AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ODI World Cup 2023: ಭಾರತ- ಪಾಕ್ ಪಂದ್ಯ ಸೇರಿದಂತೆ ಈ 6 ಪಂದ್ಯಗಳ ದಿನಾಂಕ ಬದಲಾವಣೆ..! ವರದಿ

ODI World Cup 2023: ಮಾಹಿತಿ ಪ್ರಕಾರ ಭಾರತ ಹಾಗೂ ಪಾಕಿಸ್ತಾನ ಪಂದ್ಯದ ಜೊತೆಗೆ 6 ಪಂದ್ಯಗಳ ದಿನಾಂಕ ಬದಲಾಗಲಿದೆ ಎಂದು ವರದಿಯಾಗಿದೆ.

ODI World Cup 2023: ಭಾರತ- ಪಾಕ್ ಪಂದ್ಯ ಸೇರಿದಂತೆ ಈ 6 ಪಂದ್ಯಗಳ ದಿನಾಂಕ ಬದಲಾವಣೆ..! ವರದಿ
ಏಕದಿನ ವಿಶ್ವಕಪ್ ವೇಳಾಪಟ್ಟಿ
ಪೃಥ್ವಿಶಂಕರ
|

Updated on:Aug 02, 2023 | 9:29 AM

Share

ವಿಶ್ವಕಪ್ (ODI World Cup 2023) ವೇಳಾಪಟ್ಟಿಯ ಕುರಿತಾಗಿ ಸೃಷ್ಟಿಯಾಗಿರುವ ಗೊಂದಲ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಹಿಂದೆ ಪ್ರಕಟವಾಗಿದ್ದ ವೇಳಾಪಟ್ಟಿಯ ಪ್ರಕಾರ, ಅಕ್ಟೋಬರ್ 15 ರಂದು ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಹೈವೋಲ್ಟೇಜ್ ಕದನ ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ (narendra modi stadium) ನಡೆಯಬೇಕಿತ್ತು. ಆದರೆ ಆ ದಿನದಿಂದ ಭಾರತದಲ್ಲಿ ನವರಾತ್ರಿ ಆರಂಭವಾಗುವುದರಿಂದ ಭದ್ರತಾ ಸಮಸ್ಯೆ ಎದುರಾಗುವ ಸೂಚನೆಯನ್ನು ಭದ್ರತಾ ಏಜೆನ್ಸಿಗಳು ಬಿಸಿಸಿಐಗೆ (BCCI) ನೀಡಿದ್ದವು. ಹೀಗಾಗಿ ಅದೊಂದು ಪಂದ್ಯದ ದಿನಾಂಕ ಬದಲಾಗಲಿದೆ ಎಂದು ಮೊದಲು ವರದಿಯಾಗಿತ್ತು. ಆದರೆ ಆ ಬಳಿಕ ನಡೆದ ಬಿಸಿಸಿಐ ಸಭೆಯಲ್ಲಿ ಮೂರು ದೇಶಗಳು ಪಂದ್ಯದ ವೇಳಾಪಟ್ಟಿಯನ್ನು ಬದಲಿಸುವಂತೆ ಐಸಿಸಿಗೆ ಮನವಿ ಮಾಡಿದ್ದವು. ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ಭಾರತ ಹಾಗೂ ಪಾಕಿಸ್ತಾನ ಪಂದ್ಯದ ಜೊತೆಗೆ 6 ಪಂದ್ಯಗಳ ದಿನಾಂಕ ಬದಲಾಗಲಿದೆ ಎಂದು ವರದಿಯಾಗಿದೆ.

ಸದ್ಯ ಹೊರಬಿದ್ದಿರುವ ಮಾಹಿತಿ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವನ್ನು ಅಕ್ಟೋಬರ್ 15 ರ ಬದಲು, ಅಕ್ಟೋಬರ್ 14 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ.

ಏಕದಿನ ವಿಶ್ವಕಪ್​ನಲ್ಲಿ ಯಾರಿಗೆಲ್ಲ ಹ್ಯಾಟ್ರಿಕ್ ವಿಕೆಟ್ ಸಿಕ್ಕಿದೆ ಗೊತ್ತಾ?

ಒಟ್ಟು 6 ಪಂದ್ಯಗಳ ದಿನಾಂಕ ಬದಲಾವಣೆ?

ಆದರೆ, ಇದೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ ಜೊತೆಗೆ ಪಾಕಿಸ್ತಾನದ ಮತ್ತೊಂದು ಪಂದ್ಯದ ದಿನಾಂಕವನ್ನೂ ಬದಲಾಯಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಸದ್ಯದ ಮಾಹಿತಿ ಪ್ರಕಾರ, ವೇಳಾಪಟ್ಟಿಯ ಪ್ರಕಾರ ಅಕ್ಟೋಬರ್ 12 ರಂದು ನಡೆಯಬೇಕಿದ್ದ ಭಾರತ ಹಾಗೂ ಶ್ರೀಲಂಕಾ ನಡುವಿನ ವಿಶ್ವಕಪ್ ಪಂದ್ಯ, ಅಕ್ಟೋಬರ್ 10 ರಂದು ನಡೆಯಲ್ಲಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಈ ತಂಡಗಳ ಪಂದ್ಯದ ದಿನಾಂಕದಲ್ಲೂ ಬದಲಾವಣೆ

ಪಾಕಿಸ್ತಾನದ 2 ಪಂದ್ಯಗಳ ದಿನಾಂಕದ ಬದಲಾವಣೆಯ ಜೊತೆಗೆ , ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದ ವೇಳಾಪಟ್ಟಿಯನ್ನು ಸಹ ಬದಲಾಯಿಸಲಾಗಿದೆ. ವರದಿ ಪ್ರಕಾರ, ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ಅಕ್ಟೋಬರ್ 14 ರ ಬದಲು ಒಂದು ದಿನದ ನಂತರ ಅಂದರೆ ಅಕ್ಟೋಬರ್ 15 ರಂದು ನಡೆಯಲಿದೆ. ಇದಲ್ಲದೇ ಅಫ್ಘಾನಿಸ್ತಾನ ಮತ್ತು ಇಂಗ್ಲೆಂಡ್ ನಡುವಿನ ಪಂದ್ಯದ ದಿನಾಂಕದಲ್ಲೂ ಬದಲಾವಣೆಯಾಗಿದೆ ಎಂದು ವರದಿಯಾಗಿದೆ.

ಹೊಸ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟ

ಒಂದು ಪಂದ್ಯದ ದಿನಾಂಕ ಬದಲಾವಣೆಯಿಂದಾಗಿ ಸಾಕಷ್ಟು ಸಮಸ್ಯೆಗಳು ಎದುರಾಗಿದ್ದು, ಈ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈಗಾಗಲೇ ಬಿಸಿಸಿಐ ಹಾಗೂ ಐಸಿಸಿ ಕೆಲಸ ಆರಂಭಿಸಿವೆ. ವರದಿ ಪ್ರಕಾರ, ಐಸಿಸಿ ಶೀಘ್ರದಲ್ಲೇ ಅಂದರೆ, ಇನ್ನೆರಡು ದಿನದಲ್ಲಿ ಹೊಸ ವಿಶ್ವಕಪ್ ವೇಳಾಪಟ್ಟಿ ಹೊರಬೀಳುವ ಸಾಧ್ಯತೆಗಳಿವೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:28 am, Wed, 2 August 23

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ