IND vs AUS: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಒಂದು ಬದಲಾವಣೆ ಸಾಧ್ಯತೆ
World Cup 2023 final IND vs AUS: ಸ್ತುತ ಟೀಮ್ ಇಂಡಿಯಾದಲ್ಲಿ ಪರಿಪೂರ್ಣ ಸ್ಪಿನ್ನರ್ ಆಗಿ ಕಣಕ್ಕಿಳಿಯುತ್ತಿರುವುದು ಕುಲ್ದೀಪ್ ಯಾದವ್ ಮಾತ್ರ. ಅತ್ತ ರವೀಂದ್ರ ಜಡೇಜಾ ಉತ್ತಮ ಸಾಥ್ ನೀಡುತ್ತಿದ್ದಾರೆ. ಇದಾಗ್ಯೂ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾಗೆ 6ನೇ ಬೌಲರ್ನ ಕೊರತೆಯಿದೆ.

ಬಹುನಿರೀಕ್ಷಿತ ಏಕದಿನ ವಿಶ್ವಕಪ್ನ ಫೈನಲ್ ಪಂದ್ಯಕ್ಕಾಗಿ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಏಕೆಂದರೆ ಅಹಮದಾಬಾದ್ ಪಿಚ್ ಸ್ಪಿನ್ ಬೌಲರ್ಗಳಿಗೆ ಸಹಕಾರಿ.
ಆದರೆ ಪ್ರಸ್ತುತ ಟೀಮ್ ಇಂಡಿಯಾದಲ್ಲಿ ಪರಿಪೂರ್ಣ ಸ್ಪಿನ್ನರ್ ಆಗಿ ಕಣಕ್ಕಿಳಿಯುತ್ತಿರುವುದು ಕುಲ್ದೀಪ್ ಯಾದವ್ ಮಾತ್ರ. ಅತ್ತ ರವೀಂದ್ರ ಜಡೇಜಾ ಉತ್ತಮ ಸಾಥ್ ನೀಡುತ್ತಿದ್ದಾರೆ. ಇದಾಗ್ಯೂ ಹಾರ್ದಿಕ್ ಪಾಂಡ್ಯ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾಗೆ 6ನೇ ಬೌಲರ್ನ ಕೊರತೆಯಿದೆ. ಹೀಗಾಗಿ ಅಂತಿಮ ಹಣಾಹಣಿಗಾಗಿ ಭಾರತ ತಂಡ ಒಂದು ಬದಲಾವಣೆ ಮಾಡಿಕೊಂಡರೂ ಅಚ್ಚರಿ ಪಡಬೇಕಿಲ್ಲ.
ಹೀಗೆ ಬದಲಾವಣೆ ಮಾಡಿದರೆ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ಗೆ ಅವಕಾಶ ಸಿಗಬಹುದು. ಅಲ್ಲದೆ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈ ಬಿಡಬಹುದು. ಈ ಮೂಲಕ ಟೀಮ್ ಇಂಡಿಯಾ ಆಲ್ರೌಂಡರ್ಗಳಾಗಿ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಅವರನ್ನು ಬಳಸಿಕೊಳ್ಳುವ ಸಾಧ್ಯತೆಯಿದೆ.
ಈ ಒಂದು ಬದಲಾವಣೆಯ ಹೊರತಾಗಿ ಪ್ಲೇಯಿಂಗ್ ಇಲೆವೆನ್ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿಲ್ಲ. ಅದರಂತೆ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸಂಭಾವ್ಯ ಆಡುವ ಬಳಗ ಹೀಗಿರಲಿದೆ…
- ರೋಹಿತ್ ಶರ್ಮಾ (ನಾಯಕ)
- ಶುಭ್ಮನ್ ಗಿಲ್
- ವಿರಾಟ್ ಕೊಹ್ಲಿ
- ಶ್ರೇಯಸ್ ಅಯ್ಯರ್
- ಕೆಎಲ್ ರಾಹುಲ್ (ವಿಕೆಟ್ ಕೀಪರ್)
- ರವೀಂದ್ರ ಜಡೇಜಾ
- ರವಿಚಂದ್ರನ್ ಅಶ್ವಿನ್
- ಮೊಹಮ್ಮದ್ ಶಮಿ
- ಜಸ್ಪ್ರೀತ್ ಬುಮ್ರಾ
- ಕುಲ್ದೀಪ್ ಯಾದವ್
- ಮೊಹಮ್ಮದ್ ಸಿರಾಜ್
ಇದನ್ನೂ ಓದಿ: Virat Kohli: ಸಚಿನ್ ಅವರ 3 ವಿಶ್ವ ದಾಖಲೆ ಮುರಿದ ಕಿಂಗ್ ಕೊಹ್ಲಿ
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.