AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಪಾಯಿಂಟ್ಸ್ ಟೇಬಲ್ ಅಪ್‌ಡೇಟ್: ಭಾರತಕ್ಕೆ ಅದೇ ಸ್ಥಾನ, ಬಾಂಗ್ಲಾಗೆ ಹಿನ್ನಡೆ

ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಈ ಫಲಿತಾಂಶದಿಂದಾಗಿ ಬಾಂಗ್ಲಾದೇಶದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಗಳ ಪರ್ಸೆಂಟೇಜ್ ಕುಸಿದಿದೆ. ಪ್ರಸ್ತುತ WTC ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್ ಅಗ್ರಸ್ಥಾನದಲ್ಲಿದ್ದು, ಭಾರತ ನಾಲ್ಕನೇ ಸ್ಥಾನದಲ್ಲಿದೆ. ಪಂದ್ಯದ ಡ್ರಾ ಬಾಂಗ್ಲಾದೇಶದ WTC ಸ್ಥಾನಕ್ಕೆ ಅಲ್ಪ ಹಿನ್ನಡೆ ಉಂಟುಮಾಡಿದೆ.

WTC ಪಾಯಿಂಟ್ಸ್ ಟೇಬಲ್ ಅಪ್‌ಡೇಟ್: ಭಾರತಕ್ಕೆ ಅದೇ ಸ್ಥಾನ, ಬಾಂಗ್ಲಾಗೆ ಹಿನ್ನಡೆ
ಬಾಂಗ್ಲಾದೇಶ ತಂಡ
ಪೃಥ್ವಿಶಂಕರ
|

Updated on: Nov 09, 2026 | 6:19 PM

Share

ಬಾಂಗ್ಲಾದೇಶ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಸೋಮವಾರ (ನವೆಂಬರ್ 9) ಕೊನೆಯ ದಿನ ಡ್ರಾನಲ್ಲಿ ಅಂತ್ಯಗೊಂಡಿದೆ. ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಮೊದಲ ಇನಿಂಗ್ಸ್‌ನಲ್ಲಿ 356 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ಮೊದಲ ಇನಿಂಗ್ಸ್‌ನಲ್ಲಿ 386 ರನ್ ಕಲೆಹಾಕುವ ಮೂಲಕ 30 ರನ್‌ಗಳ ಮುನ್ನಡೆ ಸಾಧಿಸಿತ್ತು.

ಇನ್ನು ಎರಡನೇ ಇನಿಂಗ್ಸ್‌ನಲ್ಲಿ ವೆಸ್ಟ್ ಇಂಡೀಸ್ ತಂಡ 6 ವಿಕೆಟ್ ನಷ್ಟಕ್ಕೆ 398 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಹೀಗಾಗಿ ಬಾಂಗ್ಲಾದೇಶಕ್ಕೆ ಗೆಲುವಿಗಾಗಿ 369 ರನ್‌ಗಳ ಗುರಿ ನೀಡಲಾಗಿತ್ತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ಕೊನೆಯ ದಿನದಾಟ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 184 ರನ್ ಗಳಿಸಿತ್ತು. ಅಂತಿಮವಾಗಿ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು.

ನಾಲ್ಕನೇ ಸ್ಥಾನದಲ್ಲಿ ಭಾರತ

ಸಿಲ್ಹೆಟ್‌ನಲ್ಲಿ ನಡೆದ ಈ ಪಂದ್ಯದ ಡ್ರಾ ಫಲಿತಾಂಶದಿಂದಾಗಿ ಬಾಂಗ್ಲಾದೇಶ ತಂಡಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2026-27ರ ಅಂಕಪಟ್ಟಿಯಲ್ಲಿ ಹಿನ್ನಡೆಯಾಗಿದೆ. ತಂಡಗಳ ಸ್ಥಾನಗಳಲ್ಲಿ ಯಾವುದೇ ಬದಲಾವಣೆಯಾಗದಿದ್ದರೂ, ಬಾಂಗ್ಲಾದೇಶದ ಪಾಯಿಂಟ್ಸ್ ಪರ್ಸೆಂಟೇಜ್ ಶೇ.47.62ರಿಂದ ಶೇ.45.83ಕ್ಕೆ ಕುಸಿದಿದೆ. ಇನ್ನು ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಉಳಿಸಿಕೊಂಡಿದೆ.

ಅಗ್ರಸ್ಥಾನದಲ್ಲಿ ನ್ಯೂಜಿಲೆಂಡ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2026-27ರ ಅಂಕಪಟ್ಟಿಯಲ್ಲಿ ನ್ಯೂಜಿಲೆಂಡ್ ತಂಡ ಮೊದಲ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಎರಡನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ. ಭಾರತ ನಾಲ್ಕನೇ ಸ್ಥಾನದಲ್ಲಿದೆ. ಇನ್ನು ಬಾಂಗ್ಲಾದೇಶ ಐದನೇ ಸ್ಥಾನದಲ್ಲಿದ್ದು, ಇಂಗ್ಲೆಂಡ್ ಆರನೇ ಸ್ಥಾನದಲ್ಲಿದೆ. ಶ್ರೀಲಂಕಾ ಏಳನೇ ಸ್ಥಾನದಲ್ಲಿದ್ದರೆ, ವೆಸ್ಟ್ ಇಂಡೀಸ್ ಎಂಟನೇ ಹಾಗೂ ಪಾಕಿಸ್ತಾನ ಒಂಬತ್ತನೇ ಸ್ಥಾನದಲ್ಲಿವೆ.

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ರಸ್ತೆ ಗುಂಡಿಗಳ ಕಾಟ: ಖುದ್ದು ಗುಂಡಿ ಮುಚ್ಚಿದ ಸಂಚಾರಿ ಪೊಲೀಸರು
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ನವೆಂಬರ್ 13ರಂದು ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್