
ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯನ್ನು ಬಾಂಗ್ಲಾದೇಶ (BAN vs PAK) 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಅಂತ್ಯದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (World Test Championship) ಪಾಯಿಂಟ್ ಪಟ್ಟಿಯಲ್ಲೂ ಸಾಕಷ್ಟು ಎರಿಳಿತಗಳಾಗಿವೆ. ಅದರಲ್ಲೂ ಟೆಸ್ಟ್ ಕ್ರಿಕೆಟ್ನಲ್ಲಿ ಸೋಲುಗಳಿಂದ ಕಂಗೆಟ್ಟಿರುವ ಟೀಂ ಇಂಡಿಯಾದ ಸ್ಥಾನ ಹದೆಗೆಟ್ಟಿದೆ. ಇದೀಗ ಪಾಕಿಸ್ತಾನದ ವಿರುದ್ಧ ಬಾಂಗ್ಲಾದೇಶ ಟೆಸ್ಟ್ ಸರಣಿ ಗೆದ್ದಿರುವುದು ಟೀಂ ಇಂಡಿಯಾ ಸ್ಥಾನಕ್ಕೆ ಕುತ್ತು ತಂದಿದೆ. ಬಾಂಗ್ಲಾದೇಶದ ಗೆಲುವಿನಿಂದ ಒಂದು ಸ್ಥಾನ ಕುಸಿತ ಕಂಡಿರುವ ಟೀಂ ಇಂಡಿಯಾ (Team India) ಇದೀಗ 6ನೇ ಸ್ಥಾನಕ್ಕೆ ಬಂದು ನಿಂತಿದೆ. ಹೀಗಾಗಿ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ಗೇರುವುದು ಕಷ್ಟಕರವಾಗಿದೆ.
ಮಿರ್ಪುರದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ 104 ರನ್‌ಗಳ ಬೃಹತ್ ಜಯ ಸಾಧಿಸಿದ್ದ ಬಾಂಗ್ಲಾದೇಶ, ಎರಡನೇ ಟೆಸ್ಟ್‌ನಲ್ಲಿ ಪಾಕಿಸ್ತಾನವನ್ನು 78 ರನ್‌ಗಳಿಂದ ಸೋಲಿಸಿತು. ಇದೀಗ ಬಾಂಗ್ಲಾದೇಶ ಆಡಿರುವ ನಾಲ್ಕು ಟೆಸ್ಟ್ ಪಂದ್ಯಗಳಲ್ಲಿ ಎರಡು ಗೆಲುವು, ಒಂದು ಸೋಲು ಮತ್ತು ಒಂದು ಡ್ರಾದೊಂದಿಗೆ 58.33 ರ ಗೆಲುವಿನ ಶೇಕಡಾವಾರು ಹೊಂದಿದೆ. ಇತ್ತ ಟೀಂ ಇಂಡಿಯಾ ಇದುವರೆಗೆ ಆಡಿರುವ ಒಂಬತ್ತು ಟೆಸ್ಟ್ ಪಂದ್ಯಗಳಲ್ಲಿ ನಾಲ್ಕು ಗೆಲುವು ಮತ್ತು ಅಷ್ಟೇ ಸೋಲು ಹಾಗೂ ಒಂದು ಡ್ರಾದೊಂದಿಗೆ 48.15 ರ ಗೆಲುವಿನ ಶೇಕಡಾವಾರು ಹೊಂದಿದೆ.
ಮೊದಲ ಎರಡು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗಳಲ್ಲಿ ಫೈನಲ್ ತಲುಪಿದ್ದ ಭಾರತ ತಂಡ ಈ ವರ್ಷ ಇನ್ನೂ ಟೆಸ್ಟ್ ಪಂದ್ಯವನ್ನು ಆಡಿಲ್ಲ. ಭಾರತ ತಂಡ ಜೂನ್ 6 ರಿಂದ ಅಫ್ಘಾನಿಸ್ತಾನ ವಿರುದ್ಧ ಏಕೈಕ ಟೆಸ್ಟ್ ಪಂದ್ಯವನ್ನು ಆಡಲಿದೆ, ಆದರೆ ಅದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿಲ್ಲ. ಈ ವರ್ಷದ ಕೊನೆಯಲ್ಲಿ ಭಾರತ ತಂಡ ಶ್ರೀಲಂಕಾ ಮತ್ತು ನ್ಯೂಜಿಲೆಂಡ್ ವಿರುದ್ಧ ತಲಾ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ನಂತರ 2027 ರಲ್ಲಿ ತವರಿನಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ.
ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಬಾಂಗ್ಲಾದೇಶ ಕ್ಲೀನ್ ಸ್ವೀಪ್ ಮಾಡಿದ್ದು ಪಾಕಿಸ್ತಾನ ಮತ್ತು ಟೀಂ ಇಂಡಿಯಾಗೆ ಹೊಡೆತ ನೀಡಿದ್ದು ಮಾತ್ರವಲ್ಲದೆ, ಇತರ ಎರಡು ತಂಡಗಳಾದ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್‌ಗಳನ್ನು ಹಿಂದಿಕ್ಕಿದೆ. ಸರಳವಾಗಿ ಹೇಳುವುದಾದರೆ, ಬಾಂಗ್ಲಾದೇಶ ಈಗ WTC ಪಾಯಿಂಟ್ ಪಟ್ಟಿಯಲ್ಲಿ 4 ದೇಶಗಳಿಗಿಂತ ಮುಂದಿದೆ.
ಲಾರ್ಡ್ಸ್ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ 2025-2027 ಪಾಯಿಂಟ್ ಪಟ್ಟಿಯಲ್ಲಿ ಆಸ್ಟ್ರೇಲಿಯಾ ತಂಡವು ಈವರೆಗೆ ಆಡಿರುವ ಎಂಟು ಟೆಸ್ಟ್ ಪಂದ್ಯಗಳಲ್ಲಿ ಏಳರಲ್ಲಿ ಗೆದ್ದು ಒಂದು ಪಂದ್ಯದಲ್ಲಿ ಸೋತಿದೆ. ಡಬ್ಲ್ಯೂಟಿಸಿ ಅಂಕಗಳ ಪಟ್ಟಿಯಲ್ಲಿ 87.50 ಗೆಲುವಿನ ಶೇಕಡಾವಾರುವಿನೊಂದಿಗೆ ಅಗ್ರಸ್ಥಾನದಲ್ಲಿದೆ. ನ್ಯೂಜಿಲೆಂಡ್ ತಂಡವು ಮೂರು ಟೆಸ್ಟ್‌ಗಳಲ್ಲಿ ಎರಡು ಗೆಲುವು ಮತ್ತು ಒಂದು ಡ್ರಾ ದೊಂದಿಗೆ 77.78 ಗೆಲುವಿನ ಶೇಕಡಾವಾರುವಿನೊಂದಿಗೆ ಎರಡನೇ ಸ್ಥಾನದಲ್ಲಿದೆ. ದಕ್ಷಿಣ ಆಫ್ರಿಕಾ ಮೂರನೇ ಸ್ಥಾನದಲ್ಲಿದ್ದರೆ, ಶ್ರೀಲಂಕಾ ನಾಲ್ಕನೇ ಸ್ಥಾನದಲ್ಲಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ