Women’s World Cup 2022: ಮಹಿಳಾ ವಿಶ್ವಕಪ್​ನಲ್ಲಿ 4 ತಂಡಗಳು ಸೆಮಿಫೈನಲ್​ಗೆ ಎಂಟ್ರಿ

| Updated By: ಝಾಹಿರ್ ಯೂಸುಫ್

Updated on: Mar 27, 2022 | 4:55 PM

Women's World Cup semi final schedule: ಆಸ್ಟ್ರೇಲಿಯಾ ಮಹಿಳಾ ತಂಡವು ಲೀಗ್ ಹಂತದ ಎಲ್ಲಾ 7 ಪಂದ್ಯಗಳನ್ನು ಗೆದ್ದು 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

Womens World Cup 2022: ಮಹಿಳಾ ವಿಶ್ವಕಪ್​ನಲ್ಲಿ 4 ತಂಡಗಳು ಸೆಮಿಫೈನಲ್​ಗೆ ಎಂಟ್ರಿ
Women's World Cup 2022
Follow us on

ಮಹಿಳಾ ವಿಶ್ವಕಪ್ 2022 ರ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ ತಂಡವನ್ನು ದಕ್ಷಿಣ ಆಫ್ರಿಕಾ 3 ವಿಕೆಟ್‌ಗಳಿಂದ ಸೋಲಿಸಿತು. ಇದರೊಂದಿಗೆ ಭಾರತ ಮಹಿಳಾ ತಂಡದ ವಿಶ್ವಕಪ್ ಪಯಣ ಅಂತ್ಯಗೊಂಡಿದೆ. ಅಲ್ಲದೆ ಈ ಫಲಿತಾಂಶದೊಂದಿಗೆ ಈ ಬಾರಿಯ ವಿಶ್ವಕಪ್​ನಲ್ಲಿ ಸೆಮಿಫೈನಲ್ ಆಡುವ ನಾಲ್ಕು ತಂಡಗಳಾವುವು ಎಂಬುದು ಕೂಡ ನಿರ್ಧಾರವಾಗಿದೆ. ಭಾರತದ ಸೋಲಿನ ಲಾಭ ಪಡೆದ ವೆಸ್ಟ್ ಇಂಡೀಸ್ 4ನೇ ತಂಡವಾಗಿ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ. ಇದಕ್ಕೂ ಮುನ್ನ ಇಂಗ್ಲೆಂಡ್ ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 100 ರನ್‌ಗಳಿಂದ ಸೋಲಿಸಿ ಸೆಮಿಫೈನಲ್‌ ಪ್ರವೇಶಿಸಿತ್ತು. ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಈ ಹಿಂದೆ ಸೆಮಿಫೈನಲ್ ತಲುಪಿದ್ದವು.

ಆಸ್ಟ್ರೇಲಿಯಾ ಮಹಿಳಾ ತಂಡವು ಲೀಗ್ ಹಂತದ ಎಲ್ಲಾ 7 ಪಂದ್ಯಗಳನ್ನು ಗೆದ್ದು 14 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಮಾರ್ಚ್ 30 ರಂದು ವೆಲ್ಲಿಂಗ್ಟನ್‌ನಲ್ಲಿ ನಡೆಯಲಿರುವ ವಿಶ್ವಕಪ್‌ನ ಮೊದಲ ಸೆಮಿಫೈನಲ್‌ನಲ್ಲಿ ವೆಸ್ಟ್ ಇಂಡೀಸ್ ಅನ್ನು ಎದುರಿಸಲಿದ್ದಾರೆ.

ಎರಡನೇ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಮಾರ್ಚ್ 31 ರಂದು ಕ್ರೈಸ್ಟ್‌ಚರ್ಚ್‌ನಲ್ಲಿ ಇಂಗ್ಲೆಂಡ್ ಅನ್ನು ಎದುರಿಸಲಿದೆ. ಈ ಪಂದ್ಯ ಹಗಲು-ರಾತ್ರಿ ನಡೆಯಲಿದೆ. ದಕ್ಷಿಣ ಆಫ್ರಿಕಾ ತನ್ನ ಕೊನೆಯ ಲೀಗ್ ಪಂದ್ಯವನ್ನು ಭಾರತದ ವಿರುದ್ಧ ಗೆದ್ದುಕೊಂಡಿತು. ಲೀಗ್ ಹಂತದಲ್ಲಿ 7 ಪಂದ್ಯಗಳಿಂದ 11 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನ ಗಳಿಸಿದೆ. ಹಾಲಿ ಚಾಂಪಿಯನ್ ಇಂಗ್ಲೆಂಡ್ 7 ಪಂದ್ಯಗಳಲ್ಲಿ 8 ಅಂಕಗಳೊಂದಿಗೆ ಮೂರನೇ ಸ್ಥಾನ ಗಳಿಸಿದೆ.

ವಿಶೇಷ ಎಂದರೆ ಈ ಬಾರಿ ಇಂಗ್ಲೆಂಡ್ ತಂಡದ ಆರಂಭ ಉತ್ತಮವಾಗಿರಲಿಲ್ಲ. ಇಂಗ್ಲೆಂಡ್ ತಂಡ ಮೊದಲ 3 ಪಂದ್ಯಗಳಲ್ಲಿ ಸೋತಿತ್ತು. ಇದರ ನಂತರ ಇಂಗ್ಲೆಂಡ್ ತಂಡವು ಅದ್ಭುತ ಪುನರಾಗಮನವನ್ನು ಮಾಡಿತು. ಸತತ 4 ಪಂದ್ಯಗಳನ್ನು ಗೆಲ್ಲುವ ಮೂಲಕ ಸೆಮಿಫೈನಲ್ ಎಂಟ್ರಿ ಕೊಟ್ಟಿದೆ. ಮಹಿಳೆಯರ ವಿಶ್ವಕಪ್‌ನ ಫೈನಲ್ ಪಂದ್ಯ ಏಪ್ರಿಲ್ 3 ರಂದು ಕ್ರೈಸ್ಟ್‌ಚರ್ಚ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?

ಇದನ್ನೂ ಓದಿ:  IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು