World Cup 2023: ‘ವಿಶ್ವಕಪ್​ನಲ್ಲಿ ಪಾಕಿಸ್ತಾನ ತಂಡಕ್ಕೆ ಹೆಚ್ಚುವರಿ ಭದ್ರತೆ ಇಲ್ಲ’; ಭಾರತ ಸರ್ಕಾರದ ಸ್ಪಷ್ಟ ಸಂದೇಶ!

IND vs PAK: ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸಬೇಕೆಂದರೆ ನಮ್ಮ ತಂಡಕ್ಕೆ ಭಾರತದಲ್ಲಿ ಹೆಚ್ಚಿನ ಭದ್ರತೆ ನೀಡಬೇಕು ಎಂಬ ಷರತ್ತನ್ನು ಪಾಕ್ ಸರ್ಕಾರ ವಿಧಿಸಿತ್ತು. ಆದರೆ ಇದೀಗ ಈ ಷರತ್ತಿಗೆ ಖಡಕ್ ಸಂದೇಶ ರವಾನೆಯಾಗಿದ್ದು, ಟೂರ್ನಿಯಲ್ಲಿ ಉಳಿದ ತಂಡಗಳಂತೆಯೇ ಪಾಕಿಸ್ತಾನ ತಂಡವನ್ನು ಭಾರತದಲ್ಲಿ ನಡೆಸಿಕೊಳ್ಳಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

World Cup 2023: ‘ವಿಶ್ವಕಪ್​ನಲ್ಲಿ ಪಾಕಿಸ್ತಾನ ತಂಡಕ್ಕೆ ಹೆಚ್ಚುವರಿ ಭದ್ರತೆ ಇಲ್ಲ’; ಭಾರತ ಸರ್ಕಾರದ ಸ್ಪಷ್ಟ ಸಂದೇಶ!
ಪಾಕಿಸ್ತಾನ ಕ್ರಿಕೆಟ್ ತಂಡ
Follow us
ಪೃಥ್ವಿಶಂಕರ
|

Updated on:Aug 12, 2023 | 8:26 AM

2023ರ ಏಕದಿನ ವಿಶ್ವಕಪ್‌ಗೆ (World Cup 2023) ಭಾರತಕ್ಕೆ ಬರಲು ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಅನುಮತಿ ಸಿಕ್ಕಿದೆ. ಆದರೆ ಭಾರತಕ್ಕೆ ಪಾಕ್ ತಂಡವನ್ನು ಕಳುಹಿಸಲು ಆರಂಭದಿಂದಲೂ ಒಂದಿಲ್ಲೊಂದು ಷರತ್ತುಗಳನ್ನು ವಿಧಿಸುತ್ತಿರುವ ಪಾಕ್ ಸರ್ಕಾರಕ್ಕೆ ನಿಮ್ಮ ತಾಳಕ್ಕೆ ತಕ್ಕಂತೆ ಕುಣಿಯಲು ಸಾಧ್ಯವಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಭಾರತ ಸರ್ಕಾರ (Indian government ) ರವಾನಿಸಿದೆ. ವಾಸ್ತವವಾಗಿ ಪಾಕ್ ತಂಡವನ್ನು (Pakistan cricket team) ಭಾರತಕ್ಕೆ ಕಳುಹಿಸುವ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳಲು ಪಾಕ್ ಸರ್ಕಾರ ಸಮಿತಿಯೊಂದನ್ನು ರಚಿಸಿತ್ತು. ಈ ಸಮಿತಿ ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸಬೇಕೆಂದರೆ ನಮ್ಮ ತಂಡಕ್ಕೆ ಭಾರತದಲ್ಲಿ ಹೆಚ್ಚಿನ ಭದ್ರತೆ ನೀಡಬೇಕು. ಇದನ್ನು ಐಸಿಸಿ (ICC) ಲಿಖಿತ ರೂಪದಲ್ಲಿ ನಮಗೆ ಭರವಸೆ ನೀಡಿದರೆ, ನಾವು ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸುತ್ತೇವೆ ಎಂಬ ಷರತ್ತನ್ನು ವಿಧಿಸಿದ್ದವು. ಆದರೆ ಇದೀಗ ಈ ಷರತ್ತಿಗೆ ಖಡಕ್ ಸಂದೇಶ ರವಾನೆಯಾಗಿದ್ದು, ಟೂರ್ನಿಯಲ್ಲಿ ಉಳಿದ ತಂಡಗಳಂತೆಯೇ ಪಾಕಿಸ್ತಾನ ತಂಡವನ್ನು ಭಾರತದಲ್ಲಿ ನಡೆಸಿಕೊಳ್ಳಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

ಅಕ್ಟೋಬರ್ 5 ರಿಂದ ಭಾರತದಲ್ಲಿ 13ನೇ ಏಕದಿನ ವಿಶ್ವಕಪ್ ಆರಂಭವಾಗುತ್ತಿದ್ದು, ಇದರಲ್ಲಿ ಟೀಂ ಇಂಡಿಯಾ, ಪಾಕಿಸ್ತಾನ ಸೇರಿದಂತೆ ಒಟ್ಟು 10 ತಂಡಗಳು ಭಾಗವಹಿಸುತ್ತಿವೆ. ಪಾಕಿಸ್ತಾನದ ಮೊದಲ ಪಂದ್ಯ ಅಕ್ಟೋಬರ್ 6 ರಂದು ನಡೆಯಲ್ಲಿದೆ. ಆದರೆ ಕೆಲವು ದಿನಗಳ ಹಿಂದೆ, ಪಾಕಿಸ್ತಾನಿ ಮಂಡಳಿಯು ತಂಡವನ್ನು ಕಳುಹಿಸಲು ಹಿಂದೇಟು ಹಾಕುತ್ತಿತ್ತು. ಅಲ್ಲದೆ ತಂಡವನ್ನು ಭಾರತಕ್ಕೆ ಕಳುಹಿಸಲು ಅನುಮತಿಗಾಗಿ ತನ್ನ ಸರ್ಕಾರವನ್ನು ಕೇಳಿತ್ತು. ಪಾಕಿಸ್ತಾನ ಸರ್ಕಾರವು ರಚಿಸಿದ್ದ ಸಮಿತಿಯಲ್ಲಿ, ಅಂತಿಮವಾಗಿ ತಂಡವನ್ನು ಭಾರತಕ್ಕೆ ಕಳುಹಿಸುವುದಕ್ಕೆ ಅನುಮತಿ ನೀಡಲಾಗಿತ್ತು.

ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಪಾಕಿಸ್ತಾನದ ಹೆಸರಿರುವ ಜೆರ್ಸಿ ತೊಡಲಿದೆ ಭಾರತ!

ವಿಶೇಷ ಆತಿಥ್ಯ ಸಿಗುವುದಿಲ್ಲ

ಪಾಕಿಸ್ತಾನ ಸರ್ಕಾರ, ತನ್ನ ತಂಡಕ್ಕೆ ಅನುಮತಿ ನೀಡುವುದರೊಂದಿಗೆ ಐಸಿಸಿ ಹಾಗೂ ಭಾರತದ ಅಧಿಕಾರಿಗಳ ಮುಂದೆ ತಂಡದ ಭದ್ರತಾ ವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು ಎಂದು ವರದಿಯಾಗಿತ್ತು. ಅಲ್ಲದೆ ವಿಶ್ವಕಪ್‌ಗೂ ಮುನ್ನ ಭದ್ರತೆಯನ್ನು ಪರಿಶೀಲಿಸಲು ವಿಶೇಷ ತಂಡವನ್ನು ಭಾರತಕ್ಕೆ ಕಳುಹಿಸಬಹುದು ಎಂದು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಪಾಕ್ ಸರ್ಕಾರದ ಈ ಮನವಿಯನ್ನು ಭಾರತ ಸರ್ಕಾರ ಸರಾಸಗಟಾಗಿ ತಿರಸ್ಕರಿಸಿದೆ.

ಶುಕ್ರವಾರ, ಆಗಸ್ಟ್ 11 ರಂದು, ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ಪತ್ರಿಕಾಗೋಷ್ಠಿಯಲ್ಲಿ ಈ ವಿಷಯದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ವಿಶ್ವಕಪ್‌ಗಾಗಿ ಭಾರತಕ್ಕೆ ಬರುವ ಇತರ ಎಲ್ಲಾ ತಂಡಗಳಂತೆ ಪಾಕಿಸ್ತಾನ ತಂಡಕ್ಕೂ ಆತಿಥ್ಯ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಹೀಗಾಗಿ ಪಾಕ್ ತಂಡ ಇತರೆ ತಂಡಗಳಂತೆ ಭಾರತದಲ್ಲಿ ವಿಶ್ವಕಪ್ ಆಡಲಿದೆ.

ಪಾಕಿಸ್ತಾನದ 3 ಪಂದ್ಯಗಳ ವೇಳಾಪಟ್ಟಿ ಬದಲಾಗಿದೆ

ಇದಲ್ಲದೇ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಮೂರು ಪಂದ್ಯಗಳ ವೇಳಾಪಟ್ಟಿಯನ್ನು ಬದಲಾಯಿಸಲಾಗಿದೆ. ಐಸಿಸಿ ಬಿಡುಗಡೆ ಮಾಡಿರುವ ಹೊಸ ವೇಳಾಪಟ್ಟಿಯ ಪ್ರಕಾರ, ಶ್ರೀಲಂಕಾ ವಿರುದ್ಧದ ಪಾಕಿಸ್ತಾನದ ಪಂದ್ಯ ಈಗ ಅಕ್ಟೋಬರ್ 12 ರ ಬದಲಿಗೆ ಅಕ್ಟೋಬರ್ 10 ರಂದು ನಡೆಯಲಿದೆ. ಅದೇ ಸಮಯದಲ್ಲಿ, ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವು ಅಕ್ಟೋಬರ್ 15 ರ ಬದಲಿಗೆ 14 ರಂದು ನಡೆಯಲಿದೆ. ಇದಲ್ಲದೆ ನವೆಂಬರ್ 12 ರಂದು ಕೋಲ್ಕತ್ತಾದಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಬೇಕಿದ್ದ ಪಂದ್ಯವು ನವೆಂಬರ್ 11 ರಂದು ನಡೆಯಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:23 am, Sat, 12 August 23

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್