WTC Final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಡೇಟ್ ಫಿಕ್ಸ್​: ಯಾರ ನಡುವೆ ಮುಖಾಮುಖಿ?

World Test Championship 2023: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪ್ರವೇಶಿಸಲು ಇಲ್ಲಿ ಟೀಮ್ ಇಂಡಿಯಾಗೆ ಇರುವ ಪ್ಲಸ್ ಪಾಯಿಂಟ್ ಅಂದರೆ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲೇ ಸರಣಿ ಆಡಲಿದೆ.

WTC Final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಡೇಟ್ ಫಿಕ್ಸ್​: ಯಾರ ನಡುವೆ ಮುಖಾಮುಖಿ?
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 21, 2023 | 7:23 PM

World Test Championship 2023 Final: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2023 ರ ಫೈನಲ್ ಪಂದ್ಯಕ್ಕೆ ಡೇಟ್ ಫಿಕ್ಸ್ ಆಗಿದೆ. ಜೂನ್​ 8 ರಿಂದ WTC ಫೈನಲ್ ಪಂದ್ಯವು ಶುರುವಾಗಲಿದ್ದು, ಜೂನ್ 12 ರವರೆಗೆ ನಡೆಯಲಿದೆ. ಇನ್ನು ಪ್ರತಿಕೂಲ ಹವಾಮಾನದಿಂದ ದಿನದಾಟವನ್ನು ಮುಂದೂಡಿದರೆ ಜೂನ್ 15 ರೊಳಗೆ ಪಂದ್ಯವನ್ನು ಮುಗಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ. ಅಂದರೆ ಇಂಗ್ಲೆಂಡ್​ನ ಓವಲ್ ಮೈದಾನದಲ್ಲಿ ಜೂನ್ 8 ರಿಂದ 12ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ನಡೆಯುವುದು ಬಹುತೇಕ ಖಚಿತವಾಗಿದೆ. ಇದಾಗ್ಯೂ ಫೈನಲ್ ಆಡಲಿರುವ ತಂಡಗಳು ಯಾವುವು ಎಂಬುದು ಇನ್ನೂ ಕೂಡ ನಿರ್ಧಾರವಾಗಿಲ್ಲ.

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ ಟೇಬಲ್​​ನಲ್ಲಿ ಅಗ್ರಸ್ಥಾನದಲ್ಲಿರುವ ಆಸ್ಟ್ರೇಲಿಯಾ ತಂಡವು ಫೈನಲ್ ಆಡುವುದನ್ನು ಖಾತ್ರಿಪಡಿಸಿಕೊಂಡಿದೆ. ಆದರೆ 2ನೇ ತಂಡವಾಗಿ ಫೈನಲ್ ಪ್ರವೇಶಿಸಲು ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವೆ ನೇರ ಪೈಪೋಟಿ ಇದೆ.

ಭಾರತ ಫೈನಲ್​ ಪ್ರವೇಶಿಸುವುದು ಹೇಗೆ?

ಇದನ್ನೂ ಓದಿ
Image
IPLನ ಒಂದು ಪಂದ್ಯಕ್ಕೆ 107 ಕೋಟಿ ರೂ: PSL ನ 1 ಪಂದ್ಯಕ್ಕೆ ಎಷ್ಟು ಗೊತ್ತಾ?
Image
ಟೀಮ್ ಇಂಡಿಯಾ ಪರ ಅತೀ ಹೆಚ್ಚು ಬಾರಿ 150 ಕ್ಕೂ ಅಧಿಕ ರನ್ ಬಾರಿಸಿದ್ದು ಯಾರು ಗೊತ್ತಾ?
Image
Team India: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಹೊಸ ವಿಶ್ವ ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ
Image
Virat Kohli: ಕಿಂಗ್ ಕೊಹ್ಲಿಯ ಅಬ್ಬರಕ್ಕೆ ಸಚಿನ್ ದಾಖಲೆ ಉಡೀಸ್

ಭಾರತ ತಂಡವು ಮುಂಬರುವ ಆಸ್ಟ್ರೇಲಿಯಾ ವಿರುದ್ಧದ 4 ಪಂದ್ಯಗಳ ಟೆಸ್ಟ್ ಸರಣಿಯನ್ನು 3-0 ಅಥವಾ 3-1 ಅಥವಾ 2-0 ಅಂತರದಿಂದ ಗೆದ್ದುಕೊಂಡರೆ ನೇರವಾಗಿ ಫೈನಲ್​ ಪ್ರವೇಶಿಸಬಹುದು. ಏಕೆಂದರೆ ಟೀಮ್ ಇಂಡಿಯಾ ಕಷ್ಟದಿಂದ 2-0 ಅಂತರದಿಂದ ಗೆದ್ದರೂ ಶೇ.60.65 ಅಂಕ ಪಡೆಯಲಿದೆ. ಅದೇ ವೇಳೆಗೆ ಆಸ್ಟ್ರೇಲಿಯಾ ತಂಡ ಪಾಯಿಂಟ್​ ಶೇ.63.16 ಅಂಕಗಳಿಗೆ ಕುಸಿಯಲಿದೆ. ಇದಾಗ್ಯೂ ಉಭಯ ತಂಡಗಳು ಫೈನಲ್​ನಲ್ಲಿ ಮುಖಾಮುಖಿಯಾಗಬಹುದು.

ಇದನ್ನೂ ಓದಿ: IPL 2023: ಮಾಜಿ RCB ಆಟಗಾರರೇ ಈಗ ಮುಂಬೈ ಇಂಡಿಯನ್ಸ್​ ತಂಡದ ಹಿಂದಿನ ಶಕ್ತಿ..!

ಒಂದು ವೇಳೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸರಣಿ ಸೋತರೆ ಮಾತ್ರ ಶ್ರೀಲಂಕಾಗೆ ಅವಕಾಶ ಇರಲಿದೆ. ಇಲ್ಲಿ ಸೋಲುವ ಲೆಕ್ಕಚಾರ ಕೂಡ ಗಣನೆಗೆ ಬರಲಿದೆ. ಅಂದರೆ ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 3-1 ಅಥವಾ, 2-0, 1-0 ಸರಣಿ ಅಂತರದಿಂದ ಸೋತರೆ ಶ್ರೀಲಂಕಾ ತಂಡಕ್ಕೆ ಫೈನಲ್​ಗೇರುವ ಅವಕಾಶ ಹೆಚ್ಚಾಗಲಿದೆ.

ಅದರಂತೆ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡರೆ ನೇರವಾಗಿ ಫೈನಲ್​ಗೆ ಎಂಟ್ರಿ ಕೊಡಬಹುದು. ಹೀಗಾಗಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 4-0 ಅಥವಾ 3-1 ಅಥವಾ 3-0, ಅಥವಾ 2-0 ಅಂತರದಿಂದ ಗೆಲ್ಲಲೇಬೇಕು. ಒಂದು ವೇಳೆ 2-2 ಅಂತರದಿಂದ ಸರಣಿ ಡ್ರಾ ಮಾಡಿಕೊಂಡರೂ ಶ್ರೀಲಂಕಾ ತಂಡದ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ.

ಇದನ್ನೂ ಓದಿ: ODI Double Century List: ಏಕದಿನ ಕ್ರಿಕೆಟ್​ನಲ್ಲಿ ದ್ವಿಶತಕ ಬಾರಿಸಿದ 10 ಬ್ಯಾಟರ್​ಗಳ ಪಟ್ಟಿ ಇಲ್ಲಿದೆ

ಏಕೆಂದರೆ ಆಸ್ಟ್ರೇಲಿಯಾ ವಿರುದ್ಧ ಭಾರತ 4-0 ಅಂತರದಲ್ಲಿ ಗೆದ್ದರೆ 68.06% ಅಂಕ ಪಡೆಯಲಿದೆ. ಒಂದು ವೇಳೆ 3-1 ರಲ್ಲಿ ಗೆದ್ದರೆ 62.5%, ಹಾಗೆಯೇ 2-0 ಅಂತರದಿಂದ ಗೆದ್ದರೆ 60.65% ಅಂಕಗಳಿಸಲಿದೆ. ಒಂದು ವೇಳೆ 2-2 ಅಂತರದಿಂದ ಸರಣಿಯನ್ನು ಡ್ರಾ ಮಾಡಿಕೊಂಡರೆ 56.94% ಅಂಕ ಮಾತ್ರ ಹೊಂದಿರಲಿದೆ. ಅತ್ತ ಶ್ರೀಲಂಕಾ ತಂಡವು ನ್ಯೂಜಿಲೆಂಡ್ ವಿರುದ್ದ 2-0 ಅಂತರದಿಂದ ಗೆದ್ದರೆ ಶೇ.60 ರಷ್ಟು ಅಂಕವನ್ನು ಪಡೆಯಬಹುದು. ಇದರಿಂದ ಟೀಮ್ ಇಂಡಿಯಾ ಹೊರಬೀಳಲಿದೆ.

ಟೀಮ್ ಇಂಡಿಯಾಗೆ ಉತ್ತಮ ಅವಕಾಶ:

ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಫೈನಲ್ ಪ್ರವೇಶಿಸಲು ಇಲ್ಲಿ ಟೀಮ್ ಇಂಡಿಯಾಗೆ ಇರುವ ಪ್ಲಸ್ ಪಾಯಿಂಟ್ ಅಂದರೆ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲೇ ಸರಣಿ ಆಡಲಿದೆ. ಆದರೆ ಶ್ರೀಲಂಕಾ ತಂಡವು ನ್ಯೂಜಿಲೆಂಡ್​ನಲ್ಲಿ ಸರಣಿ ಆಡಬೇಕಿದೆ. ಅಂದರೆ ಶ್ರೀಲಂಕಾ ಇದುವರೆಗೆ ನ್ಯೂಜಿಲೆಂಡ್​ನಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ. ಹೀಗಾಗಿ ತವರಿನಲ್ಲಿ ಪಂದ್ಯವಾಡುತ್ತಿರುವ ಭಾರತ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚಿದೆ. ಹೀಗಾಗಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ನಲ್ಲಿ ಮತ್ತೊಮ್ಮೆ ಭಾರತ ತಂಡವನ್ನು ಎದುರು ನೋಡಬಹುದು.

ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ