AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Womens World Cup 2022, Points Table: ಕಿವೀಸ್ ವಿರುದ್ಧ ಸೋತು ಪಾಯಿಂಟ್ ಪಟ್ಟಿಯಲ್ಲಿ ಭಾರಿ ಕುಸಿತ ಕಂಡ ಭಾರತ!

Womens World Cup 2022, Points Table: ಮಹಿಳಾ ವಿಶ್ವಕಪ್‌ನ ಇತ್ತೀಚಿನ ಅಂಕಪಟ್ಟಿಯಲ್ಲಿ ಭಾರತ ತಂಡ 5ನೇ ಸ್ಥಾನಕ್ಕೆ ಕುಸಿದಿದೆ.ಎರಡು ಪಂದ್ಯಗಳಿಂದ ಎರಡು ಅಂಕಗಳನ್ನು ಹೊಂದಿರುವ ಭಾರತಕ್ಕೆ ಒಳ್ಳೆಯ ವಿಷಯವೆಂದರೆ ಅವರ ನಿವ್ವಳ ರನ್ ರೇಟ್ +0.450 ಆಗಿದೆ.

Womens World Cup 2022, Points Table: ಕಿವೀಸ್ ವಿರುದ್ಧ ಸೋತು ಪಾಯಿಂಟ್ ಪಟ್ಟಿಯಲ್ಲಿ ಭಾರಿ ಕುಸಿತ ಕಂಡ ಭಾರತ!
ಭಾರತ- ಕಿವೀಸ್ ಆಟಗಾರ್ತಿಯರು
TV9 Web
| Updated By: ಪೃಥ್ವಿಶಂಕರ|

Updated on: Mar 10, 2022 | 3:31 PM

Share

ಹ್ಯಾಮಿಲ್ಟನ್‌ನ ಸೆಡನ್ ಪಾರ್ಕ್‌ನಲ್ಲಿ ನಡೆದ ಮಹಿಳಾ ವಿಶ್ವಕಪ್‌ನ 8ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಭರ್ಜರಿ ಜಯ ದಾಖಲಿಸಿದೆ. ಆತಿಥೇಯರು ಭಾರತಕ್ಕೆ 62 ರನ್‌ಗಳ ಹೀನಾಯ ಸೋಲು ನೀಡಿದ್ದಾರೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 260 ರನ್ ಗಳಿಸಿತು, ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ ಕೇವಲ 198 ರನ್ ಗಳಿಸಿತು. ಹರ್ಮನ್‌ಪ್ರೀತ್ ಕೌರ್ ಅವರ 71 ರನ್ ಹೊರತುಪಡಿಸಿ, ಯಾವುದೇ ಭಾರತೀಯ ಬ್ಯಾಟ್ಸ್‌ಮನ್ ವಿಕೆಟ್‌ ಮುಂದೆ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲಿಲ್ಲ. ಇದರ ಪರಿಣಾಮ ಪಂದ್ಯಾವಳಿಯಲ್ಲಿ ಭಾರತಕ್ಕೆ ಮೊದಲ ಸೋಲು ಎದುರಾಗಿದೆ. ಮೊದಲ ಸೋಲಿನ ನಂತರವೇ ಟೀಮ್ ಇಂಡಿಯಾಗೆ ಸಂಕಷ್ಟ ಸಾಕಷ್ಟು ಹೆಚ್ಚಿದ್ದರೂ ಪಾಯಿಂಟ್ಸ್ ಟೇಬಲ್ (ಮಹಿಳಾ ವಿಶ್ವಕಪ್ 2022, ಪಾಯಿಂಟ್ಸ್ ಟೇಬಲ್) ಮೂಲಕವೂ ಇದು ಸಾಭೀತಾಗಿದೆ.

ಮಹಿಳಾ ವಿಶ್ವಕಪ್‌ನ ಇತ್ತೀಚಿನ ಅಂಕಪಟ್ಟಿಯಲ್ಲಿ ಭಾರತ ತಂಡ 5ನೇ ಸ್ಥಾನಕ್ಕೆ ಕುಸಿದಿದೆ.ಎರಡು ಪಂದ್ಯಗಳಿಂದ ಎರಡು ಅಂಕಗಳನ್ನು ಹೊಂದಿರುವ ಭಾರತಕ್ಕೆ ಒಳ್ಳೆಯ ವಿಷಯವೆಂದರೆ ಅವರ ನಿವ್ವಳ ರನ್ ರೇಟ್ +0.450 ಆಗಿದೆ. ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾದಂತಹ ತಂಡಗಳನ್ನು ಎದುರಿಸಬೇಕಾಗಿರುವುದು ಭಾರತಕ್ಕೆ ಸಮಸ್ಯೆಯಾಗಿದೆ. ಟೀಮ್ ಇಂಡಿಯಾ ಈ ಪಂದ್ಯಗಳನ್ನು ಗೆಲ್ಲಲೇಬೇಕು ಏಕೆಂದರೆ ಈಗ ಒಂದು ಅಥವಾ ಎರಡು ಸೋಲುಗಳು ಸೆಮಿಫೈನಲ್ ಹಾದಿಯಿಂದ ಭಾರತವನ್ನು ಹೊರಗಿಡುತ್ತವೆ.

ಆಸ್ಟ್ರೇಲಿಯಾ ಎರಡು ಪಂದ್ಯಗಳಲ್ಲಿ ಎರಡು ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಜೊತೆಗೆ 4 ಅಂಕಗಳನ್ನು ಹೊಂದಿದ್ದು ನೆಟ್ ರನ್ ರೇಟ್ ಕೂಡ +1.061 ಆಗಿದೆ. ನ್ಯೂಜಿಲೆಂಡ್ ತಂಡ 3 ಪಂದ್ಯಗಳಲ್ಲಿ 2 ಗೆಲುವು ಮತ್ತು ಒಂದು ಸೋಲಿನೊಂದಿಗೆ ಎರಡನೇ ಸ್ಥಾನದಲ್ಲಿದೆ. ವೆಸ್ಟ್ ಇಂಡೀಸ್ 2 ಪಂದ್ಯಗಳಲ್ಲಿ 2 ಗೆಲುವುಗಳನ್ನು ಹೊಂದಿದೆ ಆದರೆ ಅವರ ನಿವ್ವಳ ರನ್ ರೇಟ್ ನ್ಯೂಜಿಲೆಂಡ್‌ಗಿಂತ ಕಡಿಮೆಯಾಗಿದೆ. ಇಂಗ್ಲೆಂಡ್, ಬಾಂಗ್ಲಾದೇಶ, ಪಾಕಿಸ್ತಾನ ಎರಡೂ ಪಂದ್ಯಗಳಲ್ಲಿ ಸೋತು ಪಾಯಿಂಟ್ಸ್ ಪಟ್ಟಿಯಲ್ಲಿ 6, 7 ಮತ್ತು 8ನೇ ಸ್ಥಾನದಲ್ಲಿವೆ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ