AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WPL 2023: ವುಮೆನ್ಸ್ ಪ್ರೀಮಿಯರ್ ಲೀಗ್​ ಪ್ಲೇಆಫ್​ಗೆ 3 ತಂಡಗಳು ಎಂಟ್ರಿ

Women's Premier League 2023: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮಾರ್ಚ್ 24 ರಂದು ನಡೆಯಲಿದ್ದು,  ಫೈನಲ್ ಪಂದ್ಯ ಮಾರ್ಚ್ 26 ರಂದು ಜರುಗಲಿದೆ.

WPL 2023: ವುಮೆನ್ಸ್ ಪ್ರೀಮಿಯರ್ ಲೀಗ್​ ಪ್ಲೇಆಫ್​ಗೆ 3 ತಂಡಗಳು ಎಂಟ್ರಿ
WPL 2023
TV9 Web
| Edited By: |

Updated on: Mar 20, 2023 | 11:10 PM

Share

WPL 2023: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಎಲ್ಲಾ  ತಂಡಗಳು 7 ಪಂದ್ಯಗಳನ್ನು ಆಡಿದ್ದು, ಇನ್ನು ಪ್ರತಿ ತಂಡಗಳಿಗೆ ಕೇವಲ 1 ಲೀಗ್ ಪಂದ್ಯ ಮಾತ್ರ ಉಳಿದಿವೆ. ಇತ್ತ ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನವೇ ಮೂರು ತಂಡಗಳು ಪ್ಲೇಅಫ್​ನಲ್ಲಿ ತಮ್ಮ ಸ್ಥಾನವನ್ನು ಖಚಿಪಡಿಸಿಕೊಂಡಿದೆ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಮೂರು ತಂಡಗಳು ಮಾತ್ರ ಮುಂದಿನ ಹಂತಕ್ಕೇರಲಿದೆ. ಇಲ್ಲಿ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಪಡೆಯುವ ತಂಡವು ನೇರವಾಗಿ ಫೈನಲ್​ ಪ್ರವೇಶಿಸಲಿದೆ. ಹಾಗೆಯೇ 2ನೇ ಮತ್ತು 3ನೇ ಸ್ಥಾನ ಪಡೆಯುವ ತಂಡಗಳ ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಇದರಲ್ಲಿ ಗೆಲ್ಲುವ ತಂಡವು ಫೈನಲ್​ನಲ್ಲಿ ಮುಖಾಮುಖಿಯಾಗಲಿದೆ.

ಈಗಾಗಲೇ ಮೂರು ತಂಡಗಳು ಪಾಯಿಂಟ್​ ಟೇಬಲ್​ನಲ್ಲಿ ಟಾಪ್-3 ಸ್ಥಾನವನ್ನು ಭದ್ರಪಡಿಸಿಕೊಂಡಿದ್ದು, ಈ ಮೂಲಕ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಂಡಿದೆ. ಅದರಂತೆ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಪ್ಲೇಆಫ್ ಪ್ರವೇಶಿಸಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಫೈನಲ್ ರೇಸ್​ನಿಂದ ಹೊರಬಿದ್ದಿವೆ.

ಮೂರು ತಂಡಗಳ ಪ್ಲೇಆಫ್ ಎಂಟ್ರಿಯ ಹೊರತಾಗಿಯೂ ಯಾರು ಎಲಿಮಿನೇಟರ್ ಪಂದ್ಯವಾಡಲಿದ್ದಾರೆ? ಯಾರು ನೇರವಾಗಿ ಫೈನಲ್ ಪ್ರವೇಶಿಸಲಿದೆ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ. ಏಕೆಂದರೆ ಮೂರು ತಂಡಗಳೂ 7 ಲೀಗ್ ಪಂದ್ಯಗಳನ್ನು ಆಡಿದ್ದು, ಇನ್ನು ಒಂದು ಪಂದ್ಯವಾಡಬೇಕಿದೆ. ಅದರಂತೆ ಲೀಗ್ ಹಂತದ ಎಲ್ಲಾ ಪಂದ್ಯಗಳ ಮುಕ್ತಾಯದ ಬಳಿಕ ಯಾವ ತಂಡ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನ ಪಡೆಯುತ್ತದೆಯೋ, ಆ ತಂಡ ನೇರವಾಗಿ ಫೈನಲ್​ಗೆ ಪ್ರವೇಶಿಸಲಿದೆ.

ಹಾಗೆಯೇ ಪಾಯಿಂಟ್ ಟೇಬಲ್​ನಲ್ಲಿ 2ನೇ ಮತ್ತು 3ನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದ್ದು, ಇದರಲ್ಲಿ ಸೋಲು ತಂಡ ಟೂರ್ನಿಯಿಂದ ಹೊರಬೀಳಲಿದೆ. ಹಾಗೆಯೇ ಗೆದ್ದ ತಂಡವು ಫೈನಲ್​ಗೆ ಎಂಟ್ರಿ ಕೊಡಲಿದೆ.

ಪ್ರಸ್ತುತ ಪಾಯಿಂಟ್ ಟೇಬಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಗ್ರಸ್ಥಾನದಲ್ಲಿದ್ದು, ಮುಂಬೈ ಇಂಡಿಯನ್ಸ್ ತಂಡವು ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ಯುಪಿ ವಾರಿಯರ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಯುಪಿ ವಾರಿಯರ್ಸ್ ವಿರುದ್ಧ ಆಡಲಿದ್ದು, ಈ ಪಂದ್ಯದ ಫಲಿತಾಂಶ ಅಥವಾ ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯದ ಫಲಿತಾಂಶದ ಬಳಿಕ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ನೇರವಾಗಿ ಫೈನಲ್​ ಪ್ರವೇಶಿಸುವ ತಂಡ ಯಾವುದು ಎಂಬುದು ನಿರ್ಧಾರವಾಗಲಿದೆ.

ಪ್ರಸ್ತುತ WPL ಪಾಯಿಂಟ್ ಟೇಬಲ್ (ದಿನಾಂಕ- 20/3/2023)

ಇನ್ನು ವುಮೆನ್ಸ್ ಪ್ರೀಮಿಯರ್ ಲೀಗ್​ನ ಮಾರ್ಚ್ 24 ರಂದು ನಡೆಯಲಿದ್ದು,  ಫೈನಲ್ ಪಂದ್ಯ ಮಾರ್ಚ್ 26 ರಂದು ಜರುಗಲಿದೆ.

Follow Us
ಮಾತೆರೆಗ್​ಲ ಸೊಲ್ಮೆಲು: ಮಂಗಳೂರಿನಲ್ಲಿ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ
ಮಾತೆರೆಗ್​ಲ ಸೊಲ್ಮೆಲು: ಮಂಗಳೂರಿನಲ್ಲಿ ಸಂಪುಟ ಸಭೆ, ಡಿಕೆಶಿ ವಿಡಿಯೋ ಸಂದೇಶ
ಇಂದು ಗಜಕೇಸರಿ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ನಕಲಿ ಮೆಡಿಸಿನ್‌ನಿಂದಲೇ ಕೋಟಿ ಕೋಟಿ ಸಂಪಾದನೆ
ನಕಲಿ ಮೆಡಿಸಿನ್‌ನಿಂದಲೇ ಕೋಟಿ ಕೋಟಿ ಸಂಪಾದನೆ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಪಿಯೂಶ್​ ಗೋಯಲ್​ ಮನೆಯಲ್ಲಿ ನಡೆದ ಗಣೇಶ ಪೂಜೆಯಲ್ಲಿ ಪ್ರಧಾನಿ ಮೋದಿ ಭಾಗಿ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಡಿಜೆಗೆ ನಿರಾಕರಣೆ: ರಸ್ತೆಯಲ್ಲೇ ಗಣೇಶ ಮೂರ್ತಿ ಇಟ್ಟು ಪ್ರತಿಭಟನೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಲಂಚ ಸ್ವೀಕರಿಸುತ್ತಿದ್ದಾಗ ಗುಬ್ಬಿ ಆರ್‌ಎಫ್‌ಒ ಲೋಕಾಯುಕ್ತ ಬಲೆಗೆ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಕರ್ತವ್ಯ ಲೋಪ ಕೇಸ್​: ಶಾಸಕ ಉಮೇಶ್ ಮೇಟಿ ಸೊಸೆ ಡಾ ಅಂಕಿತಾ ಯರಗಲ್​​ ವಜಾ
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ಗಣಪತಿ ಮೆರವಣಿಗೆಗೆ ಇರುವ ಕಂಡೀಷನ್​​, ಈದ್​ ಮಿಲಾದ್​ಗೆ ಯಾಕಿಲ್ಲ?: ಅಶೋಕ್​
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ವಿಜಯಪುರದಲ್ಲಿ ಅಗ್ನಿವೀರ್​ ನೇಮಕಾತಿ: 11 ಜಿಲ್ಲೆಗಳಿಂದ ಅಭ್ಯರ್ಥಿಗಳು ಭಾಗಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ
ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ರೈತ ಬಲಿ