IND vs PAK: ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಫ್ಯಾನ್ಸ್​ಗೆ ಸಿಹಿ ಸುದ್ದಿ..!

India vs Pakistan, World Cup 2023: ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಕೆಲವು ಗಂಟೆಗಳ ಮೊದಲು ಟೀಂ ಇಂಡಿಯಾ ಅಹಮದಾಬಾದ್ ತಲುಪಿದೆ. ಟೀಂ ಇಂಡಿಯಾ ಜೊತೆ ಶುಭ್​ಮನ್ ಗಿಲ್ ಕೂಡ ಅಹಮದಾಬಾದ್​ಗೆ ತೆರಳಿದ್ದಾರೆ. ಈ ಪಂದ್ಯಕ್ಕೂ ಮುನ್ನ ಶುಭ್​ಮನ್ ನೆಟ್ಸ್‌ನಲ್ಲಿ ಕಠಿಣ ಅಭ್ಯಾಸ ನಡೆಸಿದ್ದಾರೆ.

IND vs PAK: ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಫ್ಯಾನ್ಸ್​ಗೆ ಸಿಹಿ ಸುದ್ದಿ..!
ಭಾರತ- ಪಾಕಿಸ್ತಾನ
Follow us
ಪೃಥ್ವಿಶಂಕರ
|

Updated on: Oct 13, 2023 | 10:38 AM

ಟೀಂ ಇಂಡಿಯಾ ಏಕದಿನ ವಿಶ್ವಕಪ್ (ICC World Cup 2023) ಅಭಿಯಾನವನ್ನು ಅದ್ಭುತ ರೀತಿಯಲ್ಲಿ ಪ್ರಾರಂಭಿಸಿದೆ. ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು ಸೋಲಿಸಿದ ಟೀಂ ಇಂಡಿಯಾ (Team India) ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಸೋಲಿಸಿತು. ಈ 2 ಗೆಲುವಿನೊಂದಿಗೆ ಟೀಂ ಇಂಡಿಯಾ ವಿಶ್ವಕಪ್ ಗೆಲ್ಲುವ ಹಕ್ಕನ್ನು ಬಲಗೊಳಿಸಿದೆ. ಟೀಂ ಇಂಡಿಯಾ ಇದುವರೆಗಿನ ಎರಡೂ ಪಂದ್ಯಗಳಲ್ಲಿ ಬೌಲಿಂಗ್, ಬ್ಯಾಟಿಂಗ್ ಮತ್ತು ಫೀಲ್ಡಿಂಗ್ ಮೂರೂ ರಂಗಗಳಲ್ಲಿಯೂ ಬಲಿಷ್ಠ ಪ್ರದರ್ಶನ ನೀಡಿದೆ. ಟೀಂ ಇಂಡಿಯಾ ಈಗ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ India vs Pakistan ಸವಾಲನ್ನು ಎದುರಿಸುತ್ತಿದೆ. ಅಕ್ಟೋಬರ್ 14ರ ಶನಿವಾರದಂದು ಟೀಂ ಇಂಡಿಯಾ ಪಾಕಿಸ್ತಾನವನ್ನು ಎದುರಿಸಲಿದೆ. ಈ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಅದಕ್ಕೂ ಮೊದಲು, ಆರಂಭಿಕ ಬ್ಯಾಟ್ಸ್‌ಮನ್ ಶುಭ್​ಮನ್ ಗಿಲ್ (Shubman Gill ) ಆರೋಗ್ಯದ ಬಗ್ಗೆ ದೊಡ್ಡ ಅಪ್‌ಡೇಟ್ ಸಿಕ್ಕಿದೆ.

ಡೆಂಗ್ಯೂ ಜ್ವರದಿಂದಾಗಿ ಶುಭ್​ಮನ್ ಗಿಲ್ ವಿಶ್ವಕಪ್‌ನ ಮೊದಲ 2 ಪಂದ್ಯಗಳಿಂದ ಹೊರಗುಳಿಯಬೇಕಾಯಿತು. ಎರಡೂ ಪಂದ್ಯಗಳಲ್ಲಿ ಶುಭ್​ಮನ್ ಬದಲಿಗೆ ಇಶಾನ್ ಕಿಶನ್​ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಡೆಂಗ್ಯೂ ಸೋಂಕಿನಿಂದ ಬಳಲುತ್ತಿದ್ದ ಗಿಲ್ ಆಸ್ಪತ್ರೆಗೂ ಕೂಡ ದಾಖಲಾಗಿದ್ದರು. ಆದರೆ ಕೆಲವೇ ಗಂಟೆಗಳ ಬಳಿಕ ಅವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು.

ತಂಡ ಸೇರಿಕೊಳ್ಳಲು ಅಹಮದಾಬಾದ್ ತಲುಪಿದ ಶುಭ್​ಮನ್ ಗಿಲ್; ಪಾಕ್ ವಿರುದ್ಧ ಕಣಕ್ಕೆ?

ನೆಟ್ಸ್‌ನಲ್ಲಿ ಕಠಿಣ ಅಭ್ಯಾಸ

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಕೆಲವು ಗಂಟೆಗಳ ಮೊದಲು ಟೀಂ ಇಂಡಿಯಾ ಅಹಮದಾಬಾದ್ ತಲುಪಿದೆ. ಟೀಂ ಇಂಡಿಯಾ ಜೊತೆ ಶುಭ್​ಮನ್ ಗಿಲ್ ಕೂಡ ಅಹಮದಾಬಾದ್​ಗೆ ತೆರಳಿದ್ದಾರೆ. ಈ ಪಂದ್ಯಕ್ಕೂ ಮುನ್ನ ಶುಭ್​ಮನ್ ನೆಟ್ಸ್‌ನಲ್ಲಿ ಕಠಿಣ ಅಭ್ಯಾಸ ನಡೆಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಶುಭ್​ಮನ್ ಒಂದು ಗಂಟೆಯ ಕಾಲ ಅಭ್ಯಾಸ ಮಾಡಿದ್ದು, ಪಾಕಿಸ್ತಾನ ವಿರುದ್ಧ ಆಡಲು ಕಠಿಣ ತಯಾರಿ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.

ಪಾಕ್ ವಿರುದ್ಧ ಗಿಲ್ ಆಡುತ್ತಾರಾ?

ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ಅಭ್ಯಾಸಕ್ಕಿಳಿದಿರುವ ಗಿಲ್, ಅಕ್ಟೋಬರ್ 14 ರಂದು ನಡೆಯಲ್ಲಿರುವ ಹೈವೋಲ್ಟೇಜ್ ಕದನಕ್ಕೆ ಟೀಂ ಇಂಡಿಯಾ ಪರ ಕಣಕ್ಕಿಳಿಯುತ್ತಾರಾ ಎಂಬುದು ಪ್ರಶ್ನೆಯಾಗಿದೆ. ಒಂದು ವೇಳೆ ಗಿಲ್ ಫಿಟ್ ಆದರೂ ಕೂಡ ಅವರನ್ನು ಆಡಿಸುವುದು ಕಷ್ಟವಾಗಿದೆ. ಏಕೆಂದರೆ ಆರಂಭಿಕರಾಗಿ ಅವಕಾಶ ಪಡೆದಿರುವ ಇಶಾನ್ ಕಿಶನ್, ಅಫ್ಘಾನಿಸ್ತಾನದ ವಿರುದ್ಧ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಅಲ್ಲದೆ ಅನಾರೋಗ್ಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳುತ್ತಿರುವ ಗಿಲ್ ಅವರ ಫಾರ್ಮ್​ ಹೇಗಿದೆ ಎಂಬುದು ಆಡಳಿತ ಮಂಡಳಿಗೆ ಖಚಿತವಾಗಿಲ್ಲ. ಹೀಗಾಗಿ ಪಾಕ್ ವಿರುದ್ಧ ಗಿಲ್ ಕಣಕ್ಕಿಳಿಯುತ್ತಾರಾ? ಇಲ್ಲವಾ? ಎಂಬುದು ಪ್ರಶ್ನೆಯಾಗಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು