ಚೆನ್ನೈ ಪಿಚ್ ಯಾರಿಗೆ ಹೆಚ್ಚು ಸಹಕಾರಿ? ಭಾರತ- ಆಸೀಸ್ ವಿಶ್ವಕಪ್ ಕದನಕ್ಕೆ ಮಳೆಯ ಆತಂಕ?

ODI World Cup 2023: ಚೆನ್ನೈನಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಪಂದ್ಯ ನಡೆಯುತ್ತಿದ್ದು ಇಲ್ಲಿನ ಪಿಚ್ ಯಾರಿಗೆ ಹೆಚ್ಚು ಸಹಕಾರಿ ಹಾಗೂ ಪಂದ್ಯದ ದಿನ ಮಳೆಯಾಗುವ ಸಾಧ್ಯತೆ ಇದೆಯಾ ಎಂಬುದರ ವಿವರ ಇಲ್ಲಿದೆ.

ಚೆನ್ನೈ ಪಿಚ್ ಯಾರಿಗೆ ಹೆಚ್ಚು ಸಹಕಾರಿ? ಭಾರತ- ಆಸೀಸ್ ವಿಶ್ವಕಪ್ ಕದನಕ್ಕೆ ಮಳೆಯ ಆತಂಕ?
ಚೆನ್ನೈ ಪಿಚ್ ವರದಿ
Follow us
ಪೃಥ್ವಿಶಂಕರ
|

Updated on: Oct 07, 2023 | 2:01 PM

ಆತಿಥೇಯ ಟೀಂ ಇಂಡಿಯಾ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ (India vs Australia) ವಿರುದ್ಧ ಕಣಕ್ಕಿಳಿಯುವ ಮೂಲಕ ತನ್ನ ವಿಶ್ವಕಪ್‌ (ODI World Cup 2023) ಪ್ರಯಾಣವನ್ನು ಪ್ರಾರಂಭಿಸಲಿದೆ. ಉಭಯ ತಂಡಗಳ ಈ ನಡುವಿನ ಕದನ ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲ್ಲಿದೆ. ಆದರೆ ಪಂದ್ಯಕ್ಕೂ ಮುನ್ನ ತಂಡದ ಸ್ಟಾರ್ ಬ್ಯಾಟರ್ ಶುಭ್​ಮನ್ ಗಿಲ್ (Shubman Gill) ಅನಾರೋಗ್ಯಕ್ಕೆ ತುತ್ತಾಗಿರುವುದು ತಂಡದ ಆತಂಕವನ್ನು ಹೆಚ್ಚಿಸಿದೆ. ಆದರೆ ಈ ಹಿಂದೆ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಕಾಂಗರೂಗಳನ್ನು ಮಣಿಸಿರುವ ರೋಹಿತ್ (Rohit Sharma)​ ಪಡೆಗೆ ಗಿಲ್ ಅಲಭ್ಯತೆ ಹೆಚ್ಚು ತೊಂದರೆಯನ್ನುಂಟು ಮಾಡುವ ಸಾಧ್ಯತೆಗಳು ತೀರ ಕಡಿಮೆ. ಏಕೆಂದರೆ ಗಿಲ್ ಅನುಪಸ್ಥಿತಿಯಲ್ಲಿ ಇಶಾನ್ ಕಿಶನ್ (Ishan Kishan) ಮತ್ತೊಬ್ಬ ಓಪನರ್ ಆಯ್ಕೆಯಾಗಿದ್ದು ಅವರೂ ಕೂಡ ಉತ್ತಮ ಫಾರ್ಮ್​ನಲ್ಲಿದ್ದಾರೆ. ಇನ್ನು ಚೆನ್ನೈನಲ್ಲಿ ಈ ಪಂದ್ಯ ನಡೆಯುತ್ತಿರುವುದರಿಂದ ಇಲ್ಲಿನ ಪಿಚ್ ಯಾರಿಗೆ ಹೆಚ್ಚು ಸಹಕಾರಿ ಹಾಗೂ ಪಂದ್ಯದ ದಿನ ಮಳೆಯಾಗುವ ಸಾಧ್ಯತೆ ಇದೆಯಾ ಎಂಬುದನ್ನು ತಿಳಿದುಕೊಳ್ಳುವುದು ಸಹ ಬಹಳ ಮುಖ್ಯ.

ಚೆನ್ನೈ ಪಿಚ್ ವರದಿ

ಚಿದಂಬರಂ ಕ್ರೀಡಾಂಗಣವು ಸಮತೋಲಿತ ಪಿಚ್‌ಗೆ ಹೆಸರುವಾಸಿಯಾಗಿದೆ. ಇದು ಬ್ಯಾಟ್ಸ್‌ಮನ್ ಮತ್ತು ಬೌಲರ್‌ಗಳಿಗಿಬ್ಬರಿಗೂ ಸಹಕಾರಿಯಾಗಿದೆ. ಈ ವಿಕೆಟ್ ಸಾಮಾನ್ಯವಾಗಿ ಶುಷ್ಕವಾಗಿದ್ದು ಸ್ಪಿನ್ನರ್‌ಗಳಿಗೆ ಹೆಚ್ಚು ನೆರವಾಗಲಿದೆ. ಪಂದ್ಯವು ಮುಂದುವರೆದಂತೆ, ಪಿಚ್ ಸ್ವಲ್ಪ ನಿಧಾನವಾಗುತ್ತದೆ. ಹೀಗಾಗಿ ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟ್ ಮಾಡುವ ತಂಡಕ್ಕೆ ರನ್ ಕಲೆಹಾಕಲು ಕೊಂಚ ಕಷ್ಟಕರವಾಗಿಸುತ್ತದೆ. ಅದಕ್ಕಾಗಿಯೇ ಹೆಚ್ಚಿನ ತಂಡಗಳು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುತ್ತವೆ.

ವಿಶ್ವಕಪ್​ನಲ್ಲಿ ಭಾರತಕ್ಕೆ ನಾಳೆ ಮೊದಲ ಪಂದ್ಯ; ಎದುರಾಳಿ ಯಾರು ಗೊತ್ತಾ?

ಹವಾಮಾನ ವರದಿ

ವೆದರ್‌ಕಾಮ್ ನೀಡಿರುವ ಹವಾಮಾನ ಮುನ್ಸೂಚನೆಯ ಪ್ರಕಾರ, ಭಾನುವಾರದಂದು ಚೆನ್ನೈನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 27 ಡಿಗ್ರಿ ಸೆಲ್ಸಿಯಸ್ ತಲುಪಲಿದೆ. ಪಂದ್ಯದುದ್ದಕ್ಕೂ ಮಳೆ ಮತ್ತು ಮೋಡ ಕವಿದ ವಾತಾವರಣದ ಸಾಧ್ಯತೆ ಶೇ.20 ಇರಲ್ಲಿದ್ದು, ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿಲ್ಲ ಎಂದು ವರದಿ ಮಾಡಿದೆ. ಹೀಗಾಗಿ ಪ್ರೇಕ್ಷಕರು ಮಳೆಯ ಆತಂಕವಿಲ್ಲದೆ ಪಂದ್ಯವನ್ನು ಪೂರ್ಣವಾಗಿ ವೀಕ್ಷಿಸಬಹುದಾಗಿದೆ.

ಉಭಯ ತಂಡಗಳು

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲಬುಶೇನ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಝಂಪಾ, ಮಿಚೆಲ್ ಸ್ಟಾರ್ಕ್ ಸ್ಟಾರ್ಕ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ