World Cup 2023: ಭಾರತ vs ಪಾಕಿಸ್ತಾನ್ ಪಂದ್ಯಕ್ಕೆ ಹೊಸ ಡೇಟ್ ಫಿಕ್ಸ್​?

World Cup 2023: ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8 ರಂದು ಆಡಲಿದೆ. ಚೆನ್ನೈನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಎದುರಾಳಿ ಆಸ್ಟ್ರೇಲಿಯಾ ಎಂಬುದು ವಿಶೇಷ.

World Cup 2023: ಭಾರತ vs ಪಾಕಿಸ್ತಾನ್ ಪಂದ್ಯಕ್ಕೆ ಹೊಸ ಡೇಟ್ ಫಿಕ್ಸ್​?
India vs Pakistan
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 31, 2023 | 4:09 PM

World Cup 2023: ಬಹು ನಿರೀಕ್ಷಿತ ಏಕದಿನ ವಿಶ್ವಕಪ್​ನ ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯವನ್ನು  ಅಕ್ಟೋಬರ್ 14 ಕ್ಕೆ ಮರುನಿಗದಿ ಮಾಡಲಾಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ವೇಳಾಪಟ್ಟಿ ಪ್ರಕಾರ ಅಕ್ಟೋಬರ್ 15 ರಂದು ಈ ಪಂದ್ಯ ನಡೆಯಬೇಕಿತ್ತು. ಆದರೀಗ ಅಕ್ಟೋಬರ್ 15 ರಿಂದ ನವರಾತ್ರಿಯೂ ಪ್ರಾರಂಭವಾಗುವುದರಿಂದ ಸೂಕ್ತ ಭದ್ರತೆಯನ್ನು ಖಾತ್ರಿಪಡಿಸುವ ಬಗ್ಗೆ ಅಹಮದಾಬಾದ್ ಪೊಲೀಸರು ಕಳವಳ ವ್ಯಕ್ತಪಡಿಸಿದ್ದ್ದಾರೆ. ಹೀಗಾಗಿ ಒಂದು ದಿನ ಮುಂಚಿತವಾಗಿ ಪಂದ್ಯವನ್ನು ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಅದರಂತೆ ಅಕ್ಟೋಬರ್ 14 ರಂದು ಅಹಮದಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ್ ನಡುವಣ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇದೀಗ ಇಂಡೊ-ಪಾಕ್ ವೇಳಾಪಟ್ಟಿ ಬದಲಾಗಿರುವ ಹಿನ್ನಲೆಯಲ್ಲಿ ಉಳಿದ ಕೆಲ ಪಂದ್ಯಗಳ ವೇಳಾಪಟ್ಟಿಯಲ್ಲೂ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ. ಈ ಎಲ್ಲಾ ಬದಲಾವಣೆಗಳೊಂದಿಗೆ ಆಗಸ್ಟ್ 31 ರಂದು ಹೊಸ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿದು ಬಂದಿದೆ.

ದಿನಾಂಕ ಬದಲಾವಣೆಗೆ ಮುಖ್ಯ ಕಾರಣವೇನು?

ಅಕ್ಟೋಬರ್ 15 ರಿಂದ ನವರಾತ್ರಿ ಹಬ್ಬ ಶುರುವಾಗಲಿದೆ. ಈ ಹಬ್ಬವನ್ನು ಉತ್ತರ ಭಾರತದಲ್ಲಿ ಅದರಲ್ಲೂ ಗುಜರಾತ್​ನಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಈ ಹಬ್ಬದ ನಿಮಿತ್ತ ಗುಜರಾತ್‌ನ ಅನೇಕ ಸ್ಥಳಗಳಲ್ಲಿ ಅದ್ಧೂರಿಯಾಗಿ ಗರ್ಬಾ ಕಾರ್ಯಕ್ರಮಗಳು ನಡೆಯುತ್ತವೆ. ಹೀಗಿರುವಾಗ ಪೊಲೀಸ್ ವ್ಯವಸ್ಥೆ ಕಲ್ಪಿಸುವುದೇ ಸರ್ಕಾರದ ಮುಂದಿರುವ ದೊಡ್ಡ ಸವಾಲು.

ಇತ್ತ ಅಹಮದಾಬಾದ್​ನ ಕ್ರೀಡಾಂಗಣದ ಸಾಮರ್ಥ್ಯವು ಒಂದು ಲಕ್ಷಕ್ಕೂ ಹೆಚ್ಚು. ಅದರಲ್ಲೂ ಭಾರತ-ಪಾಕಿಸ್ತಾನ್ ನಡುವಣ ಪಂದ್ಯಕ್ಕಾಗಿ ಸ್ಟೇಡಿಯಂ ಕಿಕ್ಕಿರಿದು ತುಂಬಿರಲಿದೆ. ಹೀಗಾಗಿ ಕ್ರೀಡಾಂಗಣದ ಸುತ್ತ ಮುತ್ತ ಹೆಚ್ಚಿನ ಪೊಲೀಸರನ್ನು ನಿಯೋಜಿಸಬೇಕಾಗುತ್ತದೆ.

ಅತ್ತ ಗುಜರಾತ್​ನೆಲ್ಲೆಡೆ ಗರ್ಬಾ ಕಾರ್ಯಕ್ರಮ ನಡೆಯುವುದರಿಂದ ಅಲ್ಲಿಗೂ ಪೊಲೀಸರನ್ನು ನಿಯೋಜಿಸಬೇಕು. ಹೀಗೆ ಒಂದೇ ದಿನ ಎಲ್ಲೆಡೆ ಸೂಕ್ತ ಪೊಲೀಸ್ ಭದ್ರತೆಯನ್ನು ಒದಗಿಸುವುದು ಕಷ್ಟಕರ ಎಂದು ಅಹಮದಾಬಾದ್ ಪೊಲೀಸರು ತಿಳಿಸಿದ್ದಾರೆ. ಹೀಗಾಗಿ ಪಂದ್ಯದ ದಿನಾಂಕವನ್ನು ಮರು ನಿಗದಿ ಮಾಡುವಂತೆ ಬಿಸಿಸಿಐಗೆ ಮನವಿ ಸಲ್ಲಿಸಿದ್ದಾರೆ.

ಈಗಾಗಲೇ ಬಿಸಿಸಿಐ ಐಸಿಸಿಗೆ ಈ ಕುರಿತು ಪತ್ರ ಬರೆದಿದ್ದು, ಅಕ್ಟೋಬರ್ 14 ರಂದು ಭಾರತ-ಪಾಕಿಸ್ತಾನ್ ನಡೆಸಲು ಅನುಮತಿ ಕೋರಲಾಗಿದೆ. ಅದರಂತೆ ಭಾನುವಾರದ ಬದಲು ಶನಿವಾರ ಪಂದ್ಯ ಆಯೋಜಿಸುವುದು ಬಹುತೇಕ ಖಚಿತವಾಗಿದೆ.

ಏಕದಿನ ವಿಶ್ವಕಪ್ ವೇಳಾಪಟ್ಟಿ:

ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದು ಶುರುವಾಗಿ ನವೆಂಬರ್ 19 ರಂದು ಕೊನೆಗೊಳ್ಳಲಿದೆ. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ಗಾಗಿ ಟೀಮ್ ಇಂಡಿಯಾದ 35 ಆಟಗಾರರ ಪಟ್ಟಿ ರೆಡಿ..!

ಇನ್ನು ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 8 ರಂದು ಆಡಲಿದೆ. ಚೆನ್ನೈನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಎದುರಾಳಿ ಆಸ್ಟ್ರೇಲಿಯಾ ಎಂಬುದು ವಿಶೇಷ. ಅಂದರೆ ಬಲಿಷ್ಠ ತಂಡದೊಡನೆ ಕಣಕ್ಕಿಳಿದು ಭಾರತ ವಿಶ್ವಕಪ್ ಅಭಿಯಾನ ಆರಂಭಿಸಲಿದೆ.

Published On - 4:07 pm, Mon, 31 July 23

ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ