ICC World Cup 2023: ಪಾಕಿಸ್ತಾನ ತಂಡಕ್ಕೆ ಇನ್ನೂ ಇದೆ ಸೆಮಿಫೈನಲ್‌ಗೇರುವ ಅವಕಾಶ..!

ICC World Cup 2023: ಟೂರ್ನಿಯಲ್ಲಿ ಪಾಕಿಸ್ತಾನಕ್ಕೆ ಇನ್ನು ಎರಡು ಪಂದ್ಯಗಳು ಬಾಕಿ ಉಳಿದಿವೆ. ಪಾಕಿಸ್ತಾನವು ನವೆಂಬರ್ 4 ರಂದು ನ್ಯೂಜಿಲೆಂಡ್ ಮತ್ತು ನವೆಂಬರ್ 11 ರಂದು ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಆದರೆ ಈ ಎರಡೂ ಪಂದ್ಯಗಳನ್ನು ಬಾಬರ್ ಪಡೆ ಉತ್ತಮ ನೆಟ್​ ರನ್​ರೇಟ್​ನಿಂದ ಗೆಲ್ಲಬೇಕಿದೆ. ಹೀಗಾದರೆ ಮಾತ್ರ ಪಾಕ್ ಪಡೆ ಕೊನೆಯ ನಾಲ್ಕರ ಘಟ್ಟಕ್ಕೆ ಲಗ್ಗೆ ಇಡುವ ಸಾಧ್ಯತೆ ಇದೆ.

ICC World Cup 2023: ಪಾಕಿಸ್ತಾನ ತಂಡಕ್ಕೆ ಇನ್ನೂ ಇದೆ ಸೆಮಿಫೈನಲ್‌ಗೇರುವ ಅವಕಾಶ..!
ಪಾಕಿಸ್ತಾನ ಕ್ರಿಕೆಟ್ ತಂಡ
Follow us
ಪೃಥ್ವಿಶಂಕರ
|

Updated on:Nov 01, 2023 | 9:01 AM

2023 ರ ವಿಶ್ವಕಪ್​ನಲ್ಲಿ (ICC ODI World Cup 2023) ಪಾಕಿಸ್ತಾನ ತಂಡ ಅಂತಿಮವಾಗಿ ತನ್ನ ಸೋಲಿನ ಸರಣಿಯನ್ನು ಮುರಿದಿದೆ. ಮಂಗಳವಾರ ಕೋಲ್ಕತ್ತಾದಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿದ ಬಾಬರ್ ಪಡೆ (Pakistan vs Bangladesh) ಟೂರ್ನಿಯಲ್ಲಿ ಮೂರನೇ ಜಯ ಸಾದಿಸಿದೆ. ಈ ಪಂದ್ಯಕ್ಕೂ ಮುನ್ನ ಸತತ ನಾಲ್ಕು ಪಂದ್ಯಗಳಲ್ಲಿ ಸೋತಿದ್ದ ಪಾಕ್ ತಂಡ ಆಡಿರುವ ಏಳು ಪಂದ್ಯಗಳಲ್ಲಿ ಮೂರು ಗೆಲುವಿನೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನ ಪಡೆದುಕೊಂಡಿದೆ. ಬಾಂಗ್ಲಾದೇಶ ವಿರುದ್ಧದ ಈ ಗೆಲುವು ಪಾಕಿಸ್ತಾನ ತಂಡ ಸೆಮಿಫೈನಲ್ (Semi Final) ತಲುಪುವ ಭರವಸೆಯನ್ನು ಇನ್ನೂ ಜೀವಂತವಾಗಿರಿಸಿದೆ. ಆದರೆ ತಂಡ ಸೆಮಿಫೈನಲ್‌ಗೇರಬೇಕೆಂದರೆ ಉಳಿದಿರುವ ಎರಡು ಪಂದ್ಯಗಳನ್ನು ಗೆಲ್ಲುವುದರೊಂದಿಗೆ ಪ್ರಸ್ತುತ ಟಾಪ್ 4 ರಲ್ಲಿ ಸ್ಥಾನ ಪಡೆದಿರುವ ತಂಡಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗಿದೆ.

ಎರಡು ಪಂದ್ಯಗಳು ಬಾಕಿ ಉಳಿದಿವೆ

ಟೂರ್ನಿಯಲ್ಲಿ ಪಾಕಿಸ್ತಾನಕ್ಕೆ ಇನ್ನು ಎರಡು ಪಂದ್ಯಗಳು ಬಾಕಿ ಉಳಿದಿವೆ. ಪಾಕಿಸ್ತಾನವು ನವೆಂಬರ್ 4 ರಂದು ನ್ಯೂಜಿಲೆಂಡ್ ಮತ್ತು ನವೆಂಬರ್ 11 ರಂದು ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ. ಆದರೆ ಈ ಎರಡೂ ಪಂದ್ಯಗಳನ್ನು ಬಾಬರ್ ಪಡೆ ಉತ್ತಮ ನೆಟ್​ ರನ್​ರೇಟ್​ನಿಂದ ಗೆಲ್ಲಬೇಕಿದೆ. ಹೀಗಾದರೆ ಮಾತ್ರ ಪಾಕ್ ಪಡೆ ಕೊನೆಯ ನಾಲ್ಕರ ಘಟ್ಟಕ್ಕೆ ಲಗ್ಗೆ ಇಡುವ ಸಾಧ್ಯತೆ ಇದೆ.

ಪಾಯಿಂಟ್ ಪಟ್ಟಿಯಲ್ಲಿ ಜಿಗಿದ ಪಾಕ್; ಸೆಮಿಸ್ ಕನಸು ಇನ್ನೂ ಜೀವಂತ

ಇತರ ತಂಡಗಳ ಸೋಲು-ಗೆಲುವು ಮುಖ್ಯ

ಆದಾಗ್ಯೂ, ಮೇಲೆ ಹೇಳಿದಂತೆ ಪಾಕ್ ತಂಡ ಸೆಮಿಫೈನಲ್​ಗೇರಬೇಕೆಂದರೆ, ಇತರ ತಂಡಗಳ ಸೋಲು-ಗೆಲುವು ಕೂಡ ಮುಖ್ಯವಾಗುತ್ತದೆ. ಪ್ರಸ್ತುತ ಪಾಕ್ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ತಲುಪಿದೆ. ತಂಡದ ರನ್ ರೇಟ್ ಸ್ವಲ್ಪ ಸುಧಾರಿಸಿದ್ದು, ಈ ಕಾರಣದಿಂದಾಗಿ 6 ​​ಅಂಕಗಳೊಂದಿಗೆ ಅಫ್ಘಾನಿಸ್ತಾನಕ್ಕಿಂತ ಒಂದು ಸ್ಥಾನ ಮೇಲಿದೆ. ಮೊದಲ ಸ್ಥಾನದಲ್ಲಿರುವ ಟೀಂ ಇಂಡಿಯಾ 12 ಅಂಕ ಹೊಂದಿದ್ದರೆ, ದಕ್ಷಿಣ ಆಫ್ರಿಕಾ 10 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಮೂರನೇ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ನಾಲ್ಕನೇ ಸ್ಥಾನದಲ್ಲಿದೆ.

ಭಾರತ- ಆಫ್ರಿಕಾ ಖಚಿತ

ಅಗ್ರ ನಾಲ್ಕು ತಂಡಗಳು ಇನ್ನೂ ಮೂರು ಪಂದ್ಯಗಳನ್ನು ಆಡಲು ಬಾಕಿ ಇದೆ. ಭಾರತ ಎರಡು ಪಂದ್ಯಗಳಲ್ಲಿ ಸೋತರೂ ಸೆಮಿಫೈನಲ್‌ಗೆ ಲಗ್ಗೆ ಇಡಲಿದೆ. ದಕ್ಷಿಣ ಆಫ್ರಿಕಾ ಕೂಡ ಕನಿಷ್ಠ ಎರಡು ಪಂದ್ಯಗಳನ್ನು ಗೆಲ್ಲಬೇಕು. ಹೀಗಿರುವಾಗ ಮೂರು ಹಾಗೂ ನಾಲ್ಕನೇ ಸ್ಥಾನಕ್ಕಾಗಿ ಈಗ ಕಾದಾಟ ಶುರುವಾಗಿದೆ.

ಆಸ್ಟ್ರೇಲಿಯಾ-ನ್ಯೂಜಿಲೆಂಡ್‌ ಸೋಲಬೇಕು

ಮೇಲೆ ಹೇಳಿದಂತೆ ಪಾಕ್ ಪಡೆ ಈಗ ಟೂರ್ನಿಯಲ್ಲಿ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳನ್ನು ಎದುರಿಸಬೇಕಾಗಿದೆ. ಈ ಎರಡೂ ತಂಡಗಳು ಅತ್ಯಂತ ಬಲಿಷ್ಠವಾಗಿವೆ. ಆದರೆ, ಇಂಗ್ಲೆಂಡ್ ತಂಡ ಹೇಳಿಕೊಳ್ಳುವಂತಹ ಫಾರ್ಮ್‌ನಲ್ಲಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ಉಳಿದ ಎರಡೂ ಪಂದ್ಯಗಳನ್ನು ಗೆದ್ದರೆ ಮತ್ತು ಆಸ್ಟ್ರೇಲಿಯಾ-ನ್ಯೂಜಿಲೆಂಡ್‌, ಈ ಎರಡು ತಂಡಗಳಲ್ಲಿ ಒಂದು ತಂಡ ತನ್ನ ಎರಡು ಪಂದ್ಯಗಳಲ್ಲಿ ಸೋತರೆ ಪಾಕ್ ತಂಡಕ್ಕೆ ಕೊನೆಯ ಅವಕಾಶ ಸಿಗಲಿದೆ.

ಏಕೆಂದರೆ ಪಾಕ್ ತಂಡದ ಸತತ ಗೆಲುವು ಹಾಗೂ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ ತಂಡಗಳ ಸತತ ಸೋಲುಗಳಿಂದ ಪಾಯಿಂಟ್​ ಪಟ್ಟಿಯಲ್ಲಿ ತಲಾ 10 ಅಂಕಗಳನ್ನು ಸಂಪಾದಿಸಿದಂತ್ತಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸೆಮಿಫೈನಲ್​ಗೇರುವ ನಾಲ್ಕನೇ ತಂಡವನ್ನು ನೆಟ್​ ರನ್ ರೇಟ್ ಮೇಲೆ ನಿರ್ಧರಿಸಲಾಗುತ್ತದೆ.

ಆಸ್ಟ್ರೇಲಿಯಾ-ನ್ಯೂಜಿಲೆಂಡ್‌ ಗೆದ್ದರೆ ಪಾಕ್ ಔಟ್

ಒಂದು ವೇಳೆ ಪಾಕ್ ತಂಡ ತನ್ನ ಉಳಿದ ಎಲ್ಲಾ ಪಂದ್ಯಗಳನ್ನು ಗೆದ್ದರೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳಿಗೆ ಕೊಂಚ ಹಿನ್ನಡೆಯುಂಟಾಗಲಿದೆ. ಇದನ್ನು ತಪ್ಪಿಸಲು, ಈ ಎರಡೂ ತಂಡಗಳು ತಮ್ಮ ಉಳಿದ ಪಂದ್ಯಗಳನ್ನು ಗೆದ್ದು ಕನಿಷ್ಠ 12 ಅಂಕಗಳನ್ನು ಸಂಗ್ರಹಿಸಬೇಕಾಗುತ್ತದೆ. ಈ ತಂಡಗಳಲ್ಲಿ ಯಾವುದಾದರೂ ಒಂದು ತಂಡವು 10 ಅಂಕಗಳೊಂದಿಗೆ ಲೀಗ್ ಹಂತವನ್ನು ಮುಗಿಸಿದರೆ ಮತ್ತು ಪಾಕಿಸ್ತಾನ ತನ್ನ ಎರಡೂ ಪಂದ್ಯಗಳನ್ನು ಗೆದ್ದರೆ, ನಂತರ ನಾಲ್ಕನೇ ಸ್ಥಾನಕ್ಕಾಗಿ ಹೋರಾಟ ರೋಚಕವಾಗಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:59 am, Wed, 1 November 23

ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​