AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2023: 9 ಭಾಷೆಗಳಲ್ಲಿ ಏಕದಿನ ವಿಶ್ವಕಪ್ ನೇರ ಪ್ರಸಾರ

ICC World Cup 2023: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.

World Cup 2023: 9 ಭಾಷೆಗಳಲ್ಲಿ ಏಕದಿನ ವಿಶ್ವಕಪ್ ನೇರ ಪ್ರಸಾರ
ICC World Cup 2023
TV9 Web
| Edited By: |

Updated on: Oct 01, 2023 | 7:55 PM

Share

ಏಕದಿನ ವಿಶ್ವಕಪ್ 2023 ರ ಪಂದ್ಯಾಟಗಳು 9 ಭಾಷೆಗಳಲ್ಲಿ ನೇರ ಪ್ರಸಾರವಾಗಲಿದೆ ಎಂದು ಸ್ಟಾರ್​ ಸ್ಪೋರ್ಟ್ಸ್​ ನೆಟ್​ವರ್ಕ್ ತಿಳಿಸಿದೆ. ಇಂಗ್ಲಿಷ್‌ ಹೊರತಾಗಿ ಹಿಂದಿ, ಮರಾಠಿ, ತಮಿಳು, ತೆಲುಗು, ಕನ್ನಡ, ಬೆಂಗಾಲಿ, ಗುಜರಾತಿ ಮತ್ತು ಮಲಯಾಳಂ ಭಾಷೆಗಳ ಮೂಲಕ ವಿಶ್ವಕಪ್​ ಅನ್ನು ವೀಕ್ಷಿಸಬಹುದು.

ಇದಕ್ಕಾಗಿ ಒಟ್ಟು 120 ಕಾಮೆಂಟೇಟರ್‌ಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಖ್ಯಾತ ಕ್ರಿಕೆಟಿಗರಾದ ರಿಕಿ ಪಾಂಟಿಂಗ್, ಇಯಾನ್ ಮೋರ್ಗನ್, ರವಿಶಾಸ್ತ್ರಿ, ಸುನಿಲ್ ಗವಾಸ್ಕರ್, ಶೇನ್ ವ್ಯಾಟ್ಸನ್ ಮತ್ತು ವಕಾರ್ ಯೂನಿಸ್ ಸೇರಿದಂತೆ ಹಲವು ಕಾಣಿಸಿಕೊಳ್ಳಲಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್​ ಕನ್ನಡದಲ್ಲೂ ನೇರ ಪ್ರಸಾರ:

ಈ ಬಾರಿಯ ಏಕದಿನ ವಿಶ್ವಕಪ್ ಸ್ಟಾರ್ ಸ್ಪೋರ್ಟ್ಸ್ ಕನ್ನಡದಲ್ಲೂ ನೇರ ಪ್ರಸಾರವಾಗಲಿದೆ. ಇದಕ್ಕಾಗಿ ಒಟ್ಟು 14 ಕಾಮೆಂಟೇಟರ್​ಗಳನ್ನು ಆಯ್ಕೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಕರ್ನಾಟಕದ ಕ್ರಿಕೆಟಿಗರುಗಳಾದ ವಿಜಯ್ ಭಾರಧ್ವಾಜ್, ಭರತ್ ಚಿಪ್ಲಿ, ವಿನಯ್ ಕುಮಾರ್, ಸುನಿಲ್ ಜೋಶಿ ಮತ್ತು ಪವನ್ ದೇಶಪಾಂಡೆ ಸೇರಿದಂತೆ ಹಲವರು ಕಾಣಿಸಿಕೊಳ್ಳಲಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್​ ಕನ್ನಡದ ಕಾಮೆಂಟೇಟರ್‌ಗಳ ಪಟ್ಟಿ ಹೀಗಿದೆ:

ಮಧು ಮೈಲಂಕೋಡಿ, ಕಿರಣ್ ಶ್ರೀನಿವಾಸ, ರೂಪೇಶ್ ಶೆಟ್ಟಿ, ವಿಜಯ್ ಭಾರದ್ವಾಜ್, ಭರತ್ ಚಿಪ್ಲಿ, ಶ್ರೀನಿವಾಸ ಮೂರ್ತಿ ಪಿ, ಪವನ್ ದೇಶಪಾಂಡೆ, ಸುನಿಲ್ ಜೋಶಿ, ಅಖಿಲ್ ಬಾಲಚಂದ್ರ, ಜಿಆರ್​ವಿ, ಜಿಕೆ ಅನಿಲ್ ಕುಮಾರ್, ವಿನಯ್ ಕುಮಾರ್, ಸುಮೇಶ್ ಗೋಣಿ, ಶಶಾಂಕ್ ಸುರೇಶ್.

ಹಾಟ್​ಸ್ಟಾರ್​ನಲ್ಲಿ ಉಚಿತ:

ಈ ಬಾರಿಯ ಏಕದಿನ ವಿಶ್ವಕಪ್​ ಅನ್ನು ಡಿಸ್ನಿ ಹಾಟ್​ಸ್ಟಾರ್ ಮೊಬೈಲ್ ಆ್ಯಪ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಈ ಅವಕಾಶ ಕೇವಲ ಮೊಬೈಲ್​ ಅಪ್ಲಿಕೇಶನ್​ಗೆ ಮಾತ್ರ ಸೀಮಿತವಾಗಿದೆ. ಅಂದರೆ ಹಾಟ್​ಸ್ಟಾರ್ ವೆಬ್​ಸೈಟ್ ಮೂಲಕ ವೀಕ್ಷಿಸಲು ಚಂದಾದಾರಿಕೆ ಪಡೆಯಬೇಕಾಗುತ್ತದೆ.

ಏಕದಿನ ವಿಶ್ವಕಪ್ ಯಾವಾಗ ಪ್ರಾರಂಭ?

ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಇನ್ನು ಭಾರತ ತಂಡವು ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ವಿಶ್ವಕಪ್​ನ ಸಂಪೂರ್ಣ ವೇಳಾಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.

Follow Us
TV9 Web
TV9 Web

TV9 Kannada

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು