WCL 2025: ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ಹಿಂದೆ ಸರಿದ ಹರ್ಭಜನ್ ಹಾಗೂ ಪಠಾಣ್ ಬ್ರದರ್ಸ್
India vs Pakistan: ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನ ಎರಡನೇ ಸೀಸನ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈ-ವೋಲ್ಟೇಜ್ ಪಂದ್ಯಕ್ಕೂ ಮುನ್ನ, ಹರ್ಭಜನ್ ಸಿಂಗ್, ಇರ್ಫಾನ್ ಪಠಾಣ್ ಮತ್ತು ಯೂಸುಫ್ ಪಠಾಣ್ ಪಾಕಿಸ್ತಾನದ ವಿರುದ್ಧ ಆಡುವುದನ್ನು ಬಹಿಷ್ಕರಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರದ ಉದ್ವಿಗ್ನತೆಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ (World Championship of Legend) ಲೀಗ್‌ನ ಎರಡನೇ ಸೀಸನ್ ಪ್ರಾರಂಭವಾಗಿದೆ. ಭಾರತ, ಪಾಕಿಸ್ತಾನ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದ ಮಾಜಿ ಆಟಗಾರರು ಈ ಲೀಗ್‌ನಲ್ಲಿ ಆಡುತ್ತಿದ್ದಾರೆ. ಈ ಲೀಗ್‌ನ ಹೈ ವೋಲ್ಟೇಜ್ ಪಂದ್ಯವು ಜುಲೈ 20 ರಂದು ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಭಾರತೀಯರಿಂದ ಅಪಸ್ಪರ ಕೇಳಿಬಂದಿದೆ. ಭಾರತ ತಂಡ, ಪಾಕಿಸ್ತಾನದ ವಿರುದ್ಧ ಆಡಬಾರದು ಎಂಬುದು ಅಭಿಮಾನಿಗಳ ಒತ್ತಾಯವಾಗಿದೆ. ಈ ಕಾರಣದಿಂದಾಗಿ ಭಾರತ ಚಾಂಪಿಯನ್ ತಂಡದಲ್ಲಿರುವ ಕೆಲವು ಆಟಗಾರರು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು ಪಾಕಿಸ್ತಾನ ವಿರುದ್ಧದ ಪಂದ್ಯದಿಂದ ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದಾರೆ.
ಪಾಕಿಸ್ತಾನ ವಿರುದ್ಧ ಆಡದಿರಲು ನಿರ್ಧಾರ
ಮಾಧ್ಯಮ ವರದಿಗಳ ಪ್ರಕಾರ, ಹರ್ಭಜನ್ ಸಿಂಗ್ ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್‌ನಲ್ಲಿ ಪಾಕಿಸ್ತಾನ ವಿರುದ್ಧ ನಡೆಯಲಿರುವ ಪಂದ್ಯದಿಂದ ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದಾರೆ. ಮೊದಲ ಆವೃತ್ತಿಯಿಂದಲೂ ತಂಡದ ಪರ ಆಡುತ್ತಿರುವ ಹರ್ಭಜನ್ ಸಿಂಗ್, ಈ ಬಾರಿ ಪಾಕಿಸ್ತಾನ ವಿರುದ್ಧ ಆಡದಿರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಹರ್ಭಜನ್ ಸಿಂಗ್ ಮಾತ್ರವಲ್ಲದೆ ಇರ್ಫಾನ್ ಪಠಾಣ್ ಮತ್ತು ಯೂಸುಫ್ ಪಠಾಣ್ ಕೂಡ ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದಾರೆ. ವಾಸ್ತವವಾಗಿ, ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಮೊದಲಿಗಿಂತ ಹೆಚ್ಚಾಗಿದೆ. ಈ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದರು. ಅದರ ನಂತರ ಭಾರತ ಕೂಡ ಪ್ರತಿದಾಳಿಯಾಗಿ ಮೇ 7 ರಂದು ಆಪರೇಷನ್ ಸಿಂಧೂರ್ ನಡೆಸಿತ್ತು.
WCL 2025: ಆಪರೇಷನ್ ಸಿಂಧೂರ್ ಬಳಿಕ ಭಾರತ- ಪಾಕ್ ಮುಖಾಮುಖಿ; ಪಂದ್ಯ ಎಷ್ಟು ಗಂಟೆಗೆ ಆರಂಭ?
ಭಾರತ ತಂಡ: ಯುವರಾಜ್ ಸಿಂಗ್, ಶಿಖರ್ ಧವನ್, ಹರ್ಭಜನ್ ಸಿಂಗ್, ಸುರೇಶ್ ರೈನಾ, ಇರ್ಫಾನ್ ಪಠಾಣ್, ಯೂಸುಫ್ ಪಠಾಣ್, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಪಿಯೂಷ್ ಚಾವ್ಲಾ, ಸ್ಟುವರ್ಟ್ ಬಿನ್ನಿ, ವರುಣ್ ಆರೋನ್, ವಿನಯ್ ಕುಮಾರ್, ಅಭಿಮನ್ಯು ಮಿಥುನ್, ಸಿದ್ಧಾರ್ಥ್ ಕೌಲ್, ಗುರುಕೀರತ್ ಮಾನ್.
ಪಾಕಿಸ್ತಾನ ಚಾಂಪಿಯನ್ ತಂಡ : ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಸರ್ಫ್ರಾಜ್ ಅಹ್ಮದ್, ಶರ್ಜೀಲ್ ಖಾನ್, ವಹಾಬ್ ರಿಯಾಜ್, ಆಸಿಫ್ ಅಲಿ, ಶಾಹಿದ್ ಅಫ್ರಿದಿ, ಕಮ್ರಾನ್ ಅಕ್ಮಲ್, ಅಮೀರ್ ಯಾಮಿನ್, ಸೊಹೈಲ್ ಖಾನ್, ಸೊಹೈಲ್ ತನ್ವೀರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
