ಬಾಂಗ್ಲಾ ವಿರುದ್ಧ ಕಣಕ್ಕಿಳಿಯಲು ಪುಣೆಗೆ ಹಾರಿದ ಟೀಂ ಇಂಡಿಯಾ; ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ

India vs Bangladesh, World Cup 2023: ಪುಣೆಯ ಎಮ್​ಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ವಿಶ್ವಕಪ್ ಪಂದ್ಯಕ್ಕೆ ಸಜ್ಜಾಗಿರುವ ಟೀಂ ಇಂಡಿಯಾ ಅಕ್ಟೋಬರ್ 15 (ಭಾನುವಾರ) ರಂದು ಅಹಮದಾಬಾದ್‌ನಿಂದ ಪುಣೆಗೆ ಹಾರಿದೆ.

ಬಾಂಗ್ಲಾ ವಿರುದ್ಧ ಕಣಕ್ಕಿಳಿಯಲು ಪುಣೆಗೆ ಹಾರಿದ ಟೀಂ ಇಂಡಿಯಾ; ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Oct 16, 2023 | 6:36 AM

ಪುಣೆಯ ಎಮ್​ಸಿಎ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ನಡುವಿನ ವಿಶ್ವಕಪ್ (ICC World Cup 2023) ಪಂದ್ಯಕ್ಕೆ ಸಜ್ಜಾಗಿರುವ ಟೀಂ ಇಂಡಿಯಾ (Team India) ಅಕ್ಟೋಬರ್ 15 (ಭಾನುವಾರ) ರಂದು ಅಹಮದಾಬಾದ್‌ನಿಂದ ಪುಣೆಗೆ ಹಾರಿದೆ. ಬಿಸಿಸಿಐ (BCCI) ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಂಡದ ಆಟಗಾರರು ಪುಣೆಗೆ ತೆರಳಿದ ಬಗ್ಗೆ ಮಾಹಿತಿ ನೀಡಿದೆ. ವಿಶ್ವಕಪ್​​ನಲ್ಲಿ ಆಡಿರುವ ಮೂರೂ ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧವೂ ತನ್ನ ಗೆಲುವಿನ ಸರಣಿಯನ್ನು ಮುಂದುವರೆಸುವ ಇರಾದೆಯಲ್ಲಿದೆ. ಅದರಲ್ಲೂ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿರುವ ರೋಹಿತ್ (Rohit Sharma)​ ಪಡೆಯ ಆತ್ಮವಿಶ್ವಾಸ ದುಪ್ಪಾಟ್ಟಾಗಿರುವುದು ತಂಡಕ್ಕೆ ಪ್ಲಸ್ ಪಾಯಿಂಟ್ ಆಗಿದೆ.

ಸತತ ನಾಲ್ಕನೇ ಗೆಲುವಿನ ಮೇಲೆ ಕಣ್ಣು

ವಿಶ್ವಕಪ್​ನಲ್ಲಿ ಟೀಂ ಇಂಡಿಯಾ ಇದುವರೆಗೆ ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ತಂಡಗಳನ್ನು ಸೋಲಿಸಿದೆ. ಇದೀಗ ರೋಹಿತ್ ಪಡೆ ಪುಣೆಯಲ್ಲಿ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಪಂದ್ಯವನ್ನು ಗೆಲ್ಲುವ ಮೂಲಕ ಸ್ಪರ್ಧೆಯಲ್ಲಿ ಸತತ ನಾಲ್ಕನೇ ಗೆಲುವಿನ ಮೇಲೆ ಕಣ್ಣಿಟ್ಟಿದೆ.

ಟೀಂ ಇಂಡಿಯಾ ಗೆಲುವನ್ನು ತ್ರಿವರ್ಣ ಹಿಡಿದು, ಪಟಾಕಿ ಸಿಡಿಸಿ ಸಂಭ್ರಮಿಸಿದ ಜಮ್ಮು- ಕಾಶ್ಮೀರದ ಜನತೆ; ವಿಡಿಯೋ ನೋಡಿ

ಗೆಲುವಿನ ಲಯದಲ್ಲಿ ಭಾರತ

ಬ್ಯಾಟಿಂಗ್ ವಿಭಾಗದಲ್ಲಿ ನಾಯಕ ರೋಹಿತ್ ಶರ್ಮಾ ಅಮೋಘ ಟಚ್‌ನಲ್ಲಿದ್ದಾರೆ. ಶ್ರೇಯಸ್ ಅಯ್ಯರ್, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಕೂಡ ಉತ್ತಮ ಫಾರ್ಮ್​ನಲ್ಲಿದ್ದಾರೆ. ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಕೂಡ ಪಾಕಿಸ್ತಾನ ವಿರುದ್ಧದ ಪಂದ್ಯದೊಂದಿಗೆ ತಂಡಕ್ಕೆ ಎಂಟ್ರಿಕೊಟ್ಟಿದ್ದು, ಬಾಂಗ್ಲಾದೇಶದ ವಿರುದ್ಧವೂ ಗಿಲ್ ತಂಡದಲ್ಲಿ ಆಡುವ ನಿರೀಕ್ಷೆಯಿದೆ.

ಕಿವೀಸ್ ವಿರುದ್ಧ ಸೋಲು

ಮತ್ತೊಂದೆಡೆ, ಬಾಂಗ್ಲಾದೇಶ ತಂಡಕ್ಕೆ ಟೂರ್ನಿಯಲ್ಲಿ ಉತ್ತಮ ಆರಂಭ ಸಿಕ್ಕಿಲ್ಲ. ಕಳೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಿದ ಶಕೀಬ್ ಪಡೆ ಹೀನಾಯ ಸೋಲು ಕಂಡಿತ್ತು. ಹೀಗಾಗಿ ಬಲಿಷ್ಠ ಭಾರತವನ್ನು ಮಣಿಸುವ ಮೂಲಕ ಟೂರ್ನಿಯಲ್ಲಿ ಮತ್ತೆ ಗೆಲುವಿನ ಲಯಕ್ಕೆ ಮರಳುವ ಗುರಿಯೊಂದಿಗೆ ಬಾಂಗ್ಲಾದೇಶ ಕಣಕ್ಕಿಳಿಯಲ್ಲಿದೆ. ಮೇಲೆ ಹೇಳಿದಂತೆ, ಅಕ್ಟೋಬರ್ 19 ರಂದು (ಗುರುವಾರ) ಪುಣೆಯ MCA ಸ್ಟೇಡಿಯಂನಲ್ಲಿ ಉಭಯ ತಂಡಗಳು ಮುಖಾಮುಖಿಯಾಗಲಿವೆ.

ಉಭಯ ತಂಡಗಳು

ಭಾರತ ವಿಶ್ವಕಪ್ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ .

ಬಾಂಗ್ಲಾದೇಶ ತಂಡ: ಶಾಕಿಬ್ ಅಲ್ ಹಸನ್ (ನಾಯಕ), ಲಿಟ್ಟನ್ ದಾಸ್, ತಂಝಿದ್ ಹಸನ್ ತಮೀಮ್, ನಜ್ಮುಲ್ ಹೊಸೈನ್ ಶಾಂಟೊ, ತೌಹಿದ್ ಹೃದಯೋಯ್, ಮುಶ್ಫಿಕರ್ ರಹೀಮ್, ಮಹ್ಮುದುಲ್ಲಾ ರಿಯಾದ್, ಮೆಹಿದಿ ಹಸನ್ ಮಿರಾಜ್, ನಸುಮ್ ಅಹ್ಮದ್, ಶಾಕ್ ಮಹೆದಿ ಹಸನ್, ತಸ್ಕಿನ್ ಅಹ್ಮದ್, ತಸ್ಕಿನ್ ಅಹ್ಮದ್ , ಶೋರಿಫುಲ್ ಇಸ್ಲಾಂ, ತಂಝೀಮ್ ಹಸನ್ ಸಾಕಿಬ್.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:34 am, Mon, 16 October 23

ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ