AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಬ್ಯಾಟಿಂಗ್-ಬೌಲಿಂಗ್​ನಲ್ಲಿ ಭಾರತ ಬೆಂಕಿ ಪ್ರದರ್ಶನ: ಮಿಥಾಲಿ ಪಡೆಗೆ ಬರೋಬ್ಬರಿ 155 ರನ್​ಗಳ ಜಯ

India Womes vs West Indies Womes, Women's World Cup 2022: ಸ್ಮೃತಿ ಹಾಗೂ ಕೌರ್ ಕೆರಿಬಿಯನ್ ಬೌಲರ್​ಗಳ ಬೆಂಡೆತ್ತಿ ಭರ್ಜರಿ ರನ್ ಕಲೆಹಾಕಿದರು. ಕಠಿಣ ಟಾರ್ಗೆಟ್ ಬೆನ್ನಟ್ಟುವಲ್ಲಿ ವಿಫಲವಾದ ವೆಸ್ಟ್ ಇಂಡೀಸ್ ಭಾರತೀಯ ವನಿತೆಯರ ಸಂಘಟಿತ ಬೌಲಿಂಗ್ ಪ್ರದರ್ಶನಕ್ಕೆ ತಲೆಬಾಗಿತು.

IND vs WI: ಬ್ಯಾಟಿಂಗ್-ಬೌಲಿಂಗ್​ನಲ್ಲಿ ಭಾರತ ಬೆಂಕಿ ಪ್ರದರ್ಶನ: ಮಿಥಾಲಿ ಪಡೆಗೆ ಬರೋಬ್ಬರಿ 155 ರನ್​ಗಳ ಜಯ
West Indies Women vs India Women
TV9 Web
| Edited By: |

Updated on: Mar 12, 2022 | 1:27 PM

Share

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ (ICC Women’s World Cup 2022) ಟೂರ್ನಿಯ 10ನೇ ಪಂದ್ಯದಲ್ಲಿಂದು ನಡೆದ ವೆಸ್ಟ್ ಇಂಡೀಸ್ ಮಹಿಳಾ ತಂಡದ ವಿರುದ್ಧದ ಕದನದಲ್ಲಿ ಭಾರತೀಯ ಮಹಿಳಾ ತಂಡ ದೊಡ್ಡ ಅಂತರದ ಗೆಲುವು ಸಾಧಿಸಿದೆ. ಸ್ಮೃತಿ ಮಂದಾನ (Smriti Mandhana) ಹಾಗೂ ಹರ್ಮನ್​ಪ್ರೀತ್ (Harmanpreet Kaur) ಅವರ ಶತಕದ ಫಲದಿಂದ ಭಾರತ ಎದುರಾಳಿಗೆ ಬಿಗ್ ಟಾರ್ಗೆಟ್ ನೀಡಿತು. ಆರಂಭದಲ್ಲಿ ಪ್ರಮುಖ ವಿಕೆಟ್ ಕಳೆದುಕೊಂಡರೂ ಸ್ಮೃತಿ ಹಾಗೂ ಕೌರ್ ಕೆರಿಬಿಯನ್ ಬೌಲರ್​ಗಳ ಬೆಂಡೆತ್ತಿ ಭರ್ಜರಿ ರನ್ ಕಲೆಹಾಕಿದರು. ಕಠಿಣ ಟಾರ್ಗೆಟ್ ಬೆನ್ನಟ್ಟುವಲ್ಲಿ ವಿಫಲವಾದ ವೆಸ್ಟ್ ಇಂಡೀಸ್ ಭಾರತೀಯ ವನಿತೆಯರ ಸಂಘಟಿತ ಬೌಲಿಂಗ್ ಪ್ರದರ್ಶನಕ್ಕೆ ತಲೆಬಾಗಿತು. ಈ ಮೂಲಕ ಕೆರಿಬಿಯನ್ನರಿಗೆ ಮಿಥಾಲಿ ಪಡೆ ಸೋಲಿನ ರುಚಿ ನೀಡಿದೆ. 155 ರನ್​ಗಳ ಬೃಹತ್ ಗೆಲುವಿನೊಂದಿಗೆ ಟೀಮ್ ಇಂಡಿಯಾ ಅಂಕಪಟ್ಟಿಯಲ್ಲಿ 4 ಅಂಕದೊಂದಿಗೆ ಸಂಪಾದಿಸಿದೆ.

ಹ್ಯಾಮಿಲ್ಟನ್‌ನ ಸೆಡ್ಡನ್ ಪಾರ್ಕ್‌ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್​ಗೆ ಇಳಿದ ಭಾರತ ಸ್ಫೋಟಕ ಆರಂಭ ಪಡೆದುಕೊಳ್ಳುವ ಜೊತೆ ಪ್ರಮುಖ ವಿಕೆಟ್ ಕಳೆದುಕೊಂಡಿತು. ಸ್ಮೃತಿ ಮಂದಾನ ಹಾಗೂ ಯಸ್ತಿಕಾ ಭಾಟಿಯಾ ಇನ್ನಿಂಗ್ಸ್ ಆರಂಭಿಸಿದರು. ಭಾಟಿಯಾ ಕೇವಲ 21 ಎಸೆತಗಳಲ್ಲಿ 6 ಬೌಂಡರಿಯೊಂದಿಗೆ 31 ರನ್ ಸಿಡಿಸಿ ಔಟಾದರು. ಈ ಜೋಡಿ ಮೊದಲ ವಿಕೆಟ್​ಗೆ 6.3 ಓವರ್​ನಲ್ಲಿ 49 ರನ್ ಕಲೆಹಾಕಿತು. ನಾಯಕಿ ಮಿಥಾಲಿ ರಾಜ್ ಈ ಬಾರಿ ಕೂಡ ವೈಫಲ್ಯ ಅನುಭವಿಸಿದರು. ಇವರ ಆಟ ಕೇವಲ 5 ರನ್​ಗೆ ಅಂತ್ಯವಾಯಿತು. ದೀಪ್ತಿ ಶರ್ಮಾ (15) ಕೂಡ ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಲ್ಲದೆ ಬೇಗನೆ ನಿರ್ಗಮಿಸಿದರು.

ಹೀಗೆ ಭಾರತ 78 ರನ್ ಆಗುವ ಗೊತ್ತಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಸಂದರ್ಭ ತಂಡಕ್ಕೆ ಆಸರೆಯಾಗಿದ್ದು ಮಂದಾನ ಹಾಗೂ ಹರ್ಮನ್​ಪ್ರೀತ್ ಕೌರ್. ಆರಂಭದಲ್ಲಿ ಎಚ್ಚರಿಕೆಯ ಆಟವಾಡಿದ ಈ ಜೋಡಿ ಸೆಟಲ್ ಆದಂತೆ ಅಬ್ಬರಿಸಲು ಶುರು ಮಾಡಿತು. ಅದರಲ್ಲೂ ಮಂದಾನ ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದರು. ಇತ್ತ ಹರ್ಮನ್ ಕೂಡ ಇವರಿಗೆ ಅತ್ಯುತ್ತಮ ಸಾಥ್ ನೀಡಿದರು. ಮಂದಾನ ಕೇವಲ 119 ಎಸೆತಗಳಲ್ಲಿ 13 ಬೌಂಡರಿ, 2 ಸಿಕ್ಸರ್ ಸಿಡಿಸಿ 123 ರನ್ ಗಳಿಸಿದರು. ಮಂದಾನ ನಿರ್ಗಮನದ ಬಳಿಕ ಹರ್ಮನ್ ತಮ್ಮ ನೈಜ್ಯ ಆಟಕ್ಕೆ ಮುಂದಾದರು. ಅಂತಿಮ ಹಂತದಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದ ಕೌರ್ ಕೆರಿಬಿಯನ್ ಬೌಲರ್​ಗಳ ಚಳಿ ಬಿಡಿಸಿ ಏಕದಿನ ಕ್ರಿಕೆಟ್​ನಲ್ಲಿ ನಾಲ್ಕನೇ ಶತಕ ಪೂರೈಸಿದರು.

ಕೌರ್ 107 ಎಸೆತಗಳಲ್ಲಿ 10 ಬೌಂಡರಿ, 2 ಸಿಕ್ಸರ್ ಸಿಡಿಸಿ 109 ರನ್ ಚಚ್ಚಿದರು. ಅಂತಿಮವಾಗಿ ಭಾರತ 50 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 317 ರನ್ ಕಲೆಹಾಕಿತು. ವೆಸ್ಟ್ ಇಂಡೀಸ್ ಪರ ಅನಿಸಾ ಮೊಹಮ್ಮದ್ 2, ಶಾಮಿಲಿಯಾ ಕೊನ್ನೆಲ್, ಶಕೆರಾ ಸೆಲ್ಮನ್, ಹೇಯ್ಲಿ ಮ್ಯಾಥ್ಯೂಸ್, ಡಿಯಾಂಡ್ರಾ ಡಾಟಿನ್ ತಲಾ 1 ವಿಕೆಟ್ ಕಿತ್ತರು.

ಕಠಿಣ ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಕೂಡ ಆರಂಭದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿತು. ಮೊದಲ 10 ಓವರ್​ನಲ್ಲಿ ಭಾರತೀಯ ಬೌಲರ್​ಗಳ ಬೆವರಿಳಿಸಿದ ಡಿಯಾಂಡ್ರಾ ಡಾಟಿನ್ ಹಾಗೂ ಹೇಯ್ಲಿ ಮ್ಯಾಥ್ಯೂಸ್ ಬೌಂಡರಿಗಳ ಮಳೆಯನ್ನೇ ಸುರಿಸಿದರು. ಕೇವಲ 12 ಓವರ್ ಆಗುವ ಹೊತ್ತಗೆನೇ ತಂಡದ ಮೊತ್ತವನ್ನು ವಿಕೆಟ್ ನಷ್ಟವಿಲ್ಲದೆ 100ಕ್ಕೆ ತಂದಿಟ್ಟಿದ್ದರು. ಇವರ ಜೊತೆಯಾಟ ಮುರಿಯದಿದ್ದಲ್ಲಿ ಸೋಲು ಖಚಿತ ಎಂದು ನಂಬಿದ ಮಿಥಾಲಿ ಬೌಲಿಂಗ್ ಅನ್ನು ಸ್ನೇಹ್ ರಾಣಗೆ ನೀಡಿದರು.

ಸ್ನೇಹ್ ರಾಣ ತನ್ನ ಮೊದಲ ಓವರ್​ನ ಎರಡನೇ ಎಸೆತದಲ್ಲೇ ಬಿರುಸಿನ ಬ್ಯಾಟಿಂಗ್ ನಡೆಸುತ್ತಿದ್ದ ಡಿಯಾಂಡ್ರಾ ಡಾಟಿನ್ ಅವರನ್ನಿ ಪೆವಿಲಿಯನ್​ಗೆ ಅಟ್ಟಿದರು. ಇವರು ಕೇವಲ 46 ಎಸೆತಗಳಲ್ಲಿ 10 ಬೌಂಡರಿ, 1 ಸಿಕ್ಸರ್​​ನೊಂದಿಗೆ 62 ರನ್ ಚಚ್ಚಿದ್ದರು. ಇದರ ಬೆನ್ನಲ್ಲೇ ಕೈಸಿಯಾ ನೈಟ್ (5) ಮೇಗ್ನಾ ಸಿಂಗ್ ಬೌಲಿಂಗ್​ನಲ್ಲಿ ಔಟಾದರೆ, ನಾಯಕಿ ಸ್ಟೆಫನಿ ಟೇಲರ್ ಆಟ 1 ರನ್​ಗೆ ಅಂತ್ಯವಾಯಿತು. ಇತ್ತ ಹೇಯ್ಲಿ ಮ್ಯಾಥ್ಯೂಸ್ ಕೂಡ 36 ಎಸೆತಗಳಲ್ಲಿ 43 ರನ್​ಗೆ ಸುಸ್ತಾದರು.

ಹೀಗೆ ಆರಂಭದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿ 100 ರನ್​ಗೆ ಮೊದಲ ವಿಕೆಟ್ ಕಳೆದುಕೊಂಡಿದ್ದ ವೆಸ್ಟ್ ಇಂಡೀಸ್ 162 ರನ್​ಗೆ ಸರ್ವಪತನ ಕಂಡಿತು. ಅದುಕೂಡ 40.3 ಓವರ್​ಗಳಲ್ಲಿ. ಭಾರತ ಪರ ಸ್ನೇಹರ್ ರಾಣ 3, ಮೇಗ್ನಾ ಸಿಂಗ್ 2 ವಿಕೆಟ್ ಕಿತ್ತರೆ, ರಾಜೇಶ್ವರಿ ಗಾಯಕ್ವಾಡ್, ಜೂಲನ್ ಗೋಸ್ವಾಮಿ ಮತ್ತು ಪೂಜಾ ವಸ್ತ್ರಾಕರ್ ತಲಾ 1 ವಿಕೆಟ್ ಪಡೆದರು.

RCB Unbox: ಇಂದು ಆರ್​​ಸಿಬಿ ಹೊಸ ನಾಯಕನ ಘೋಷಣೆ: ಎಷ್ಟು ಗಂಟೆಗೆ?, ಯಾವುದರಲ್ಲಿ ನೇರಪ್ರಸಾರ?

Sushil Kumar: ತಿಹಾರ್ ಜೈಲಿನಲ್ಲಿರುವ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್​ರಿಂದ ಕೈದಿಗಳಿಗೆ ಫಿಟ್‌ನೆಸ್ ತರಬೇತಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?