AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್ ಫೈನಲ್: ಪಂದ್ಯ ವೀಕ್ಷಿಸಲು ಬರಲಿದ್ದಾರೆ ಮೋದಿ, ಆಸ್ಟ್ರೇಲಿಯಾ ಉಪ ಪ್ರಧಾನಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಕ್ಕೆ ಭಾರತದ ಪ್ರಧಾನಿ ಮತ್ತು ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ಉಪಸ್ಥಿತರಿರುತ್ತಾರೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಕಚೇರಿಯಿಂದ ಅಧಿಕೃತ ಪ್ರಕಟಣೆ ತಿಳಿಸಿದೆ.

ವಿಶ್ವಕಪ್ ಫೈನಲ್: ಪಂದ್ಯ ವೀಕ್ಷಿಸಲು ಬರಲಿದ್ದಾರೆ ಮೋದಿ, ಆಸ್ಟ್ರೇಲಿಯಾ ಉಪ ಪ್ರಧಾನಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Nov 18, 2023 | 3:49 PM

Share

ದೆಹಲಿ ನವೆಂಬರ್ 18: ಟೀಂ ಇಂಡಿಯಾ ತಂಡವು ಭಾನುವಾರ (ನವೆಂಬರ್ 19) ಐಸಿಸಿ ಕ್ರಿಕೆಟ್ ವಿಶ್ವಕಪ್ 2023ರ (ICC Cricket World Cup 2023) ಫೈನಲ್‌ನಲ್ಲಿ ಆಸ್ಟ್ರೇಲಿಯನ್ನರನ್ನು ಎದುರಿಸುತ್ತಿರುವಾಗ, ಅದರ ಪ್ರಯತ್ನಗಳನ್ನು ಹುರಿದುಂಬಿಸಲು ಪ್ರಧಾನಿ ನರೇಂದ್ರ ಮೋದಿಯವರು ಬರಲಿದ್ದಾರೆ. ಅಹಮದಾಬಾದ್‌ನ ನರೇಂದ್ರ ಮೋದಿ (Narendra Modi Stadium) ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯಕ್ಕೆ ಭಾರತದ ಪ್ರಧಾನಿ(PM Modi)ಮತ್ತು ಆಸ್ಟ್ರೇಲಿಯಾದ ಉಪ ಪ್ರಧಾನಿ ರಿಚರ್ಡ್ ಮಾರ್ಲ್ಸ್ ಉಪಸ್ಥಿತರಿರುತ್ತಾರೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಕಚೇರಿಯಿಂದ ಅಧಿಕೃತ ಪ್ರಕಟಣೆ ತಿಳಿಸಿದೆ.

ಗುಜರಾತ್ ಮುಖ್ಯಮಂತ್ರಿ ಶುಕ್ರವಾರ (ನವೆಂಬರ್ 17) ಅಹಮದಾಬಾದ್‌ನಲ್ಲಿ ಉನ್ನತ ಮಟ್ಟದ ಸಭೆ ನಡೆಸಿದ್ದು, ಭದ್ರತೆ, ಸಂಚಾರ ನಿರ್ವಹಣೆ, ಸ್ವಚ್ಛತೆ ಮತ್ತು ಹೆಚ್ಚಿನ ಅಂಶಗಳ ಸಮಗ್ರ ಪರಿಶೀಲನೆ ನಡೆಸಿದರು ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ಮೂರು ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿತು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆತಿಥೇಯ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ 70 ರನ್‌ಗಳ ಜಯ ಸಾಧಿಸಿ ಫೈನಲ್ ಗೇರಿತ್ತು . ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್‌ನಲ್ಲಿ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ.

ಒಂಬತ್ತು ಪಂದ್ಯಗಳಲ್ಲಿ ಒಂಬತ್ತರಲ್ಲಿ ಗೆಲುವು ದಾಖಲಿಸಿ ಭಾರತ ಫೈನಲ್ ಪಂದ್ಯ ತಲಪಿದೆ, . ಹಲವಾರು ಪಂದ್ಯಗಳಲ್ಲಿ ಭಾರತದ ತಂಡವು ನಿರ್ಣಾಯಕ, ಪ್ರಶ್ನಾತೀತ ರೀತಿಯಲ್ಲಿ ಎದುರಾಳಿಗಳ ಮೇಲೆ ಪ್ರಾಬಲ್ಯ ಸಾಧಿಸಿತು. 18 ಅಂಕಗಳೊಂದಿಗೆ ಭಾರತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಇದನ್ನೂ  ಓದಿ:IND vs AUS Final: ಮೋದಿ ಮೈದಾನದಲ್ಲಿ ಭಾರತ- ಆಸೀಸ್ ದಾಖಲೆ ಹೇಗಿದೆ? ಯಾರದ್ದು ಮೇಲುಗೈ? ಇಲ್ಲಿದೆ ವಿವರ 

ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತೀಯ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ 50ನೇ ಏಕದಿನ ಅಂತಾರಾಷ್ಟ್ರೀಯ (ODI) ಶತಕವನ್ನು ಸಿಡಿಸಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದರು. ಕೊಹ್ಲಿ, ರೋಹಿತ್ ಶರ್ಮಾ ಮತ್ತು ಶುಭ್‌ಮನ್ ಗಿಲ್ ಅವರ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದ ಭಾರತ 50 ಓವರ್‌ಗಳ ಅಂತ್ಯಕ್ಕೆ 397 ರನ್‌ಗಳ ಬೃಹತ್ ಮೊತ್ತವನ್ನು ದಾಖಲಿಸಿತು. ಪ್ರತ್ಯುತ್ತರವಾಗಿ, ನ್ಯೂಜಿಲೆಂಡ್ ಕೇವಲ 327 ರನ್ ಗಳಿಸಿತ್ತು. ಡ್ಯಾರಿಲ್ ಮಿಚೆಲ್ ಶತಕ ಬಾರಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:48 pm, Sat, 18 November 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ