AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: ಭಾರತಕ್ಕೆ ತೆರಳಲು ಪಾಕಿಸ್ತಾನ್ ತಂಡಕ್ಕೆ ಗ್ರೀನ್ ಸಿಗ್ನಲ್

World Cup 2023: ಈ ಬಾರಿಯ ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಹಾಗೆಯೇ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

World Cup 2023: ಭಾರತಕ್ಕೆ ತೆರಳಲು ಪಾಕಿಸ್ತಾನ್ ತಂಡಕ್ಕೆ ಗ್ರೀನ್ ಸಿಗ್ನಲ್
Pakistan Team
TV9 Web
| Edited By: |

Updated on: Aug 06, 2023 | 9:11 PM

Share

ODI World Cup 2023: ಅಕ್ಟೋಬರ್-ನವೆಂಬರ್​ನಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ಭಾಗವಹಿಸಲು ಪಾಕ್ ತಂಡಕ್ಕೆ ಪಾಕಿಸ್ತಾನ್ ಸರ್ಕಾರ ಹಸಿರು ನಿಶಾನೆ ನೀಡಿದೆ. ಈ ಹಿಂದೆ ಏಕದಿನ ವಿಶ್ವಕಪ್​ನಲ್ಲಿ ಭಾಗವಹಿಸುವಿಕೆ ಬಗ್ಗೆ ಚರ್ಚಿಸಲು ಸರ್ಕಾರ 14 ಸದಸ್ಯರ ಸಮಿತಿಯನ್ನು ನೇಮಿಸಲಾಗಿತ್ತು. ಇದೀಗ ಈ ಸಮಿತಿಯು ನೀಡಿದ ವರದಿಯಂತೆ ಏಕದಿನ ವಿಶ್ವಕಪ್​ನಲ್ಲಿ ಭಾಗವಹಿಸಲು ಪಾಕಿಸ್ತಾನ್ ತಂಡಕ್ಕೆ ಅಲ್ಲಿನ ಸರ್ಕಾರ ಅನುಮತಿ ನೀಡಿದೆ. ಈ ಹಿಂದೆ ಏಷ್ಯಾಕಪ್​ಗಾಗಿ ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲು ಹಿಂದೇಟು ಹಾಕಿದ್ದ ಪರಿಣಾಮ ಪಾಕ್ ತಂಡ ಏಕದಿನ ವಿಶ್ವಕಪ್​ನಲ್ಲಿ ಭಾಗವಹಿಸುವುದು ಅನುಮಾನ ಎನ್ನಲಾಗಿತ್ತು. ಆದರೀಗ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್​ನಲ್ಲಿ ತಮ್ಮ ತಂಡವನ್ನು ಕಳುಹಿಸಲು ಪಾಕ್ ಸರ್ಕಾರ ನಿರ್ಧರಿಸಿದೆ.

ಕ್ರೀಡೆಯನ್ನು ರಾಜಕೀಯದೊಂದಿಗೆ ಬೆರೆಸಬಾರದು. ಹೀಗಾಗಿ ಮುಂಬರುವ ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರಲ್ಲಿ ಭಾಗವಹಿಸಲು ಭಾರತಕ್ಕೆ ತಮ್ಮ ಕ್ರಿಕೆಟ್ ತಂಡವನ್ನು ಕಳುಹಿಸಲು ಅದು ನಿರ್ಧರಿಸಿದ್ದೇವೆ ಎಂದು ಪಾಕಿಸ್ತಾನ್ ವಿದೇಶಾಂಗ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಹೀಗಾಗಿ ಏಕದಿನ ವಿಶ್ವಕಪ್​ನಲ್ಲಿ ಪಾಲ್ಗೊಳಲು ಪಾಕಿಸ್ತಾನ್ ತಂಡಕ್ಕೆ ಸರ್ಕಾರ ಹಸಿರು ನಿಶಾನೆ ನೀಡಿದ್ದು, ಅದರಂತೆ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಪಾಕ್​ ತಂಡವು ಭಾರತಕ್ಕೆ ಬರಲಿದೆ.

7 ವರ್ಷಗಳ ಬಳಿಕ ಭಾರತಕ್ಕೆ ಪಾಕ್ ತಂಡ:

2016 ರಲ್ಲಿ ಭಾರತದಲ್ಲಿ ನಡೆದಿದ್ದ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ಭಾಗವಹಿಸಿತ್ತು. ಇದಾದ ಬಳಿಕ ಉಭಯ ತಂಡಗಳು ಭಾರತದಲ್ಲಿ ಮುಖಾಮುಖಿಯಾಗಿಲ್ಲ. ಇದೀಗ ಬರೋಬ್ಬರಿ 7 ವರ್ಷಗಳ ಬಳಿಕ ಭಾರತ-ಪಾಕಿಸ್ತಾನ್ ಭರತ ಖಂಡದಲ್ಲಿ ಮುಖಾಮುಖಿಯಾಗುತ್ತಿದೆ.

ಭಾರತ-ಪಾಕಿಸ್ತಾನ್ ಮುಖಾಮುಖಿ:

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಅಕ್ಟೋಬರ್ 15 ರಂದು ನಡೆಯಬೇಕಿರುವ ಭಾರತ-ಪಾಕಿಸ್ತಾನ್ ನಡುವಣ ಪಂದ್ಯವು ಒಂದು ದಿನ ಮುಂಚಿತವಾಗಿ ಜರುಗಲಿದೆ. ಅಕ್ಟೋಬರ್ 15 ರಂದು ಗುಜರಾತ್​​ನಾದ್ಯಂತ ನವರಾತ್ರಿ ಕಾರ್ಯಕ್ರಮಗಳು ಜರಗುವುದರಿಂದ ಪಂದ್ಯಕ್ಕಾಗಿ ಸೂಕ್ತ ಪೊಲೀಸ್ ವ್ಯವಸ್ಥೆ ಕಲ್ಪಿಸುವುದು ಕಷ್ಟಕರ. ಹೀಗಾಗಿ ಅಕ್ಟೋಬರ್ 14 ರಂದು ಭಾರತ-ಪಾಕಿಸ್ತಾನ್ ಪಂದ್ಯವನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ಏಷ್ಯಾಕಪ್​ನಲ್ಲೂ ಸೆಣಸಾಟ:

ಏಕದಿನ ವಿಶ್ವಕಪ್​ಗೂ ಮುನ್ನ ಭಾರತ-ಪಾಕಿಸ್ತಾನ್ ತಂಡಗಳು ಮೂರು ಬಾರಿ ಮುಖಾಮುಖಿಯಾಗುವ ಸಾಧ್ಯತೆಯಿದೆ. ಅಂದರೆ ಆಗಸ್ಟ್ 30 ರಿಂದ ಶುರುವಾಗಲಿರುವ ಏಷ್ಯಾಕಪ್​ನ ಲೀಗ್ ಹಂತದಲ್ಲಿ ಒಂದು ಬಾರಿ ಸೆಣಸುವುದು ಖಚಿತ. ಅದರಂತೆ ಸೆಪ್ಟೆಂಬರ್ 2 ರಂದು ಇಂಡೊ-ಪಾಕ್ ಕಾದಾಟ ನಡೆಯಲಿದೆ. ಇದಾದ ಬಳಿಕ ಉಭಯ ತಂಡಗಳು ಸೂಪರ್​-4 ಹಂತಕ್ಕೇರಿದರೆ 2ನೇ ಬಾರಿ ಮುಖಾಮುಖಿಯಾಗಲಿದೆ. ಇನ್ನು ಸೂಪರ್-4 ಹಂತದ ಪಾಯಿಂಟ್ಸ್ ಟೇಬಲ್​ನಲ್ಲಿ ಉಭಯ ತಂಡಗಳು ಮೊದಲೆರಡು ಸ್ಥಾನ ಅಲಂಕರಿಸಿದರೆ ಏಷ್ಯಾಕಪ್​ ಫೈನಲ್​ನಲ್ಲೂ ಮುಖಾಮುಖಿಯಾಗಬಹುದು. ಹೀಗಾಗಿ ಏಕದಿನ ವಿಶ್ವಕಪ್​ಗೂ ಮುನ್ನ 3 ಬಾರಿ ಭಾರತ-ಪಾಕಿಸ್ತಾನ್ ನಡುವಣ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಬಹುದು.

ಏಕದಿನ ವಿಶ್ವಕಪ್​ ವೇಳಾಪಟ್ಟಿ:

ಈ ಬಾರಿಯ ಏಕದಿನ ವಿಶ್ವಕಪ್​ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಹಾಗೆಯೇ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ