WCL 2025: ಇಂದಿನಿಂದ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಲೀಗ್; ಪಂದ್ಯ ಎಷ್ಟು ಗಂಟೆಗೆ ಆರಂಭ? ಲೈವ್ ವೀಕ್ಷಿಸುವುದು ಹೇಗೆ?
World Championship of Legends 2025: 2025 ರ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಿ ಜುಲೈ 18ರಿಂದ ಆರಂಭವಾಗಲಿದೆ. ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾದ ಲೆಜೆಂಡರಿ ಆಟಗಾರರು ಭಾಗವಹಿಸಲಿದ್ದಾರೆ. ಸ್ಟಾರ್ ಸ್ಪೋರ್ಟ್ಸ್ ಮತ್ತು ಫ್ಯಾನ್‌ಕೋಡ್‌ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು. ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವಿನ ಉದ್ಘಾಟನಾ ಪಂದ್ಯ ಜುಲೈ 18ರಂದು ನಡೆಯಲಿದೆ.

2025 ರ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (World Championship of Legends 2025) ಟೂರ್ನಮೆಂಟ್ ಜುಲೈ 18 ರ ಶುಕ್ರವಾರದಿಂದ ಅಂದರೆ ಇಂದಿನಿಂದ ಪ್ರಾರಂಭವಾಗಲಿದೆ. ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಿದ ಭಾರತ, ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ಲೆಜೆಂಡರಿ ಆಟಗಾರರು ಈ ಟೂರ್ನಮೆಂಟ್‌ನಲ್ಲಿ ಆಡುವುದನ್ನು ನಾವು ಕಾಣಬಹುದು. ಇದು ಟೂರ್ನಮೆಂಟ್‌ನ ಎರಡನೇ ಆವೃತ್ತಿಯಾಗಿದ್ದು, ಕಳೆದ ಆವೃತ್ತಿಯಲ್ಲಿ ಭಾರತ ತಂಡ ಪ್ರಶಸ್ತಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಇದೀಗ ಯುವರಾಜ್ ಸಿಂಗ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಇಂಡಿಯಾ ಚಾಂಪಿಯನ್ಸ್ (India Champions) ತಂಡ ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ಇರಾದೆಯಲ್ಲಿದೆ.
6 ತಂಡಗಳು ಬಾಗಿ
ಮೇಲೆ ಹೇಳಿದಂತೆ ಈ ಟೂರ್ನಿಯಲ್ಲಿ ಒಟ್ಟು ಆರು ತಂಡಗಳು ಭಾಗವಹಿಸಲಿವೆ. ಯುವರಾಜ್ ಸಿಂಗ್ ನೇತೃತ್ವದಲ್ಲಿ ಭಾರತ, ಮೊಹಮ್ಮದ್ ಹಫೀಜ್ ನೇತೃತ್ವದಲ್ಲಿ ಪಾಕಿಸ್ತಾನ, ಎಬಿ ಡಿವಿಲಿಯರ್ಸ್ ನೇತೃತ್ವದಲ್ಲಿ ದಕ್ಷಿಣ ಆಫ್ರಿಕಾ, ಕ್ರಿಸ್ ಗೇಲ್ ನೇತೃತ್ವದಲ್ಲಿ ವೆಸ್ಟ್ ಇಂಡೀಸ್, ಇಯಾನ್ ಮಾರ್ಗನ್ ನೇತೃತ್ವದಲ್ಲಿ ಇಂಗ್ಲೆಂಡ್ ಮತ್ತು ಬ್ರೆಟ್ ಲೀ ನೇತೃತ್ವದಲ್ಲಿ ಆಸ್ಟ್ರೇಲಿಯಾ ತಂಡಗಳು ಕಣಕ್ಕಿಳಿಯಲಿವೆ. ಈ ಟೂರ್ನಿಯ ಮೊದಲ ಪಂದ್ಯ ಜುಲೈ 18 ರಂದು ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವೆ ನಡೆಯಲಿದೆ. ಅಂತಿಮ ಪಂದ್ಯ ಆಗಸ್ಟ್ 2 ರಂದು ನಡೆಯಲಿದೆ. ಈ ಟೂರ್ನಿಯಲ್ಲಿ 6 ಡಬಲ್ ಹೆಡರ್ ಪಂದ್ಯಗಳು ನಡೆಯಲಿದ್ದು, ಜುಲೈ 19, ಜುಲೈ 22, ಜುಲೈ 27, ಜುಲೈ 29, ಜುಲೈ 31 ರಂದು ತಲಾ ಎರಡು ಪಂದ್ಯಗಳು ನಡೆಯಲಿವೆ.
ವೇಳಾಪಟ್ಟಿ ವಿವರ
🚨 SCHEDULE FOR WCL 🚨
– It begins today in England, the Icons of Cricket are back, witnessing the Childhood favourites…!!! 🏆 pic.twitter.com/M5it7rTlf6
— Johns. (@CricCrazyJohns) July 18, 2025
2025 ರ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಮೆಂಟ್‌ನ ನೇರ ಪ್ರಸಾರವನ್ನು ಯಾವ ಚಾನೆಲ್ನಲ್ಲಿ ವೀಕ್ಷಿಸಬಹುದು?
ಭಾರತದಲ್ಲಿ 2025 ರ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಮೆಂಟ್ ಟಿವಿ ಪ್ರಸಾರ ಹಕ್ಕುಗಳನ್ನು ಸ್ಟಾರ್ ಸ್ಪೋರ್ಟ್ಸ್ ಹೊಂದಿದೆ. ಪಂದ್ಯಗಳನ್ನು ಸ್ಟಾರ್ ಸ್ಪೋರ್ಟ್ಸ್ 1 ಮತ್ತು ಸ್ಟಾರ್ ಸ್ಪೋರ್ಟ್ಸ್ 1 HD ಚಾನೆಲ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಇದಲ್ಲದೆ, ಅಧಿಕೃತ ಡಿಜಿಟಲ್ ಸ್ಟ್ರೀಮಿಂಗ್ ಪಾಲುದಾರ ಫ್ಯಾನ್‌ಕೋಡ್ ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ನ ಎಲ್ಲಾ ಪಂದ್ಯಗಳನ್ನು ನೇರ ಪ್ರಸಾರ ಮಾಡುತ್ತದೆ.
ಮೇಲೆ ಹೇಳಿದಂತೆ 2025 ರ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಮೆಂಟ್ ಉದ್ಘಾಟನಾ ಪಂದ್ಯವು ಇಂಗ್ಲೆಂಡ್ ಮತ್ತು ಪಾಕಿಸ್ತಾನ ನಡುವೆ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ರಾತ್ರಿ 9 ಗಂಟೆಗೆ ಆರಂಭವಾಗಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:17 pm, Fri, 18 July 25
