AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Points Table: ಪಂದ್ಯವನ್ನಾಡದೆ 6ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ

WTC Points Table Shake-up: ಪಾಕಿಸ್ತಾನದ ವಿರುದ್ಧ ಬಾಂಗ್ಲಾದೇಶ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದಿದೆ. ಈ ಐತಿಹಾಸಿಕ ಗೆಲುವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಾಯಿಂಟ್ ಪಟ್ಟಿಯಲ್ಲಿ ದೊಡ್ಡ ಬದಲಾವಣೆ ತಂದಿದೆ. ಇದರ ಪರಿಣಾಮವಾಗಿ, ಟೀಂ ಇಂಡಿಯಾ ಒಂದು ಸ್ಥಾನ ಕುಸಿತಗೊಂಡು 6ನೇ ಸ್ಥಾನಕ್ಕೆ ತಲುಪಿದೆ, ಇದರಿಂದ WTC ಫೈನಲ್ ತಲುಪುವ ಅವಕಾಶಗಳು ಹೆಚ್ಚು ಕಠಿಣವಾಗಿವೆ. ಬಾಂಗ್ಲಾದೇಶ 58.33 ಗೆಲುವಿನ ಶೇಕಡಾವಾರು ಹೊಂದಿದೆ.

WTC Points Table: ಪಂದ್ಯವನ್ನಾಡದೆ 6ನೇ ಸ್ಥಾನಕ್ಕೆ ಕುಸಿದ ಟೀಂ ಇಂಡಿಯಾ
Team India
ಪೃಥ್ವಿಶಂಕರ
|

Updated on: May 20, 2026 | 7:27 PM

Share

ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯನ್ನು ಬಾಂಗ್ಲಾದೇಶ (BAN vs PAK) 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಅಂತ್ಯದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ (World Test Championship) ಪಾಯಿಂಟ್ ಪಟ್ಟಿಯಲ್ಲೂ ಸಾಕಷ್ಟು ಎರಿಳಿತಗಳಾಗಿವೆ. ಅದರಲ್ಲೂ ಟೆಸ್ಟ್ ಕ್ರಿಕೆಟ್​ನಲ್ಲಿ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾದ ಸ್ಥಾನ ಹದೆಗೆಟ್ಟಿದೆ. ಇದೀಗ ಪಾಕಿಸ್ತಾನದ ವಿರುದ್ಧ ಬಾಂಗ್ಲಾದೇಶ ಟೆಸ್ಟ್ ಸರಣಿ ಗೆದ್ದಿರುವುದು ಟೀಂ ಇಂಡಿಯಾ ಸ್ಥಾನಕ್ಕೆ ಕುತ್ತು ತಂದಿದೆ. ಬಾಂಗ್ಲಾದೇಶದ ಗೆಲುವಿನಿಂದ ಒಂದು ಸ್ಥಾನ ಕುಸಿತ ಕಂಡಿರುವ ಟೀಂ ಇಂಡಿಯಾ (Team India) ಇದೀಗ 6ನೇ ಸ್ಥಾನಕ್ಕೆ ಬಂದು ನಿಂತಿದೆ. ಹೀಗಾಗಿ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೇರುವುದು ಕಷ್ಟಕರವಾಗಿದೆ.

9 ಪಂದ್ಯಗಳಲ್ಲಿ 4 ಗೆಲುವು

ಮಿರ್ಪುರದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ 104 ರನ್‌ಗಳ ಬೃಹತ್ ಜಯ ಸಾಧಿಸಿದ್ದ ಬಾಂಗ್ಲಾದೇಶ, ಎರಡನೇ ಟೆಸ್ಟ್‌ನಲ್ಲಿ ಪಾಕಿಸ್ತಾನವನ್ನು 78 ರನ್‌ಗಳಿಂದ ಸೋಲಿಸಿತು. ಇದೀಗ ಬಾಂಗ್ಲಾದೇಶ ಆಡಿರುವ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಎರಡು ಗೆಲುವು, ಒಂದು ಸೋಲು ಮತ್ತು ಒಂದು ಡ್ರಾದೊಂದಿಗೆ 58.33 ರ ಗೆಲುವಿನ ಶೇಕಡಾವಾರು ಹೊಂದಿದೆ. ಇತ್ತ ಟೀಂ ಇಂಡಿಯಾ ಇದುವರೆಗೆ ಆಡಿರುವ ಒಂಬತ್ತು ಟೆಸ್ಟ್ ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಅಷ್ಟೇ ಸೋಲು ಹಾಗೂ ಒಂದು ಡ್ರಾದೊಂದಿಗೆ 48.15 ರ ಗೆಲುವಿನ ಶೇಕಡಾವಾರು ಹೊಂದಿದೆ.

ಮೊದಲ ಎರಡು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗಳಲ್ಲಿ ಫೈನಲ್ ತಲುಪಿದ್ದ ಭಾರತ ತಂಡ ಈ ವರ್ಷ ಇನ್ನೂ ಟೆಸ್ಟ್ ಪಂದ್ಯವನ್ನು ಆಡಿಲ್ಲ. ಭಾರತ ತಂಡ ಜೂನ್ 6 ರಿಂದ ಅಫ್ಘಾನಿಸ್ತಾನ ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ, ಆದರೆ ಅದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿಲ್ಲ. ಈ ವರ್ಷದ ಕೊನೆಯಲ್ಲಿ ಭಾರತ ತಂಡ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧ ತಲಾ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ನಂತರ 2027 ರಲ್ಲಿ ತವರಿನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

4 ತಂಡಗಳನ್ನು ಹಿಂದಿಕ್ಕಿದ ಬಾಂಗ್ಲಾ

ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಬಾಂಗ್ಲಾದೇಶ ಕ್ಲೀನ್ ಸ್ವೀಪ್ ಮಾಡಿದ್ದು ಪಾಕಿಸ್ತಾನ ಮತ್ತು ಟೀಂ ಇಂಡಿಯಾಗೆ ಹೊಡೆತ ನೀಡಿದ್ದು ಮಾತ್ರವಲ್ಲದೆ, ಇತರ ಎರಡು ತಂಡಗಳಾದ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್‌ಗಳನ್ನು ಹಿಂದಿಕ್ಕಿದೆ. ಸರಳವಾಗಿ ಹೇಳುವುದಾದರೆ, ಬಾಂಗ್ಲಾದೇಶ ಈಗ WTC ಪಾಯಿಂಟ್‌ ಪಟ್ಟಿಯಲ್ಲಿ 4 ದೇಶಗಳಿಗಿಂತ ಮುಂದಿದೆ.

ಲಾರ್ಡ್ಸ್​ನಲ್ಲಿ ಇಂಗ್ಲೆಂಡ್‌ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ

WTC ಪಾಯಿಂಟ್‌ ಪಟ್ಟಿ

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025-2027 ಪಾಯಿಂಟ್‌ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡವು ಈವರೆಗೆ ಆಡಿರುವ ಎಂಟು ಟೆಸ್ಟ್ ಪಂದ್ಯಗಳಲ್ಲಿ ಏಳರಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋತಿದೆ. ಡಬ್ಲ್ಯೂಟಿಸಿ ಅಂಕಗಳ ಪಟ್ಟಿಯಲ್ಲಿ 87.50 ಗೆಲುವಿನ ಶೇಕಡಾವಾರುವಿನೊಂದಿಗೆ ಅಗ್ರಸ್ಥಾನದಲ್ಲಿದೆ. ನ್ಯೂಜಿಲೆಂಡ್ ತಂಡವು ಮೂರು ಟೆಸ್ಟ್‌ಗಳಲ್ಲಿ ಎರಡು ಗೆಲುವು ಮತ್ತು ಒಂದು ಡ್ರಾ ದೊಂದಿಗೆ 77.78 ಗೆಲುವಿನ ಶೇಕಡಾವಾರುವಿನೊಂದಿಗೆ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಮೂರನೇ ಸ್ಥಾನದಲ್ಲಿದ್ದರೆ, ಶ್ರೀಲಂಕಾ ನಾಲ್ಕನೇ ಸ್ಥಾನದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!