಮುಂದಿನ ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳನ್ನು ಎದುರಿಸಬೇಕಿದೆ. ದಕ್ಷಿಣ ಆಫ್ರಿಕಾ ಕಿವೀಸ್​ಗೆ ಸವಾಲೊಡ್ಡಬಹುದು ಆದರೆ ಇಂಗ್ಲೆಂಡ್ ಮತ್ತು ಪಾಕಿಸ್ತಾನ ಕಿವೀಸ್​ಗೆ ಅಂತಹ ಪ್ರಬಲ ಎದುರಾಳಿಯಲ್ಲ. ಇಂಗ್ಲೆಂಡ್ ತಂಡ ಖಂಡಿತವಾಗಿಯೂ ಬಲಿಷ್ಠವಾಗಿದೆ ಆದರೆ ಅದರ ಲಯ ಎಲ್ಲೋ ಕಳೆದುಹೋಗಿದೆ.

ವೆಸ್ಟ್ ಇಂಡೀಸ್‌ಗೆ ಮೂರು ಪಂದ್ಯಗಳು ಉಳಿದಿವೆ, ಅದರಲ್ಲಿ ಎರಡು ಪಂದ್ಯಗಳನ್ನು ಅವರಿಗೆ ಸುಲಭ ಎಂದು ಕರೆಯಬಹುದು. ಈ ಟೂರ್ನಿಯಲ್ಲಿ ದುರ್ಬಲ ತಂಡಗಳಲ್ಲಿ ಒಂದಾಗಿರುವ ಬಾಂಗ್ಲಾದೇಶ ಮತ್ತು ಪಾಕಿಸ್ತಾನವನ್ನು ವಿಂಡೀಸ್ ಎದುರಿಸಬೇಕಾಗಿದೆ. ಈ ಎರಡು ಪಂದ್ಯಗಳನ್ನು ದೊಡ್ಡ ಅಂತರದಿಂದ ಗೆದ್ದರೆ ಅವರ ನೆಟ್ ರನ್ ರೇಟ್ ಉತ್ತಮವಾಗಿರುತ್ತದೆ. ಮತ್ತೊಂದೆಡೆ, ದಕ್ಷಿಣ ಆಫ್ರಿಕಾ ವಿರುದ್ಧ ಸೋತರೂ, ತಂಡವು ಭಾರತಕ್ಕಿಂತ ಮೇಲುಗೈ ಸಾಧಿಸಬಹುದು. ಇಂಗ್ಲೆಂಡಿನ ಬಗ್ಗೆ ಮಾತನಾಡುವುದಾದರೆ, ಅವರು ತನ್ನ ಎಲ್ಲಾ ಮೂರು ಪಂದ್ಯಗಳನ್ನು ಗೆಲ್ಲಬೇಕು, ಆಗ ಮಾತ್ರ ಅವರು 8 ಅಂಕಗಳನ್ನು ತಲುಪಬಹುದು. ಇಂಗ್ಲೆಂಡ್ ಈ ಸಾಧನೆ ಮಾಡಿದರೆ, ನೆಟ್ ರನ್ ರೇಟ್ ಆಧಾರದ ಮೇಲೆ ಸೆಮಿಫೈನಲ್ ತಂಡಗಳನ್ನು ನಿರ್ಧರಿಸಲಾಗುತ್ತದೆ.

ಇದನ್ನೂ ಓದಿ:IND W VS ENG W: ಆಂಗ್ಲರ ಮುಂದೆ ಮಂಡಿಯೂರಿದ ಭಾರತ! ಮಹಿಳಾ ವಿಶ್ವಕಪ್​ನಲ್ಲಿ 2ನೇ ಸೋಲು

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ