
WPL 2023: ವುಮೆನ್ಸ್ ಪ್ರೀಮಿಯರ್ ಲೀಗ್ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಎಲ್ಲಾ ತಂಡಗಳು 7 ಪಂದ್ಯಗಳನ್ನು ಆಡಿದ್ದು, ಇನ್ನು ಪ್ರತಿ ತಂಡಗಳಿಗೆ ಕೇವಲ 1 ಲೀಗ್ ಪಂದ್ಯ ಮಾತ್ರ ಉಳಿದಿವೆ. ಇತ್ತ ಲೀಗ್ ಹಂತದ ಪಂದ್ಯಗಳ ಮುಕ್ತಾಯಕ್ಕೂ ಮುನ್ನವೇ ಮೂರು ತಂಡಗಳು ಪ್ಲೇಅಫ್ನಲ್ಲಿ ತಮ್ಮ ಸ್ಥಾನವನ್ನು ಖಚಿಪಡಿಸಿಕೊಂಡಿದೆ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಮೂರು ತಂಡಗಳು ಮಾತ್ರ ಮುಂದಿನ ಹಂತಕ್ಕೇರಲಿದೆ. ಇಲ್ಲಿ ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನ ಪಡೆಯುವ ತಂಡವು ನೇರವಾಗಿ ಫೈನಲ್ ಪ್ರವೇಶಿಸಲಿದೆ. ಹಾಗೆಯೇ 2ನೇ ಮತ್ತು 3ನೇ ಸ್ಥಾನ ಪಡೆಯುವ ತಂಡಗಳ ನಡುವೆ ಎಲಿಮಿನೇಟರ್ ಪಂದ್ಯ ನಡೆಯಲಿದೆ. ಇದರಲ್ಲಿ ಗೆಲ್ಲುವ ತಂಡವು ಫೈನಲ್ನಲ್ಲಿ ಮುಖಾಮುಖಿಯಾಗಲಿದೆ.
ಈಗಾಗಲೇ ಮೂರು ತಂಡಗಳು ಪಾಯಿಂಟ್ ಟೇಬಲ್ನಲ್ಲಿ ಟಾಪ್-3 ಸ್ಥಾನವನ್ನು ಭದ್ರಪಡಿಸಿಕೊಂಡಿದ್ದು, ಈ ಮೂಲಕ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಂಡಿದೆ. ಅದರಂತೆ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಪ್ಲೇಆಫ್ ಪ್ರವೇಶಿಸಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಫೈನಲ್ ರೇಸ್ನಿಂದ ಹೊರಬಿದ್ದಿವೆ.
ಮೂರು ತಂಡಗಳ ಪ್ಲೇಆಫ್ ಎಂಟ್ರಿಯ ಹೊರತಾಗಿಯೂ ಯಾರು ಎಲಿಮಿನೇಟರ್ ಪಂದ್ಯವಾಡಲಿದ್ದಾರೆ? ಯಾರು ನೇರವಾಗಿ ಫೈನಲ್ ಪ್ರವೇಶಿಸಲಿದೆ ಎಂಬುದು ಇನ್ನಷ್ಟೇ ನಿರ್ಧಾರವಾಗಬೇಕಿದೆ. ಏಕೆಂದರೆ ಮೂರು ತಂಡಗಳೂ 7 ಲೀಗ್ ಪಂದ್ಯಗಳನ್ನು ಆಡಿದ್ದು, ಇನ್ನು ಒಂದು ಪಂದ್ಯವಾಡಬೇಕಿದೆ. ಅದರಂತೆ ಲೀಗ್ ಹಂತದ ಎಲ್ಲಾ ಪಂದ್ಯಗಳ ಮುಕ್ತಾಯದ ಬಳಿಕ ಯಾವ ತಂಡ ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನ ಪಡೆಯುತ್ತದೆಯೋ, ಆ ತಂಡ ನೇರವಾಗಿ ಫೈನಲ್ಗೆ ಪ್ರವೇಶಿಸಲಿದೆ.
ಹಾಗೆಯೇ ಪಾಯಿಂಟ್ ಟೇಬಲ್ನಲ್ಲಿ 2ನೇ ಮತ್ತು 3ನೇ ಸ್ಥಾನ ಪಡೆಯುವ ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದ್ದು, ಇದರಲ್ಲಿ ಸೋಲು ತಂಡ ಟೂರ್ನಿಯಿಂದ ಹೊರಬೀಳಲಿದೆ. ಹಾಗೆಯೇ ಗೆದ್ದ ತಂಡವು ಫೈನಲ್ಗೆ ಎಂಟ್ರಿ ಕೊಡಲಿದೆ.
ಪ್ರಸ್ತುತ ಪಾಯಿಂಟ್ ಟೇಬಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಅಗ್ರಸ್ಥಾನದಲ್ಲಿದ್ದು, ಮುಂಬೈ ಇಂಡಿಯನ್ಸ್ ತಂಡವು ದ್ವಿತೀಯ ಸ್ಥಾನದಲ್ಲಿದೆ. ಹಾಗೆಯೇ ಯುಪಿ ವಾರಿಯರ್ಸ್ ತಂಡ ಮೂರನೇ ಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಯುಪಿ ವಾರಿಯರ್ಸ್ ವಿರುದ್ಧ ಆಡಲಿದ್ದು, ಈ ಪಂದ್ಯದ ಫಲಿತಾಂಶ ಅಥವಾ ಮುಂಬೈ ಇಂಡಿಯನ್ಸ್ ಹಾಗೂ ಆರ್ಸಿಬಿ ನಡುವಣ ಪಂದ್ಯದ ಫಲಿತಾಂಶದ ಬಳಿಕ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ನೇರವಾಗಿ ಫೈನಲ್ ಪ್ರವೇಶಿಸುವ ತಂಡ ಯಾವುದು ಎಂಬುದು ನಿರ್ಧಾರವಾಗಲಿದೆ.
ಪ್ರಸ್ತುತ WPL ಪಾಯಿಂಟ್ ಟೇಬಲ್ (ದಿನಾಂಕ- 20/3/2023)
ಇನ್ನು ವುಮೆನ್ಸ್ ಪ್ರೀಮಿಯರ್ ಲೀಗ್ನ ಮಾರ್ಚ್ 24 ರಂದು ನಡೆಯಲಿದ್ದು, ಫೈನಲ್ ಪಂದ್ಯ ಮಾರ್ಚ್ 26 ರಂದು ಜರುಗಲಿದೆ.