World Cup 2023: ಏಕದಿನ ವಿಶ್ವಕಪ್​ನಲ್ಲಿ ಒಂದೇ ದಿನ 3 ಪಂದ್ಯಗಳು..!

World Cup 2023: ಈ ಬಾರಿಯ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

World Cup 2023: ಏಕದಿನ ವಿಶ್ವಕಪ್​ನಲ್ಲಿ ಒಂದೇ ದಿನ 3 ಪಂದ್ಯಗಳು..!
IND vs PAK
Follow us
| Updated By: ಝಾಹಿರ್ ಯೂಸುಫ್

Updated on: Jul 31, 2023 | 6:11 PM

World Cup 2023: ಏಕದಿನ ವಿಶ್ವಕಪ್​ಗಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿದೆ. ಈಗಾಗಲೇ ಕ್ರಿಕೆಟ್ ಮಹಾಸಮರದ ವೇಳಾಪಟ್ಟಿ ಬಿಡುಗಡೆಯಾಗಿದೆ. ಅದರಂತೆ ಅಕ್ಟೋಬರ್ 5 ರಂದು ಟೂರ್ನಿಗೆ ಚಾಲನೆ ಸಿಗಲಿದ್ದು, ನವೆಂಬರ್ 19 ರಂದು ಫೈನಲ್ ಪಂದ್ಯ ನಡೆಯಲಿದೆ. ಆದರೆ ಇದೀಗ ಭಾರತ-ಪಾಕಿಸ್ತಾನ್ ನಡುವಣ ಪಂದ್ಯದ ದಿನಾಂಕ ಬದಲಾಗುವುದು ಬಹುತೇಕ ಖಚಿತವಾಗಿದೆ. ಅಕ್ಟೋಬರ್ 15 ರಂದು ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೈದಾನದಲ್ಲಿ ನಡೆಯಬೇಕಿರುವ ಭಾರತ-ಪಾಕಿಸ್ತಾನ್ ಪಂದ್ಯವನ್ನು ಒಂದು ದಿನ ಮುಂಚಿತವಾಗಿ ಆಯೋಜಿಸಲಿದ್ದಾರೆ. ಅಂದರೆ ಅಕ್ಟೋಬರ್ 14 ರಂದು ಇಂಡೊ-ಪಾಕ್ ಹೈವೋಲ್ಟೇಜ್ ಕದನ ನಡೆಯಲಿದೆ.

ಇದಕ್ಕೆ ಮುಖ್ಯ ಕಾರಣ ಅಕ್ಟೋಬರ್ 15 ರಿಂದ ನವರಾತ್ರಿ ಶುರುವಾಗುತ್ತಿರುವುದು. ಅದೇ ದಿನದಂದು ಭಾರತ-ಪಾಕಿಸ್ತಾನ್ ಮ್ಯಾಚ್ ಕೂಡ ನಡೆದರೆ ಸೂಕ್ತ ಪೊಲೀಸ್​ ವ್ಯವಸ್ಥೆ ಕಲ್ಪಿಸಲು ತೊಡಕುಂಟಾಗುತ್ತದೆ ಎಂದು ಅಹಮದಾಬಾದ್ ಪೊಲೀಸ್ ಇಲಾಖೆ ತಿಳಿಸಿದೆ.

ಹೀಗಾಗಿ ಭಾನುವಾರದ ಬದಲು ಶನಿವಾರ ಪಂದ್ಯವನ್ನು ಆಯೋಜಿಸಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಅಂದರೆ ಭಾರತ-ಪಾಕಿಸ್ತಾನ್ ಅಕ್ಟೋಬರ್ 14 ರಂದು ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಒಂದೇ ದಿನ 3 ಪಂದ್ಯಗಳು:

ಭಾರತ-ಪಾಕಿಸ್ತಾನ್ ತಂಡಗಳು ಅಕ್ಟೋಬರ್ 14 ರಂದು ಕಣಕ್ಕಿಳಿದರೆ, ಒಂದೇ ದಿನ ಮೂರು ಪಂದ್ಯಗಳು ಜರುಗಲಿದೆ. ಅಂದರೆ ಈಗಾಗಲೇ ಬಿಡುಗಡೆಯಾಗಿರುವ ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 14 ರಂದು ಚೆನ್ನೈನಲ್ಲಿ ನ್ಯೂಝಿಲೆಂಡ್ ಹಾಗೂ ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದೆ.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!

ಹಾಗೆಯೇ ಅದೇ ದಿನದಂದು ದೆಹಲಿಯಲ್ಲಿ ಅಫ್ಘಾನಿಸ್ತಾನ್ ಹಾಗೂ ಇಂಗ್ಲೆಂಡ್ ತಂಡಗಳು ಸೆಣಸಲಿದೆ. ಅಂದರೆ ಭಾರತ-ಪಾಕಿಸ್ತಾನ್ ನಡುವಣ ಪಂದ್ಯಗಳನ್ನು ಹೊರತುಪಡಿಸಿ ಇನ್ನೆರಡು ಪಂದ್ಯಗಳು ಕೂಡ ಅಕ್ಟೋಬರ್ 14 ರಂದೇ ನಡೆಯಲಿದೆ. ಹೀಗಾಗಿ ಅಕ್ಟೋಬರ್ 14 ರಂದು ಮೂರು ಪಂದ್ಯಗಳನ್ನು ಆಯೋಜಿಸಲಿದ್ದಾರಾ? ಅಥವಾ ಇದರಲ್ಲಿ ಒಂದು ಪಂದ್ಯದ ವೇಳಾಪಟ್ಟಿ ಬದಲಿಸಲಿದ್ದಾರಾ ಕಾದು ನೋಡಬೇಕಿದೆ.

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು