AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಫೈನಲ್ ಲೆಕ್ಕಾಚಾರ: ನ್ಯೂಝಿಲೆಂಡ್ ವಿರುದ್ಧದ ಸರಣಿ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ

World Test Championship 2024-25: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್​ಗೆ ಪ್ರವೇಶಿಸಲಿದೆ. ಇದೀಗ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ದ್ವಿತೀಯ ಸ್ಥಾನದಲ್ಲಿದೆ. ಇದಾಗ್ಯೂ ಈ ತಂಡಗಳ ಜೊತೆ ಶ್ರೀಲಂಕಾ, ಇಂಗ್ಲೆಂಡ್ ಕೂಡ WTC ಫೈನಲ್ ರೇಸ್​ನಲ್ಲಿದೆ.

WTC ಫೈನಲ್ ಲೆಕ್ಕಾಚಾರ: ನ್ಯೂಝಿಲೆಂಡ್ ವಿರುದ್ಧದ ಸರಣಿ ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ
Team India - WTC
ಝಾಹಿರ್ ಯೂಸುಫ್
|

Updated on: Oct 16, 2024 | 10:55 AM

Share

ನ್ಯೂಝಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮೂರು ಮ್ಯಾಚ್​ಗಳಲ್ಲಿ ಭಾರತ ತಂಡ ಗೆಲುವು ದಾಖಲಿಸಿದರೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಲಿದೆ. ಒಂದು ವೇಳೆ ಈ ಸರಣಿಯಲ್ಲಿ ಒಂದು ಮ್ಯಾಚ್​ನಲ್ಲಿ ಸೋತರೂ ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾದ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್ ಫೈನಲ್ ಭವಿಷ್ಯ ನಿರ್ಧಾರವಾಗಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯಲ್ಲಿ ಟೀಮ್ ಇಂಡಿಯಾಗೆ ಇನ್ನೂ 8 ಟೆಸ್ಟ್ ಪಂದ್ಯಗಳಿದ್ದು, ಈ ಎಂಟು ಮ್ಯಾಚ್​ಗಳಲ್ಲಿ 3 ಗೆಲುವು ಅನಿವಾರ್ಯ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶವೆಂದರೆ ಭಾರತ ತಂಡವು ತನ್ನ 8 ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ತವರಿನಲ್ಲಿ ಆಡಿದರೆ, ಉಳಿದ ಐದು ಪಂದ್ಯಗಳನ್ನು ಆಸ್ಟ್ರೇಲಿಯಾದಲ್ಲಿ ಆಡಬೇಕಿದೆ.

ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್​-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ನ್ಯೂಝಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್ ಸಾಧಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರುವ ಇರಾದೆಯಲ್ಲಿದೆ ಟೀಮ್ ಇಂಡಿಯಾ. ಇದರಿಂದ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಯಾವುದೇ ಒತ್ತಡವಿಲ್ಲದೆ ಕಣಕ್ಕಿಳಿಯಬಹುದು.

ಆದರೀಗ ಬೆಂಗಳೂರಿನಲ್ಲಿ ನಡೆಯಬೇಕಿರುವ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದು, ಈ ಪಂದ್ಯ ರದ್ದಾದರೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕವೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ಗೆ ಅರ್ಹತೆ ಪಡೆಯಬೇಕಾಗಿ ಬರಬಹುದು.

ಫೈನಲ್​ ರೇಸ್​ಗೆ ಸರಣಿ ಸರಪಳಿ:

ವಿಶ್ವ ಟೆಸ್ಟ್ ಚಾಂಪಿಯನ್​ ಫೈನಲ್​ ರೇಸ್​ನಲ್ಲಿ ಭಾರತ ತಂಡದೊಂದಿಗೆ ಆಸ್ಟ್ರೇಲಿಯಾ, ಶ್ರೀಲಂಕಾ ತಂಡಗಳಿವೆ. ಆಸೀಸ್ ಪಡೆಯು ಮುಂದಿನ 7 ಟೆಸ್ಟ್ ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಿದರೆ ಫೈನಲ್​ಗೇರುವುದು ಖಚಿತ. ಇಲ್ಲಿ ಆಸ್ಟ್ರೇಲಿಯಾ ತಂಡದ ಮುಂದಿನ ಎದುರಾಳಿ ಭಾರತ ಮತ್ತು ಶ್ರೀಲಂಕಾ.

ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನಾಡಲಿದ್ದು, ಟೀಮ್ ಇಂಡಿಯಾ 5 ಪಂದ್ಯಗಳನ್ನಾಡಬೇಕಿದೆ. ಇಲ್ಲಿ ಲಂಕಾ ವಿರುದ್ಧ 2 ಮ್ಯಾಚ್ ಗೆದ್ದರೂ ಆಸ್ಟ್ರೇಲಿಯಾ ನೇರವಾಗಿ ಫೈನಲ್​ಗೆ ಪ್ರವೇಶಿಸಲು ಭಾರತ ವಿರುದ್ಧ 2 ಪಂದ್ಯಗಳನ್ನು ಗೆಲ್ಲಲೇಬೇಕು.

ಹಾಗೆಯೇ ಶ್ರೀಲಂಕಾ ತಂಡವು ಮುಂದಿನ ನಾಲ್ಕು ಪಂದ್ಯಗಳಲ್ಲಿ ಮೂರು ಜಯ ಸಾಧಿಸಿದರೆ ಫೈನಲ್​ಗೆ ಪ್ರವೇಶಿಸಬಹುದು. ಅಂದರೆ ಆಸ್ಟ್ರೇಲಿಯಾ ವಿರುದ್ಧ 2 ಮ್ಯಾಚ್​ನಲ್ಲಿ ಗೆದ್ದ ಬಳಿಕ, ಸೌತ್ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಸರಣಿಯನ್ನು ಗೆಲ್ಲಲೇಬೇಕು.

ಅಷ್ಟೇ ಅಲ್ಲದೆ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ಸರಣಿ ಗೆಲ್ಲುವುದನ್ನು ಎದುರು ನೋಡಬೇಕು. ಈ ಮೂಲಕ ಶ್ರೀಲಂಕಾ ತಂಡಕ್ಕೂ ಫೈನಲ್​ಗೆ ಪ್ರವೇಶಿಸುವ ಅವಕಾಶವಿದೆ.

ಈ ಮೂರು ತಂಡಗಳ ಜೊತೆ ಇಂಗ್ಲೆಂಡ್ ಕೂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್​ ರೇಸ್​ನಲ್ಲಿ ಕಾಣಿಸಿಕೊಂಡಿದೆ. ಪಾಕಿಸ್ತಾನ್ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಹಾಗೂ ನ್ಯೂಝಿಲೆಂಡ್ ವಿರುದ್ಧದ 3 ಪಂದ್ಯಗಳನ್ನು ಗೆದ್ದುಕೊಂಡರೆ ಇಂಗ್ಲೆಂಡ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಬಹುದು.

ಇದನ್ನೂ ಓದಿ: ದೇವರ ಉಡುಗೊರೆ… RCB ಅಭಿಮಾನಿಗಳನ್ನು ಹಾಡಿ ಹೊಗಳಿದ ಅಶ್ವಿನ್

ಆದರೆ ಇಲ್ಲಿ ಇಂಗ್ಲೆಂಡ್ ಪಾಲಿಗೆ ಭಾರತ-ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿ ನಿರ್ಣಾಯಕವಾಗಲಿದೆ. ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾವನ್ನು 4-0 ಅಥವಾ 5-0 ಅಂತರದಿಂದ ಸೋಲಿಸಿದರೆ ಇಂಗ್ಲೆಂಡ್ ತಂಡಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಪ್ರವೇಶಿಸಲು ಅವಕಾಶ ದೊರೆಯಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ಸ್ ಟೇಬಲ್:

ಸ್ಥಾನ ತಂಡಗಳು ಪಂದ್ಯಗಳು ಗೆಲುವು ಸೋಲು ಡ್ರಾ ಎನ್ಆರ್ ಅಂಕಗಳು PCT
1 ಭಾರತ 11 8 2 1 0 98 74.240
2 ಆಸ್ಟ್ರೇಲಿಯಾ 12 8 3 1 0 90 62.500
3 ಶ್ರೀಲಂಕಾ 9 5 4 0 0 60 55.560
4 ಇಂಗ್ಲೆಂಡ್ 17 9 7 1 0 93 45.590
5 ಸೌತ್ ಆಫ್ರಿಕಾ 6 2 3 1 0 28 38.890
6 ನ್ಯೂಝಿಲೆಂಡ್ 8 3 5 0 0 36 37.500
7 ಬಾಂಗ್ಲಾದೇಶ್ 8 3 5 0 0 33 34.380
8 ವೆಸ್ಟ್ ಇಂಡೀಸ್ 9 1 6 2 0 20 18.520
9 ಪಾಕಿಸ್ತಾನ್ 8 2 6 0 0 16 16.670
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ