World Cup 2023: ಪಾಕ್ ಮಂಡಳಿಯಿಂದಾಗಿ ವಿಶ್ವಕಪ್ ವೇಳಾಪಟ್ಟಿ ವಿಳಂಬ; ಗರಂ ಆದ ಬಿಸಿಸಿಐ

World Cup 2023: ವಿಶ್ವಕಪ್‌ನ ಕರಡು ವೇಳಾಪಟ್ಟಿಯನ್ನು ಐಸಿಸಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಗಳಿಗೆ ಕಳುಹಿಸಿದ್ದು, ಪಿಸಿಬಿ ಎರಡು ಆಕ್ಷೇಪಣೆಗಳನ್ನು ಎತ್ತಿದೆ.

World Cup 2023: ಪಾಕ್ ಮಂಡಳಿಯಿಂದಾಗಿ ವಿಶ್ವಕಪ್ ವೇಳಾಪಟ್ಟಿ ವಿಳಂಬ; ಗರಂ ಆದ ಬಿಸಿಸಿಐ
ಏಕದಿನ ವಿಶ್ವಕಪ್Image Credit source: insidesport
Follow us
ಪೃಥ್ವಿಶಂಕರ
|

Updated on:Jun 21, 2023 | 11:59 AM

ಮುಂದಿನ ಅಕ್ಟೋಬರ್‌ ಹಾಗೂ ನವೆಂಬರ್​​ನಲ್ಲಿ ಏಕದಿನ ವಿಶ್ವಕಪ್ (World Cup 2023) ನಡೆಯಲಿದೆ. ಮೊದಲ ಬಾರಿಗೆ ಭಾರತ ಒಂದೇ ಏಕದಿನ ವಿಶ್ವಕಪ್‌ಗೆ ಆತಿಥ್ಯವಹಿಸುತ್ತಿದೆ. ಇದಕ್ಕಾಗಿ ಬಿಸಿಸಿಐ (BCCI) ಕೂಡ ಸಿದ್ಧತೆ ಆರಂಭಿಸಿದೆ. ಆದರೆ, ಇದಕ್ಕೂ ಮುನ್ನ ವಿಶ್ವಕಪ್ ವೇಳಾಪಟ್ಟಿಗಾಗಿ (World Cup 2023 Schedule) ಕಾಯಲಾಗುತ್ತಿದೆ. ಈ ಹಿಂದೆಯೇ ಜೂನ್ ಆರಂಭದಲ್ಲಿ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇತ್ತು. ಆದರೆ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ. ವಿಶ್ವದಾದ್ಯಂತ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲದೆ ಕ್ರಿಕೆಟ್ ಮಂಡಳಿಗಳು ಮತ್ತು ಆಟಗಾರರು ಸಹ ವೇಳಾಪಟ್ಟಿಗಾಗಿ ಕಾಯುತ್ತಿದ್ದಾರೆ. ಆದರೆ, ಈ ನಡುವೆ ಏಕದಿನ ವಿಶ್ವಕಪ್ ವೇಳಾಪಟ್ಟಿ ವಿಳಂಬವಾಗಲು ಪಾಕಿಸ್ತಾನ ಕ್ರಿಕೆಟ್ ಮಂಡಳಿಯೇ (PCB) ನೇರ ಹೊಣೆ ಎಂದು ಭಾರತೀಯ ಕ್ರಿಕೆಟ್ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಪಿಸಿಬಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತದ ಅಂಗಳದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಸಿದ್ಧತೆಯಲ್ಲಿ ಬಿಸಿಸಿಐ ನಿರತವಾಗಿದೆ. ಐಪಿಎಲ್ 2023 ಮುಗಿಯುತ್ತಿದ್ದಂತೆ ಭಾರತೀಯ ಕ್ರಿಕೆಟ್ ಮಂಡಳಿ ಸಿದ್ಧತೆಗಳನ್ನು ತೀವ್ರಗೊಳಿಸಿದೆ. ಆದರೆ ವಿಶ್ವಕಪ್ ವೇಳಾಪಟ್ಟಿಯಲ್ಲಿ ಎರಡು ಪ್ರಮುಖ ಬದಲಾವಣೆಗಳನ್ನು ಮಾಡುವಂತೆ ಪಾಕಿಸ್ತಾನ ಒತ್ತಾಯಿಸುತ್ತಿದೆ. ಹೀಗಾಗಿ ವೇಳಾಪಟ್ಟಿ ಘೋಷಣೆ ವಿಳಂಬವಾಗುತ್ತಿದೆ.

ಏಕದಿನ ವಿಶ್ವಕಪ್​ನಲ್ಲಿ ಕಾಶ್ಮೀರ್ ವಿಲೋ ಬ್ಯಾಟ್​ಗಳಿಗೆ ಹೆಚ್ಚಿದ ಬೇಡಿಕೆ; ಈ ಬ್ಯಾಟ್​ಗಳ ವಿಶೇಷತೆ ಏನು ಗೊತ್ತಾ?

ಅಹಮದಾಬಾದ್ ನಂತರ ಈಗ ಚೆನ್ನೈ

ಏಷ್ಯಾಕಪ್​ನಿಂದ ಆರಂಭವಾದ ಪಿಸಿಬಿ ಹಾಗೂ ಬಿಸಿಸಿಐ ನಡುವಿನ ಶೀತಲ ಸಮರಕ್ಕೆ ಸದ್ಯಕ್ಕೆ ಕೊನೆ ಸಿಗುತ್ತಿಲ್ಲ. ಈ ಮೊದಲು ಅಹಮದಾಬಾದ್​ನಲ್ಲಿ ಪಾಕಿಸ್ತಾನ ಪಂದ್ಯವನ್ನಾಡಲು ಚಕಾರ ಎತ್ತಿತ್ತು. ಅಹಮದಾಬಾದ್‌ನ ವಿಶ್ವದ ಅತಿದೊಡ್ಡ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಲ್ಲ ಎಂದು ಪಾಕಿಸ್ತಾನ ಹೇಳಿಕೊಂಡಿತ್ತು. ಆರಂಭದಲ್ಲಿ ಅಹಮದಾಬಾದ್‌ನಲ್ಲಿ ಆಡಲು ನಿರಾಕರಿಸಿದ ಪಾಕಿಸ್ತಾನ ಇದೀಗ ಚೆನ್ನೈನಲ್ಲಿ ಆಡಲು ಆಕ್ಷೇಪ ವ್ಯಕ್ತಪಡಿಸುತ್ತಿದೆ. ಈ ಬಗ್ಗೆ ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಇನ್ಸೈಡ್ ಸ್ಪೋರ್ಟ್ಸ್ ಜೊತೆ ಮಾತನಾಡಿದ್ದಾರೆ.

‘ಪಿಸಿಬಿ ಅದಕ್ಕೆ ಇಷ್ಟಬಂದಂತೆ ಮಾತನಾಡಬಹುದು. ಆದರೆ ವೇಳಾಪಟ್ಟಿ ವಿಳಂಬಕ್ಕೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯೇ ಹೊಣೆ ಎನ್ನುವುದು ಸತ್ಯ. ಮೊದಲು ಪಾಕಿಸ್ತಾನ ಅಹಮದಾಬಾದ್‌ನಲ್ಲಿ ಆಡಲು ಸಿದ್ಧವಿರಲಿಲ್ಲ, ಈಗ ಚೆನ್ನೈನಲ್ಲಿ ಆಡಲು ಸಿದ್ಧವಾಗಿಲ್ಲ. ಈ ಹಿಂದೆ ಅಹಮದಾಬಾದ್‌ನಲ್ಲಿ ಭಾರತದ ವಿರುದ್ಧ ಆಡುವುದಕ್ಕೆ ಪಿಸಿಬಿ ಆಕ್ಷೇಪ ವ್ಯಕ್ತಪಡಿಸಿತ್ತು. ಆದರೆ ಇದೀಗ ಚೆನ್ನೈನಲ್ಲಿ ಆಡಲು ಪಾಕ್ ಆಕ್ಷೇಪ ಮಾಡುತ್ತಿದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ಪಾಕ್ ಮಂಡಳಿ ವಿರುದ್ಧ ಹರಿಹಾಯ್ದಿದ್ದಾರೆ.

ಕರಡು ವೇಳಾಪಟ್ಟಿಯ ನಂತರ ಆಕ್ಷೇಪಣೆ

ವಿಶ್ವಕಪ್‌ನ ಕರಡು ವೇಳಾಪಟ್ಟಿಯನ್ನು ಐಸಿಸಿ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿಗಳಿಗೆ ಕಳುಹಿಸಿದ್ದು, ಪಿಸಿಬಿ ಎರಡು ಆಕ್ಷೇಪಣೆಗಳನ್ನು ಎತ್ತಿದೆ. ಇದನ್ನು ಬದಲಾಯಿಸುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಐಸಿಸಿಗೆ ಮನವಿ ಮಾಡಿದೆ. ಇದರಿಂದಾಗಿ ಈಗ ವೇಳಾಪಟ್ಟಿ ವಿಳಂಬವಾಗುತ್ತಿದೆ.

ಚೆನ್ನೈನಲ್ಲಿ ಸ್ಪಿನ್ನರ್‌ಗಳ ಅನುಕೂಲಕರ ಪಿಚ್‌ನಿಂದಾಗಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೆ ಪಾಕಿಸ್ತಾನ ಆಕ್ಷೇಪ ವ್ಯಕ್ತಪಡಿಸಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯವನ್ನು ಬೆಂಗಳೂರಿನ ಬದಲು ಚೆನ್ನೈನಲ್ಲಿ ಆಯೋಜಿಸಬೇಕು ಎಂದು ಪಾಕ್ ಒತ್ತಾಯಿಸುತ್ತಿದೆ. ಹಾಗೆಯೇ ಚೆನ್ನೈನಲ್ಲಿ ನಿಗದಿ ಮಾಡಿರುವ ಅಫ್ಘಾನಿಸ್ತಾನ ವಿರುದ್ಧದ ಪಂದ್ಯವನ್ನು ಬೆಂಗಳೂರಿನಲ್ಲಿ ಏರ್ಪಡಿಸುವಂತೆ ಒತ್ತಾಯಿಸಿದೆ. ಆದರೆ, ಈ ಮನವಿಯನ್ನು ಬಿಸಿಸಿಐ ತಿರಸ್ಕರಿಸಿದೆ. ಈಗ ಈ ಸಮಸ್ಯೆಯನ್ನು ಬಗೆಹರಿಸುವ ಜವಬ್ದಾರಿ ಐಸಿಸಿ ಮೇಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:57 am, Wed, 21 June 23

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?