World Cup 2025: ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ ಯಾವಾಗ, ಎಲ್ಲಿ ನಡೆಯಲಿದೆ?

India vs South Africa Women's World Cup Final 2025: 2025ರ ಮಹಿಳಾ ವಿಶ್ವಕಪ್ ಫೈನಲ್‌ಗೆ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸಜ್ಜಾಗಿವೆ. ಸೆಮಿಫೈನಲ್‌ನಲ್ಲಿ ಭಾರತ ಬಲಿಷ್ಠ ಆಸ್ಟ್ರೇಲಿಯಾವನ್ನು, ದಕ್ಷಿಣ ಆಫ್ರಿಕಾ ಇಂಗ್ಲೆಂಡ್‌ ತಂಡವನ್ನು ಸೋಲಿಸಿವೆ. ನವೆಂಬರ್ 2 ರಂದು ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುವ ಈ ಐತಿಹಾಸಿಕ ಪಂದ್ಯದಲ್ಲಿ ಎರಡೂ ತಂಡಗಳು ತಮ್ಮ ಚೊಚ್ಚಲ ವಿಶ್ವಕಪ್ ಗೆಲ್ಲುವ ಗುರಿ ಹೊಂದಿವೆ. ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ.

World Cup 2025: ಭಾರತ- ಆಫ್ರಿಕಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯ ಯಾವಾಗ, ಎಲ್ಲಿ ನಡೆಯಲಿದೆ?
Ind W Vs Sa W

Updated on: Oct 31, 2025 | 6:57 PM

ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ 2025 ರ ಮಹಿಳಾ ವಿಶ್ವಕಪ್ ಸೆಮಿಫೈನಲ್‌ (Women’s World Cup 2025) ಪಂದ್ಯದಲ್ಲಿ ಭಾರತೀಯ ಮಹಿಳಾ ಕ್ರಿಕೆಟ್ ತಂಡವು ಬಲಿಷ್ಠ ಆಸ್ಟ್ರೇಲಿಯಾ ತಂಡವನ್ನು ಸೋಲಿಸಿ ಮೂರನೇ ಬಾರಿಗೆ ವಿಶ್ವಕಪ್ ಫೈನಲ್​ಗೇರಿದೆ. ಇತ್ತ ದಕ್ಷಿಣ ಆಫ್ರಿಕಾ ತಂಡ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಮೊದಲ ಬಾರಿಗೆ ವಿಶ್ವಕಪ್​ ಫೈನಲ್​ಗೇರಿದೆ. ಇದೀಗ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ತಂಡಗಳು ಮುಖಾಮುಖಿಯಾಗಲು ಸಜ್ಜಾಗಿವೆ. ಈ ಎರಡೂ ತಂಡಗಳು ಇದುವರೆಗೆ ವಿಶ್ವಕಪ್ ಗೆದ್ದಿರದ ಕಾರಣ, ಈ ಪಂದ್ಯದಲ್ಲಿ ಗೆಲ್ಲುವ ತಂಡಕ್ಕೆ ಚೊಚ್ಚಲ ವಿಶ್ವಕಪ್ ಟ್ರೋಫಿ ಸಿಗಲಿದೆ.

ಉಭಯ ತಂಡಗಳ ಪ್ರದರ್ಶನ

ದಕ್ಷಿಣ ಆಫ್ರಿಕಾ ಪಂದ್ಯಾವಳಿಯ ಗುಂಪು ಹಂತದಲ್ಲಿ ಅದ್ಭುತ ಪ್ರದರ್ಶನ ನೀಡಿತು. ಆಡಿದ ಏಳು ಪಂದ್ಯಗಳಲ್ಲಿ ಐದನ್ನು ಗೆದ್ದು, ಎರಡರಲ್ಲಿ ಸೋಲು ಕಂಡಿತು. ಮತ್ತೊಂದೆಡೆ, ಆತಿಥೇಯ ಟೀಂ ಇಂಡಿಯಾ ಆಡಿದ 7 ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು, ಮೂರರಲ್ಲಿ ಸೋತಿತ್ತು. ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡಿತ್ತು. ಆದಾಗ್ಯೂ, ಪಂದ್ಯಾವಳಿ ಮುಂದುವರೆದಂತೆ, ಭಾರತ ತನ್ನ ಲಯವನ್ನು ಕಂಡುಕೊಂಡಿದ್ದು, ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾದಂತಹ ಅಜೇಯ ತಂಡವನ್ನು ಸೋಲಿಸಿ ಆತ್ಮವಿಶ್ವಾಸದಿಂದ ಬೀಗುತ್ತಿದೆ.

World Cup 2025: ಆಸ್ಟ್ರೇಲಿಯಾದ ಗರ್ವಭಂಗ; ವಿಶ್ವಕಪ್ ಫೈನಲ್​ಗೇರಿದ ಟೀಂ ಇಂಡಿಯಾ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನವೆಂಬರ್ 2 ರಂದು ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಪಂದ್ಯ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ಟಾಸ್ ಅರ್ಧ ಗಂಟೆ ಮುಂಚಿತವಾಗಿ ಅಂದರೆ ಮಧ್ಯಾಹ್ನ 2:30 ಕ್ಕೆ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ವಿಶ್ವಕಪ್ ಫೈನಲ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಿವಿದ ಚಾನೆಲ್​ಗಳಲ್ಲಿ ವೀಕ್ಷಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ